ಮುಂದುವರಿದ ಗೀತಾವಿಷ್ಣು ವಿಚಾರಣೆ
Team Udayavani, Oct 10, 2017, 11:20 AM IST
ಬೆಂಗಳೂರು: ಮದ್ಯ ಸೇವಿಸಿ ರಸ್ತೆ ಅಪಘಾತವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೀತಾವಿಷ್ಣು, ಆತನ ಸ್ನೇಹಿತರಾದ ಪ್ರಣಾಮ್ ದೇವರಾಜ್, ಫೈಜಲ್, ಜುನೈದ್ ಸೋಮವಾರ ಮತ್ತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರು ನಾಲ್ವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಇದರೊಂದಿಗೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಗೀತಾವಿಷ್ಣುನನ್ನು ಪೊಲೀಸರ ಕಣ್ಗಾವಾಲಿನ ಮಧ್ಯೆಯೂ ಆಸ್ಪತ್ರೆಯಿಂದ ಪರಾರಿಯಾಗಲು ಸಹಕರಿಸಿದ ಆರೋಪದ ಮೇರೆಗೆ ಮಲ್ಯ ಆಸ್ಪತ್ರೆಯ ಐವರು ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಆದರೆ, ಸಿಬ್ಬಂದಿ ಹೇಳುವ ಪ್ರಕಾರ, ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಸಹಾಯ ಮಾಡಿದ್ದೇವೆ ಎಂದಿದ್ದಾರೆ.ಈ ಸಂಬಂಧ ಮಂಗಳವಾರವೂ ಕೂಡ ಕೆಲ ಸಿಬ್ಬಂದಿಯನ್ನು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೆ.28ರಂದು ನಗರದ ಸೌತ್ ಎಂಡ್ ವೃತ್ತದಲ್ಲಿ ಗೀತಾ ವಿಷ್ಣು ಅಪಘಾತ ಎಸಗಿ ನಂತರ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ವಿಷ್ಣು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಹೋದರಿ ಸಹಾಯದಿಂದ ಪರಾರಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.