ಎಲ್ಲ ಅಭ್ಯರ್ಥಿಗಳಿಗೆ ಒಂದೇ ರೀತಿ ಅಂಕ


Team Udayavani, Nov 3, 2017, 12:44 PM IST

gejeted-probeshnari.jpg

ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಸಂದರ್ಶನ ಎದುರಿಸಿದ್ದ 1,083 ಅಭ್ಯರ್ಥಿಗಳಿಗೆ ಒಂದೇ ರೀತಿಯಲ್ಲಿ ಅಂಕಗಳನ್ನು ನೀಡಲಾಗಿತ್ತು ಎಂದು ಅವಕಾಶ ವಂಚಿತ ಅಭ್ಯರ್ಥಿಗಳ ಪರ ವಕೀಲರು ಗುರುವಾರ ಹೈಕೋರ್ಟ್‌ ಗಮನಕ್ಕೆ ತಂದರು. 

ಅರ್ಜಿ ವಿಚಾರಣೆ ನಡೆಸುತ್ತಿರುವ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಾದ ಮಂಡಿಸಿದ ಅವಕಾಶ ವಂಚಿತ ಅಭ್ಯರ್ಥಿಗಳ (ಅರ್ಜಿದಾರರು) ಪರ ಹಿರಿಯ ವಕೀಲ ಎಂ.ಬಿ. ನರಗುಂದ ಈ ಅಂಶ ತಿಳಿಸಿದರು.

2013ರಲ್ಲಿ ಏಪ್ರಿಲ್‌ನಲ್ಲಿ ಎ ಮತ್ತು ಬಿ ವೃಂದದ ಗೆಜೆಡೆಟ್‌ ಪ್ರೊಬೆಷನರಿ ಹುದ್ದೆಗಳ ಸಂದರ್ಶನ ನಡೆದಿತ್ತು. ಸಂದರ್ಶನಕ್ಕೆ 1,083 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ಸಂದರ್ಶನ ನಡೆಸಿ, ಎಲ್ಲ ಅಭ್ಯರ್ಥಿಗಳಿಗೂ ಒಂದೇ ತೆರನಾಗಿ ಅಂಕ ನೀಡಿದ್ದಾರೆ.

ಯಾವ ಅಭ್ಯರ್ಥಿಗಳಿಗೆ ಎಷ್ಟು ಅಂಕ ನೀಡಬೇಕು ಎಂಬುದನ್ನು ಸಂದರ್ಶನದ ಮುಂಚೆಯೇ ನಿಗದಿ ಮಾಡಿದ್ದರು ಮತ್ತು ಅಕ್ರಮ ನಡೆಸುವ ಉದ್ದೇಶದಿಂದಲೇ ಎಲ್ಲ ಅಭ್ಯರ್ಥಿಗಳಿಗೆ ಒಂದೇ ಮಾದರಿಯಲ್ಲಿ ಅಂಕಗಳನ್ನು ನೀಡಿದ್ದಾರೆ ಎಂಬುದು ತಿಳಿಯಲಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

2011ನೇ ಸಾಲಿನಲ್ಲಿ 362 ಎ ಮತ್ತು ಬಿ ವೃಂದದ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಕೆಎಟಿ ನಿರ್ದೇಶನದಂತೆ ನೇಮಕಾತಿ ಆದೇಶ ಪತ್ರ ನೀಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ರೇಣುಕಾಂಬಿಕೆ ಸೇರಿದಂತೆ ಇತರೆ ಉದ್ಯೋಗ ವಂಚಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಇದೇ ವೇಳೆ ಕೆಪಿಎಸ್‌ಸಿ ಪರ ವಕೀಲರು ವಾದ ಮಂಡಿಸಿ, ಡಾ.ಮೈತ್ರಿ ಅವರು ತಮಗೆ ಬಯಸಿದ ಹುದ್ದೆ ಸಿಗಲಿಲ್ಲ ಎಂಬ ಕಾರಣಕ್ಕೆ ಬೇರೆಯವರಿಗೂ ಹುದ್ದೆ ಸಿಗಬಾರದು ಎಂಬ ದುರುದ್ದೇಶದಿಂದ ನ್ಯಾಯಾಲಯಕ್ಕೆ ಅರ್ಜಿ ದಾಖಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವರೆಗೆ ಸುಮ್ಮನಿದ್ದು ಬಳಿಕ ಅರ್ಜಿ ಸಲ್ಲಿಸಿದ್ದಾರೆ. ಅದೊಂದು ಸಾರ್ವಜನಿಕ ಹಿತಾಸಕ್ತಿ ಅಲ್ಲ, ವೈಯುಕ್ತಿಕ ಹಿತಾಸಕ್ತಿ ಅರ್ಜಿ ಎಂದು ದೂರಿದರು.

ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಮುಖ್ಯ ವ್ಯಾಜ್ಯದಾರ. ಕೆಎಟಿ ಆದೇಶವನ್ನು ಸರ್ಕಾರ ಒಪ್ಪಿಕೊಂಡು ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪತ್ರ ನೀಡಲು ಮುಂದಾಗಿತ್ತು. ಹೀಗಾಗಿ, ಇದರಲ್ಲಿ ತಗಾದೆಯ ಪ್ರಶ್ನೆಯೇ ಇಲ್ಲ ಎಂದು ಆಯ್ಕೆಯಾದ ಅಭ್ಯರ್ಥಿಗಳ ಪರ ವಕೀಲರು ವಾದ ಮಂಡಿಸಿದರು. ವಾದ-ಪ್ರತಿ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.