Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ


Team Udayavani, Sep 21, 2024, 11:35 AM IST

Alert Cop Averts Mishap After Bmtc Bus Driver  got chest pain

ಬೆಂಗಳೂರು: ಶಾಂತಿನಗರದ ಬಳಿ ಬಿಎಂಟಿಸಿ ಬಸ್‌ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಂಚಾರ ವಿಭಾಗದ ಎಎಸ್‌ಐವೊಬ್ಬರು ಕೂಡಲೇ ಸಿನಿಮೀಯ ಶೈಲಿಯಲ್ಲಿ ಬಸ್‌ನೊಳಗೆ ಹೋಗಿ ಹ್ಯಾಂಡ್‌ ಬ್ರೇಕ್‌ ಹಾಕಿ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಹಲಸೂರು ಗೇಟ್‌ ಸಂಚಾರ ಠಾಣೆಯ ಎಎಸ್‌ಐ ರಘುಕುಮಾರ್‌ ಅನಾಹುತ ತಪ್ಪಿಸಿದವರು. ಬುಧವಾರ ಮಧ್ಯಾಹ್ನ 3.50ರ ಸುಮಾರಿಗೆ ಶಾಂತಿನಗರದ ಜೋಡಿರಸ್ತೆಯಲ್ಲಿ ಚಾಲಕ ವೀರೇಶ್‌ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಲಾಯಿಸಿಕೊಂಡು ಬರುತ್ತಿದ್ದರು. ಆ ವೇಳೆ ಮಾರ್ಗಮಧ್ಯೆ ಚಾಲಕ ವೀರೇಶ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ವೀರೇಶ್‌ ಚಾಲಕನ ಸೀಟಿನಲ್ಲೇ ಒಂದು ಕಡೆ ವಾಲಿದ್ದರು. ಹೀಗಾಗಿ ಬಸ್‌ ನಿಧಾನವಾಗಿ ಚಲಿಸುತ್ತಿತ್ತು. ಆ ವೇಳೆ ಶಾಂತಿನಗರ ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಘುಕುಮಾರ್‌ ಅನುಮಾನಗೊಂಡು, ಬಸ್‌ ಗಮನಿಸಿದಾಗ ಅದರಲ್ಲಿ ಚಾಲಕ ಎದೆನೋವಿನಿಂದ ಬಳಲುತ್ತಿರುವುದು ಕಂಡು

ಬಂದಿತ್ತು. ತಡಮಾಡದೇ ಕೂಡಲೇ ಬಸ್ಸಿನ ಬಾಗಿಲು ತೆಗೆದು ಸಿನಿಮೀಯ ಶೈಲಿಯಲ್ಲಿ ಒಳಗೆ ಹೋಗಿ ಚಾಲಕನ ಸೀಟಿನ ಪಕ್ಕದಲ್ಲಿದ್ದ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ನ್ನು ಮಾರ್ಗಮಧ್ಯೆದಲ್ಲೇ ನಿಲ್ಲಿಸಿದ್ದರು.

ಅದೇ ಬಸ್‌ನ ನಿರ್ವಾಹಕನ ಸಹಾಯದಿಂದ ಚಾಲಕ ವೀರೇಶ್‌ನನ್ನು ಬಸ್ಸಿನಿಂದ ಕೆಳಗಿಳಿಸಿದ್ದರು. ಮತ್ತೂಂದು ಸಿಗ್ನಲ್‌ ಬಳಿ ಕರ್ತವ್ಯದಲ್ಲಿದ್ದ ಅಶೋಕನಗರ ಸಂಚಾರ ಠಾಣೆಯ ಪ್ರಸನ್ನಕುಮಾರ್‌ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಅವರ ಸಹಾಯದಿಂದ ವೀರೇಶ್‌ ಅವರನ್ನು ಆಟೋದಲ್ಲಿ ಕೂರಿಸಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

30ಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ: ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದೀಗ ಸಮಯಕ್ಕೆ ಸರಿಯಾಗಿ ರಘುಕುಮಾರ್‌ ಹ್ಯಾಂಡ್‌ ಬ್ರೇಕ್‌ ಹಾಕದಿದ್ದರೆ ಬಸ್‌ ಇತರೇ ವಾಹನಗಳಿಗೆ ಡಿಕ್ಕಿ ಹೊಡೆದು ಅಥವಾ ರಸ್ತೆ ವಿಭಜಕಕ್ಕೆ ಗುದ್ದಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಗಳಿದ್ದವು. ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಮತ್ತು ಚಾಲಕ ವೀರೇಶ್‌ ಅವರ ಪ್ರಾಣ ಉಳಿದಿದೆ. ಸದ್ಯ ವೀರೇಶ್‌ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಎಎಸ್‌ಐ ರಘುಕುಮಾರ್‌ ಸಮಯಕ್ಕೆ ಸರಿಯಾಗಿ ರಕ್ಷಿಸಿದ ಹಿನ್ನೆಲೆಯೆಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.