ಬೈಸಿಕಲ್ ಸಂಚಾರಕ್ಕೆ ಆದ್ಯತೆ ನೀಡಲು ಸಲಹೆ
Team Udayavani, Jun 27, 2017, 11:23 AM IST
ಬೆಂಗಳೂರು: ಜಗತ್ತಿನಲ್ಲಿ ಹವಾಮಾನ ವೈಪರೀತ್ಯ ತಡೆಗಟ್ಟುವ ಸಲುವಾಗಿ ನಗರಗಳಲ್ಲಿ ಮೋಟಾರು ವಾಹನಗಳ ಬದಲಾಗಿ ಬೈಸಿಕಲ್‌ಗಳನ್ನೇ ಹೆಚ್ಚಾಗಿ ಬಳಸುವಂತೆ ಆಂದೋಲನ ರೀತಿಯಲ್ಲಿ ಜಾಗೃತಿ ಮೂಡಿಸಲು ಜಾಗತಿಕ ಮಟ್ಟದ “ಸಿ40 ಸಿಟಿಸ್ ಅಸೋಸಿಯೇಷನ್’ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇತ್ತೀಚೆಗೆ ಡೆನ್ಮಾರ್ಕ್‌ನ ಕೋಪನ್‌ಹೆಗನ್‌ನಲ್ಲಿ ಸಿ40 ಸಿಟಿಸ್ ಅಸೋಸಿಯೇಷನ್‌ನ ಸದಸ್ಯ ನಗರಗಳ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಪಾಲ್ಗೊಂಡಿದ್ದರು. ಸಭೆಯಲ್ಲಿ ವಿಶ್ವದಾದ್ಯಂತ ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ತಡೆಗೆ ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಚರ್ಚೆ ನಡೆಯಿತು.
ಸಭೆ ಕುರಿತು ಮಾಹಿತಿ ನೀಡಿದ ಮಂಜುನಾಥ ಪ್ರಸಾದ್, ಸಭೆಯಲ್ಲಿ ಮಾಲಿನ್ಯ ಪ್ರಮಾಣ ತಡೆಗೆ ಸದಸ್ಯ 40 ನಗರಗಳು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು. ಬೆಂಗಳೂರಿನಲ್ಲಿಯೂ ಪಾದಚಾರಿ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಪಾದಚಾರಿ ಸ್ನೇಹಿ ವ್ಯವಸ್ಥೆ ಕಲ್ಪಿಸಿರುವುದಕ್ಕೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಯಿತು ಎಂದು ತಿಳಿಸಿದರು.
ನಗರದಲ್ಲಿ ಮಾಲಿನ್ಯ ಪ್ರಮಾಣ ತಡೆಗೆ ಮೋಟಾರು ವಾಹನಗಳ ಬದಲಿಗೆ, ಬೈಸಿಕಲ್‌ಗಳಿಗೆ ಪ್ರೋತ್ಸಾಹ ನೀಡುವ ಬಗ್ಗೆ ಸಲಹೆಯನ್ನು ಸಭೆಯಲ್ಲಿ ನೀಡಲಾಯಿತು. ಆ ಹಿನ್ನೆಲೆಯಲ್ಲಿ ಸಮೂಹ ಸಾರಿಗೆ ವ್ಯವಸ್ಥೆಗೆ ಮಹತ್ವ ನೀಡಬೇಕಿದ್ದು, ಬೈಸಿಕಲ್‌ಗಳ ಸಂಖ್ಯೆ ಹೆಚ್ಚಿಸಲು ನಗರದಲ್ಲಿ ಪ್ರತ್ಯೇಕ ಬೈಸಿಕಲ್ ಪಥ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ ಮೊದಲ ಹಂತದ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವುದರಿಂದ ಮಾಲಿನ್ಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಲಿದ್ದು, ಇದರೊಂದಿಗೆ ಸಮೂಹ ಸಾರಿಗೆ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಕೆಲ ಸಂಸ್ಥೆಗಳು ನಗರದಲ್ಲಿ ಬೈಕ್ ಶೇರಿಂಗ್ ವ್ಯವಸ್ಥೆ ತರುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಸದಸ್ಯ ನಗರಗಳ ಪೈಕಿ ಮಾಲಿನ್ಯ ನಿಯಂತ್ರಣಕ್ಕೆ ಅತ್ಯುತ್ತಮ ಕ್ರಮಗಳನ್ನು ಅನುಸರಿಸುತ್ತಿರುವ ಮಾದರಿಗಳನ್ನು ಉಳಿದವರು ಅನುಸರಿಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಹಾಗೆಯೇ ಡೆನ್ಮಾರ್ಕ್‌ನ ಹಲವು ನಗರಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಬೈಸಿಕಲ್ ಹಾಗೂ ನಡಿಗೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದ್ದು, ಶೇ.63ರಷ್ಟು ಜನ ಈ ಬೈಸಿಕಲ್ ಬಳಸುತ್ತಿದ್ದಾರೆ ಎಂದು ಅಲ್ಲಿನ ಪ್ರತಿನಿಧಿಗಳು ತಿಳಿಸಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.