ಬಿತ್ತನೆ ಬೀಜದ ಕೊರತೆ ಇಲ್ಲ
Team Udayavani, Jun 15, 2018, 6:25 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ಡಿಎಪಿ ರಸಗೊಬ್ಬರದ ಸರಬರಾಜಿನಲ್ಲಿ ಕೊರತೆ ಇದ್ದು, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್. ಎಚ್.ಶಿವಶಂಕರೆಡ್ಡಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ 21.87 ಲಕ್ಷ ಟನ್
ವಿವಿಧ ಗ್ರೇಡ್ ರಸಗೊಬ್ಬರಗಳ ಬೇಡಿಕೆಯಿದೆ. ಜೂನ್ 13ರವರೆಗೆ 7.31 ಲಕ್ಷ ಮೆಟ್ರಿಕ್ ಟನ್ ಸರಬರಾಜು
ಮಾಡಲಾಗಿದ್ದು, 6.21 ಲಕ್ಷ ಟನ್‌ಗಳ ದಾಸ್ತಾನು ಲಭ್ಯತೆ ಇದೆ. ಈ ಪೈಕಿ ಡಿಎಪಿ ರಸಗೊಬ್ಬರ ಕೊರತೆ ಇದ್ದು, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಮುಂಗಾರು ಹಂಗಾಮಿಗೆ 8.60 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, ರಾಜ್ಯದ ಬೀಜ ಉತ್ಪಾದನಾ ಸಂಸ್ಥೆಗಳಿಂದ ಪೂರೈಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜೂನ್ 13 ರವರೆಗೆ 1.30 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜವನ್ನು ರಿಯಾಯಿತಿಯಲ್ಲಿ ವಿತರಿಸಲಾಗಿದೆ. ರಾಜ್ಯದಲ್ಲಿ 103 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶವಿದ್ದು ಶೇ.65ರಷ್ಟು
ಮಳೆಯಾಶ್ರಿತ, ಶೇ.35ರಷ್ಟು ನೀರಾವರಿ ಕೃಷಿ ಪ್ರದೇಶವಾಗಿದೆ. 78 ಲಕ್ಷ ರೈತ ಕುಟುಂಬಗಳು ಕೃಷಿಯಲ್ಲಿ ತೊಡಗಿವೆ. ರಾಜ್ಯದಲ್ಲಿ ಬಿತ್ತನೆ ಕಾರ್ಯವೂ ಚುರುಕುಗೊಂಡಿದ್ದು 74.69 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ 9.44 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಜೂನ್ ಎರಡನೇ ವಾರದ ಅಂತ್ಯಕ್ಕೆ 13.90 ಲಕ್ಷ ಹೆಕ್ಟೇರ್ ಬಿತ್ತನೆ ಪೂರ್ಣಗೊಳ್ಳಲಿದೆ ಎಂದರು.
ರಾಜ್ಯದಲ್ಲಿ ಪೂರ್ವ ಮುಂಗಾರು ಅವಧಿಯಲ್ಲಿ (ಏಪ್ರಿಲ್-ಮೇ) ಸಾಮಾನ್ಯ ಮಳೆ 118 ಮಿ.ಮೀ.ಗೆ ಪ್ರತಿಯಾಗಿ 171 ಮಿ.ಮೀ. ಮಳೆ ಆಗಿದೆ. ನೈಋತ್ಯ ಮಾರುತ ಮಳೆಯು ಮೇ 30ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಪ್ರವೇಶಿಸಿ ಜೂ.8 ರಂದು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಆವರಿಸಿದೆ ಎಂದು ವಿವರಿಸಿದರು
ಕಳೆದ ಐದು ವರ್ಷಗಳಲ್ಲಿ ರಾಜ್ಯವು ನಾಲ್ಕು ವರ್ಷ ಬರಗಾಲಕ್ಕೆ ತುತ್ತಾಗಿದ್ದು 2010-11ರಲ್ಲಿ ಆಹಾರ ಉತ್ಪಾದನೆ ಗರಿಷ್ಠ 137.91 ಲಕ್ಷ ಮೆಟ್ರಿಕ್ ಟನ್ ಆಗಿತ್ತು. 2015-16 ರಲ್ಲಿ ಆಹಾರ ಉತ್ಪಾದನೆಯು ಕನಿಷ್ಠ 96.44 ಲಕ್ಷ ಮೆಟ್ರಿಕ್ ಟನ್‌ಗೆ ಇಳಿದು 2017-18 ನೇ ಸಾಲಿನಲ್ಲಿ ಚೇತರಿಸಿಕೊಂಡು 111.78 ಲಕ್ಷ ಮೆಟ್ರಿಕ್ ಟನ್‌ಗಳಷ್ಟಾಗಿದೆ. ರಾಜ್ಯದ ದಾವಣಗೆರೆ, ತುಮಕೂರು, ಬೆಳಗಾವಿ, ಮೈಸೂರು ಮತ್ತು ಚಾಮರಾಜನಗರ ಸೇರಿ ಐದು ಜಿಲ್ಲೆಗಳಲ್ಲಿ 1686.44 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದರು.
ವಿಶ್ವಬ್ಯಾಂಕ್ ನೆರವಿನ “ಸುಜಲಾ’ ಯೋಜನೆಯಡಿ ರಾಜ್ಯದ 11 ಜಿಲ್ಲೆಗಳ 2,531 ಕಿರು ಜಲಾನಯನ ಪ್ರದೇಶಗಳ
ಮಳೆಯಾಶ್ರಿತ ಪ್ರದೇಶದಲ್ಲಿ ಭೂಸಂಪನ್ಮೂಲ ಹಾಗೂ ಜಲಸಂಪನ್ಮೂಲ ಸಮೀಕ್ಷೆ ನಡೆಸಲಾಗಿದೆ. ಯೋಜನೆಯ ಅನುಷ್ಟಾನಕ್ಕೆ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳ ಸಹಭಾಗಿತ್ವ ಪಡೆಯಲಾಗುವುದು ಎಂದು ಹೇಳಿದರು.
69 ರೈತರು ಆತ್ಮಹತ್ಯೆ
ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಸಾಲಭಾದೆಯಿಂದ 69 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡದಲ್ಲಿ ಅತಿ ಹೆಚ್ಚು 10, ಬೆಳಗಾವಿಯಲ್ಲಿ 9, ಹಾವೇರಿಯಲ್ಲಿ 7, ರಾಯಚೂರಿನಲ್ಲಿ 4 ಹಾಗೂ ಹಾಸನದಲ್ಲಿ 4 ರೈತರು ಸಾವಿಗೆ ಶರಣಾಗಿದ್ದಾರೆ. ಎರಡು ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ. ಎರಡು ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. 13 ಪ್ರಕರಣಗಳಲ್ಲಿ ಎಫ್ಎಸ್‌ಎಲ್ ವರದಿಗಾಗಿ ಕಾಯಲಾಗುತ್ತಿದೆ. 49 ಪ್ರಕರಣಗಳು ವಿವಿಧ ಕಾರಣಕ್ಕೆ ಇನ್ನೂ ಇತ್ಯರ್ಥಗೊಂಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.