ಗಂಟೆ 11 ಆದ್ರೂ ಕೆಲಸಕ್ಕೆ ಬಾರದ ಸಿಬ್ಬಂದಿ

Team Udayavani, Apr 4, 2017, 11:34 AM IST

bbmp.jpg

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ವಿವಿಧ ವಿಭಾಗಗಳಲ್ಲಿ ಸೋಮವಾರ ಮೇಯರ್‌ ಪದ್ಮಾವತಿ ಅವರು ಬೆಳಿಗ್ಗೆ ಪಾಲಿಕೆ ಸಿಬ್ಬಂದಿ ಹಾಜರಾತಿ ತಪಾಸಣೆ ನಡೆಸುವಾಗ ಖಾಲಿ ಕುರ್ಚಿಗಳು ಅವರಿಗೆ ಸ್ವಾಗತ ಕೋರಿದವು!

ಹೌದು, ಬಿಬಿಎಂಪಿ ಅಕಾರಿಗಳು ಹಾಗೂ ನೌಕರರ ಹಾಜರಾತಿ ಪರಿಶೀಲಿಸಲು ಸೋಮವಾರ ಬೆಳಗ್ಗೆ 10.30ಕ್ಕೆ ಮೇಯರ್‌, ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಹಣಕಾಸು ವಿಭಾಗದ ವಿಶೇಷ ಆಯುಕ್ತರ ಕಚೇರಿ, ಮುಖ್ಯ ಲೆಕ್ಕಾಕಾರಿಗಳ ಕಚೇರಿ, ಆಸ್ತಿ ವಿಭಾಗದ ಜಂಟಿ ಆಯುಕ್ತರ ಕಚೇರಿ, ಕಂದಾಯ ವಿಭಾಗದ ಜಂಟಿ ಆಯುಕ್ತರ ಕಚೇರಿ, ಟಿವಿಸಿಸಿ ಕಚೇರಿಗಳು ಸೇರಿದಂತೆ ಪಾಲಿಕೆಯ 10ಕ್ಕೂ ಹೆಚ್ಚು ವಿಭಾಗಗಳ ಕಚೇರಿಗಳಿಗೆ ಭೇಟಿ ನೀಡಿ ಹಾಜರಾತಿ ಬಗ್ಗೆ ತಪಾಸಣೆ ನಡೆಸಿದರು. 

ಬೆಳಗ್ಗೆ 11.30 ಆದರೂ, ಶೇ.40ರಷ್ಟು ಅಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿರುವುದ ಕಂಡು ಕೋಪಗೊಂಡ ಮೇಯರ್‌ ಪದ್ಮಾವತಿ, ಕಚೇರಿಯಲ್ಲಿದ್ದ ಹಿರಿಯ ಅಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಎಲ್ಲ ಕಚೇರಿಗಳಲ್ಲಿನ ಹಾಜರಾತಿ ಪುಸ್ತಕಗಳನ್ನು ವಶಕ್ಕೆ ಪಡೆದುಕೊಂಡು ಸಮಯ ಪಾಲನೆ ಮಾಡದ ಅಕಾರಿಗಳು ಮತ್ತು ಸಿಬ್ಬಂದಿಗೆ ಕೂಡಲೇ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿ, ಗೈರು ಹಾಜರಾದವರಿಗೆ ವೇತನ ರಹಿತ ರಜೆ ನೀಡುವಂತೆ ಸಂಬಂಸಿದ ಅಕಾರಿಗಳಿಗೆ ಸೂಚಿಸಿದರು. 

“ನಾನು ಮತ್ತೆ ಯಾವಾಗ ದಿಢೀರ್‌ ಪರಿಶೀಲನೆ ನಡೆಸುತ್ತೇನೋ ಗೊತ್ತಿಲ್ಲ. ಆಗಲೂ ಅಕಾರಿಗಳು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಿರಾಗದಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು. 

ಪರಿಶೀಲನೆ ವೇಳೆ ಹಾಜರಾತಿಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅಳವಡಿಸಿರುವ 5 ಬಯೋಮೆಟ್ರಿಕ್‌ ಯಂತ್ರಗಳಲ್ಲಿ ಕೇವಲ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿರುವುದನ್ನು ಕಂಡು ಮತ್ತಷ್ಟು ಕೆಂಡಾಮಂಡಲರಾದ ಮೇಯರ್‌, ಪಾಲಿಕೆಯ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಅಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೂಡಲೇ ಬಯೋ ಮೆಟ್ರಿಕ್‌ ಯಂತ್ರಗಳನ್ನು ದುರಸ್ತಿಪಡಿಸುವಂತೆ ಮತ್ತು ಸಿಬ್ಬಂದಿಗಳು ಬಯೋಮೆಟ್ರಿಕ್‌ ಬಳಕೆಗೆ ಮುಂದಾಗದಿದ್ದರೆ ಅಂತಹವರಿಗೆ ಗೈರು ಎಂದು ಪರಿಗಣಿಸುವಂತೆ ಹಿರಿಯ ಅಕಾರಿಗಳಿಗೆ ಸೂಚಿಸಿದರು. 

ಧೂಳು ಹಿಡಿಯುತ್ತಿರುವ ಕಡತಗಳು!
ಮೇಯರ್‌ ಪಾಲಿಕೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸುವ ವೇಳೆ ಹಲವಾರು ಕಡತಗಳು ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿತು. ಇದರಿಂದ ಸಿಡಿಮಿಡಿಗೊಂಡ ಮಹಾಪೌರರು ಕಡತಗಳನ್ನು ಕೂಡಲೇ ವಿಲೇವಾರಿ ಮಾಡಲು ನಿಮಗೇನು ಕಷ್ಟ? ಕಡತಗಳ ನಿರ್ವಹಣೆ ಮಾಡಲು ಸಾಧ್ಯವಾಗದಿದ್ದರೆ ಸಾರ್ವಜನಿಕರ ಸೇವೆ ಹೇಗೆ ಮಾಡುತ್ತೀರಾ? ಸಿಬ್ಬಂದಿಗಳು ಮೊದಲು ತಮ್ಮ ಕರ್ತವ್ಯ ಸ್ಥಳವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೇಯರ್‌, ಆಯುಕ್ತರು ಮತ್ತು ವಿಶೇಷ ಆಯುಕ್ತರು ನಿತ್ಯ ಬರುವಂತಹ ಕೇಂದ್ರ ಕಚೇರಿಯಲ್ಲಿಯೇ ಅಕಾರಿಗಳು ಮತ್ತು ನೌಕರರು ಸಮಯಕ್ಕೆ ಸರಿಯಾಗಿ ಹಾಜರಾಗದಿದ್ದರೆ, ವಲಯ ಕಚೇರಿಗಳಲ್ಲಿ ಇನ್ಯಾವ ಪರಿಸ್ಥಿತಿ ಇರುತ್ತದೆ ಎಂದು ಊಹೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗೈರು ಹಾಜರಾಗಿರುವ ಎಲ್ಲ ಸಿಬ್ಬಂದಿಗೆ ಶೋಕಾಸ್‌ ನೋಟಿಸ್‌ ನೀಡುವಂತೆ ಅಕಾರಿಗಳಿಗೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇದೇ ನಿರ್ಲಕ್ಷ್ಯ ಮುಂದುವರಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. 
-ಜಿ.ಪದ್ಮಾವತಿ, ಮೇಯರ್‌ 

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.