Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Team Udayavani, Dec 24, 2024, 7:15 PM IST
ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ನಿಗದಿಪಡಿಸಲಾಗಿದೆ.
ರಾಜ್ಯದಲ್ಲಿ ತೊಗರಿ ಬೆಳೆಯನ್ನು 15.02 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ.
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ಖರೀದಿಗೆ ಅನುಮತಿ ನೀಡಿದೆ. ಪ್ರಸ್ತುತ ಕಡಲೆಯನ್ನು 10.03 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 6.63 ಲಕ್ಷ ಮೆಟ್ರಿಕ್‌ಟನ್ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ.
ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೆಂಬಲ ಬೆಲೆಯಲ್ಲಿ 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಾಗುವುದು. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.