ದೆಹಲಿಯಲ್ಲಿಂದು ಎಐಸಿಸಿ ಕಾರ್ಯಕಾರಿಣಿ
Team Udayavani, Aug 4, 2018, 6:50 AM IST
ಬೆಂಗಳೂರು: ಲೋಕಸಭೆಗೆ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂಬ ಮಾತುಗಳ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಎರಡನೇ ಎಐಸಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡುರಾವ್ ಸಹ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವುದು, ಸಮಾನ ಮನಸ್ಕ ಪಕ್ಷಗಳ ಜತೆ ಮೈತ್ರಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ದೆಹಲಿಗೆ ತೆರಳಿದರು. ಕಾರ್ಯಕಾರಿಣಿ ಸಭೆಗೆ ಮುನ್ನ ಗುಲಾಂ ನಬಿ ಆಜಾದ್ ಹಾಗೂ ಅಹಮದ್ ಪಟೇಲ್ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.