ಮಾಧ್ಯಮ ನಿಯಂತ್ರಣ ವಿರುದ್ಧ ಸಿಡಿದ ವಾಟಾಳ್
Team Udayavani, Mar 31, 2017, 12:06 PM IST
ಬೆಂಗಳೂರು: ಮಾಧ್ಯಮಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಂಟಿ ಸದನ ಸಮಿತಿ ರಚನೆ ಮಾಡಿರುವ ಕ್ರಮವನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.
ವಿಧಾನಸೌಧದಲ್ಲಿರುವ ಸ್ಪೀಕರ್ ಕೆ.ಬಿ.ಕೋಳಿವಾಡ ಕಚೇರಿ ಎದುರು ಕಪ್ಪು ಬಾವುಟ ಪ್ರದರ್ಶಿಸಿದ ಅವರು, ಮಾಧ್ಯಮಗಳನ್ನು ನಿಯಂತ್ರಿಸಲು ಮುಂದಾಗಿರುವ ಕ್ರಮ ಸರಿಯಲ್ಲ. ಕೂಡಲೆ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
“ಮಾಧ್ಯಮಗಳ ವಿರುದ್ಧ ಸದನ ಸಮಿತಿ ರಚನೆ ಸರಿಯಲ್ಲ. ದೃಶ್ಯಮಾಧ್ಯಮಗಳು ಬಂದ ನಂತರ ಹಲವಾರು ಬದಲಾವಣೆಗಳು ಆಗಿವೆ. ಸದನದಲ್ಲಿ ಸದಸ್ಯರು ಹಾಜರಾಗದಿರುವುದನ್ನು ಮಾಧ್ಯಮಗಳು ತೋರಿಸುವುದು ತಪ್ಪೇ,” ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರಿಗೆ ಸದನ ಸಮಿತಿ ರಚನೆ ನಿರ್ಣಯ ವಾಪಸ್ ಪಡೆಯುವಂತೆ ಒತ್ತಾಯಿಸಿ ಮನವಿ ನೀಡಿದ ವಾಟಾಳ್ ನಾಗರಾಜ್, ಸ್ಪೀಕರ್ ಜತೆ ವಾಗ್ವಾದಕ್ಕೆ ಇಳಿದರು. ನಂತರ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.