Advocate Jeeva case: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಜಾಮೀನು ಅರ್ಜಿ ವಜಾ

Team Udayavani, Dec 12, 2024, 12:12 PM IST

Advocate Jeeva case: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಜಾಮೀನು ಅರ್ಜಿ ವಜಾ

ಬೆಂಗಳೂರು: ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 23ನೇ ಸಿಸಿಎಚ್‌ ನ್ಯಾಯಾಲಯ ತಿರಸ್ಕರಿಸಿದೆ.

ಭೋವಿ ನಿಗಮದಲ್ಲಿ ಫ‌ಲಾನುಭವಿಗಳ ಸೋಗಿನಲ್ಲಿ ಕೋಟ್ಯಂತರ ರೂ. ಸಾಲ ಪಡೆದ ಅವ್ಯವಹಾರ ಸಂಬಂಧ ಕಳೆದ ಎರಡು ವರ್ಷಗಳಿಂದ ಸಿಐಡಿಯು ಪ್ರತ್ಯೇಕ ನಾಲ್ಕು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಪ್ರಕರಣವೊಂದರಲ್ಲಿ ತನಿಖಾಧಿಕಾರಿ ಯಾಗಿದ್ದ ಸಿಐಡಿಯ ಡಿವೈಎಸ್ಪಿ ಕನಕಲಕ್ಷ್ಮೀ ವಿಚಾರಣೆ ನೆಪದಲ್ಲಿ ತನ್ನ ಬಳಿ 25 ಲಕ್ಷ ರೂ.ಗೆ ಬೇಡಿಕೆಯಿಟ್ಟು ಮಾನಸಿಕ ಕಿರುಕುಳ ನೀಡಿದ್ದರು. ಜತೆಗೆ ವಿವಸ್ತ್ರಗೊಳಿಸಿ ಅಮಾನವೀ ಯವಾಗಿ ನಡೆದುಕೊಂಡಿದ್ದರು ಎನ್ನಲಾಗಿದೆ. ಅದರಿಂದ ಮನನೊಂದ ಜೀವಾ ನ.22ರಂದು ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮೊದಲು ಡೆತ್‌ನೋಟ್‌ ನಲ್ಲಿ ಡಿವೈಎಸ್ಪಿ ಹೆಸರು ಉಲ್ಲೇಖೀಸಿದ್ದರು.

ಈ ಸಂಬಂಧ ಮೃತ ಜೀವಾ ಸಹೋದರಿ ಸಂಗೀತಾ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್‌ ಆಯುಕ್ತ ದಯಾನಂದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.ಮತ್ತೂಂದೆಡೆ ಸಿಬಿಐ ತನಿಖೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಪ್ರತ್ಯೇಕ ಎಸ್‌ಐಟಿ ರಚಿಸಿತ್ತು. ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ, ಸಿಸಿಬಿ ಡಿಸಿಪಿ ಅಕ್ಷಯ್‌ ಮಚೀಂದ್ರ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿ ಕಾರಿ ನಿಶಾ ಜೇಮ್ಸ್ ಸೇರಿ ಮೂವರು ಅಧಿಕಾರಿಗಳ ವಿಶೇಷ ತಂಡ ತನಿಖೆ ನಡೆಸು ತ್ತಿದೆ. ಈ ಬೆನ್ನಲ್ಲೇ ಕನಕಲಕ್ಷ್ಮೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ,ವಿಚಾರಣೆ ನಡೆಸಿದ ಕೋರ್ಟ್‌, ಪ್ರಕರಣ ಗಂಭೀರ ಸ್ವರೂಪದಾದ್ದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ.

ಟಾಪ್ ನ್ಯೂಸ್

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

siddaramaiah

Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ

High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ

Theft Case: ಕೆಲಸಕಿದ್ಕ ಹೋಟೆಲ್‌ನಲ್ಲಿ ಕದ್ದ ಮ್ಯಾನೇಜರ್‌

Theft Case: ಕೆಲಸಕಿದ್ಕ ಹೋಟೆಲ್‌ನಲ್ಲಿ ಕದ್ದ ಮ್ಯಾನೇಜರ್‌

Bengaluru: ಸಿಲಿಂಡರ್‌ ಸ್ಫೋ*ಟ; ಮಗು ಸೇರಿ ಐವರಿಗೆ ಗಾಯ

Bengaluru: ಸಿಲಿಂಡರ್‌ ಸ್ಫೋ*ಟ; ಮಗು ಸೇರಿ ಐವರಿಗೆ ಗಾಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.