ಪ್ರಿಯಕರನ ಕಾಣಲು ದುಬೈನಿಂದ ಬೆಂಗಳೂರಿಗೆ ಬಂದ ಗಗನಸಖೀ ನಾಲ್ಕನೇ ಮಹಡಿಯಿಂದ ಬಿದ್ದು ಮೃತ್ಯು

Team Udayavani, Mar 12, 2023, 5:22 PM IST

air hostess who came to Bangalore from Dubai to meet her lover expired

ಬೆಂಗಳೂರು: ದುಬೈನಿಂದ ಪ್ರಿಯಕರನನ್ನು ನೋಡಲು ಬೆಂಗಳೂರಿಗೆ ಬಂದಿದ್ದ ಗಗನಸಖೀಯೊಬ್ಬರು 4ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶ ಮೂಲದ ಅರ್ಚನಾ ಧಿಮಾನ್‌ (28) ಮೃತ ಗಗನಸಖೀ. ಈ ಸಂಬಂಧ ಕೇರಳದ ಕಾಸರಗೊಡು ಮೂಲದ ಆದೇಶ್‌ (30) ಎಂಬಾತನನ್ನು ವಶಕ್ಕೆ ಪಡೆಯ ಲಾಗಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ ನೋಟ್‌ ಪತ್ತೆಯಾಗಿಲ್ಲ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಖಾಸಗಿ ಕಂಪನಿ ಯಲ್ಲಿ ಕೆಲಸ ಮಾಡುತ್ತಿದ್ದ ಆದೇಶ್‌ ಮತ್ತು ದುಬೈನಲ್ಲಿ ಖಾಸಗಿ ಏರ್‌ ಲೈನ್ಸ್‌ನಲ್ಲಿ ಗಗನಸಖೀಯಾಗಿದ್ದ ಅರ್ಚನಾ ಧಿಮಾನ್‌ ಡೇಟಿಂಗ್‌ ಆ್ಯಪ್‌ ಮೂಲಕ ಪರಸ್ಪರ ಪರಿಚಯವಾಗಿದ್ದು, 6 ತಿಂಗಳಿಂದ ಇಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಹಿಂದೆಯೂ ಪ್ರಿಯಕರ ಆದೇಶ್‌ನನ್ನು ನೋಡಲು ಅರ್ಚನಾ ಬೆಂಗಳೂರಿಗೆ ಬಂದಿದ್ದಳು. ಈ ಮಧ್ಯೆ ಆಗಾಗ್ಗೆ ಇಬ್ಬರ ನಡುವೆ ಸಣ್ಣ-ಪುಟ್ಟ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಆದರೂ 4 ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅರ್ಚನಾ, ಕೋರಮಂಗಲದ 8ನೇ ಬ್ಲಾಕ್‌ನಲ್ಲಿರುವ ಅಪಾರ್ಟ್‌ ಮೆಂಟ್‌ನ 4ನೇ ಮಹಡಿಯಲ್ಲಿರುವ ಆದೇಶ್‌ ಮನೆಯಲ್ಲಿ ವಾಸವಾಗಿದ್ದರು.

ಶುಕ್ರವಾರ ಇಬ್ಬರು ಮಾಲ್‌ವೊಂದರಲ್ಲಿ ಸಿನಿಮಾಗೆ ಹೋಗಿದ್ದರು. ತಡರಾತ್ರಿ ಮನೆಗೆ ಬಂದು ಪಾರ್ಟಿ ಕೂಡ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಮತ್ತೆ ಜಗಳ ಆರಂಭವಾಗಿದೆ.

ಆಗ ಅರ್ಚನಾ 4ನೇ ಮಹಡಿಯಿಂದ ಬಿದ್ದಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ಗಳು ಹಾಗೂ ಸ್ಥಳೀಯರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಶನಿವಾರ ಮುಂಜಾನೆ ಮೃತಪಟ್ಟಿದ್ದಾಳೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಡೆತ್‌ನೋಟ್‌ ಕೂಡ ಪತ್ತೆಯಾಗಿಲ್ಲ. ಆರೋಪಿ ಆದೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.