ಆ. 15ಕ್ಕೆ125 ಕಡೆಯಷ್ಟೇ ಇಂದಿರಾ ಕ್ಯಾಂಟೀನ್ ಆರಂಭ
Team Udayavani, Jul 22, 2017, 6:15 AM IST
ಬೆಂಗಳೂರು: ಬಿಬಿಎಂಪಿಯ 198 ವಾರ್ಡ್ಗಳಲ್ಲಿ ಆ. 15ರಂದು ಏಕಕಾಲಕ್ಕೆ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಘೋಷಿಸಿದ್ದ ಸರಕಾರ ಇದೀಗ ತಾಂತ್ರಿಕ ಕಾರಣ, ವಿವಾದಗಳ ಹಿನ್ನೆಲೆಯಲ್ಲಿ ಆ. 15ಕ್ಕೆ ಕೇವಲ 125 ವಾರ್ಡ್ಗಳಲ್ಲಷ್ಟೇ ಕ್ಯಾಂಟೀನ್ ಶುರು ಮಾಡುವುದಾಗಿ ಪ್ರಕಟಿಸಿದೆ. ಇದರಿಂದ ಬಿಬಿಎಂಪಿಯ ಎಲ್ಲ 198 ವಾರ್ಡ್ಗಳಲ್ಲಿ ಏಕಕಾಲದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿ ಅಗ್ಗದ ದರದಲ್ಲಿ ಕಡುಬಡವರಿಗೆ ಊಟ ಉಪಾಹಾರ ಒದಗಿಸುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಅಲ್ಪ ಹಿನ್ನಡೆಯಾದಂತಾಗಿದೆ.
ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ ಬೆನ್ನಲ್ಲೇ ಜೂನ್ ಮೊದಲ ವಾರ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಹೇಳಿದ್ದರು. ತಾಂತ್ರಿಕ ಸಮಸ್ಯೆ ಎದುರಾದ ಅನಂತರ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಉದ್ಘಾಟಿಸುವ ಘೋಷಣೆ ಮಾಡಲಾಗಿತ್ತು. ಆದರೆ ಈಗ ಎರಡು ಕಂತುಗಳಲ್ಲಿ ಕ್ಯಾಂಟೀನ್ ಆರಂಭಿಸಲು ಸರಕಾರ ನಿರ್ಧರಿಸಿದೆ. ಯೋಜನೆ ಜಾರಿ ವಿಳಂಬಕ್ಕೆ ಕೆಲವು ತಾಂತ್ರಿಕ ಅಡಚಣೆಗಳು ಕಾರಣ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಇಂದಿರಾ ಕ್ಯಾಂಟೀನ್ ಯೋಜನೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ ಅವರು, 125 ವಾರ್ಡ್ಗಳಲ್ಲಿ ಆ. 15ರಂದು ಇಂದಿರಾ ಕ್ಯಾಂಟೀನ್ ಕಾರ್ಯಾರಂಭವಾಗಲಿದ್ದು, ಉಳಿದೆಡೆ ಅ. 2ರಂದು ಕ್ಯಾಂಟೀನ್ ಆರಂಭಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.