ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಅಹೋರಾತ್ರಿ ಧರಣಿ ಆರಂಭ
Team Udayavani, Sep 7, 2017, 11:42 AM IST
ಬೆಂಗಳೂರು: ಶೈಕ್ಷಣಿಕ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಶಿಕ್ಷಕರು, ಉಪನ್ಯಾಸಕರು, ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಬಸವರಾಜ ಹೊರಟ್ಟಿ, ಪುಟ್ಟಣ್ಣ, ರಮೇಶ್‌ಬಾಬು, ಶ್ರೀಕಂಠೆಗೌಡ, ಶರವಣ, ಬಿಜೆಪಿಯ ಅರುಣ್ ಶಹಾಪುರ, ಹನುಮಂತಪ್ಪ ನಿರಾಣಿ, ಗಣೇಶ್ ಕಾರ್ಣಿಕ್, ಕಾಂಗ್ರೆಸ್‌ನ ಅಮರನಾಥ ಪಾಟೀಲ್, ಸಂಕನೂರು ಹಾಗೂ ಶರಣಪ್ಪ ಮಟ್ಟೂರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್, ಧರಣಿ ನಿರತ ರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದರು. 15 ದಿನಗಳಲ್ಲಿ ಸಭೆ ಕರೆದು ಆಥಿಕ ಮತ್ತು ಕಾನೂನು ವಿಚಾರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆದರೆ, ಇದಕ್ಕೆ ಒಪ್ಪದ ಧರಣಿ ನಿರತರು ಮುಖ್ಯಮಂತ್ರಿ ಸಭೆ ಕರೆಯುವವರೆಗೂ ಧರಣಿ ಮುಂದುವರಿಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.