ಒಂದೇ ಕ್ಲಿಕ್ಕಿನಲ್ಲಿ ಸಕಲ ಪದವಿ ಕೋರ್ಸ್

Team Udayavani, May 11, 2019, 3:08 AM IST

onde

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸ್‌, ಪ್ರಾಧ್ಯಾಪಕರು, ತರಗತಿ ವೇಳಾಪಟ್ಟಿ ಹಾಗೂ ಸೌಲಭ್ಯಗಳ ಮಾಹಿತಿಗಾಗಿ ವಿದ್ಯಾರ್ಥಿಗಳು ಕಾಲೇಜಿನಿಂದ ಕಾಲೇಜಿಗೆ ಅಲೆದಾಡಬೇಕಿಲ್ಲ! ಎಲ್ಲ ಮಾಹಿತಿ ಬೆರಳ ತುದಿಯಲ್ಲೇ ಸಿಗಲಿದೆ.

2019-20ನೇ ಸಾಲಿಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ದಾಖಲಾತಿ ಪಡೆಯ ಬಯಸುವ ವಿದ್ಯಾರ್ಥಿಗಳು ಕೋರ್ಸ್‌ ಅಥವಾ ಇನ್ಯಾವುದೋ ಮಾಹಿತಿಗಾಗಿ ಕಾಲೇಜುಗಳಿಗೆ ಎಡತಾಕಬೇಕಿಲ್ಲ. ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲೇ ಎಲ್ಲ ಮಾಹಿತಿ ಲಭ್ಯ. ರಾಜ್ಯದ 412 ಸರ್ಕಾರಿ ಕಾಲೇಜುಗಳು ವೆಬ್‌ಸೈಟ್‌ ಸಿದ್ಧಪಡಿಸಿದ್ದು, ಇಲಾಖೆಯ ಅಂತರ್ಜಾಲ ತಾಣದಲ್ಲಿ ಲಿಂಕ್‌ ದೊರೆಯಲಿದೆ. ವಿದ್ಯಾರ್ಥಿಗಳು ಸುಲಭವಾಗಿ ಆ ಲಿಂಕ್‌ ತೆರೆದು, ತಮಗೆ ಬೇಕಾದ ಸರ್ಕಾರಿ ಪದವಿ ಕಾಲೇಜಿನ ಮಾಹಿತಿ ಪಡೆಯಬಹುದಾಗಿದೆ.

ಎಲ್ಲ ಸರ್ಕಾರಿ ಕಾಲೇಜಿನ ವೆಬ್‌ಸೈಟ್‌ ಏಕರೂಪದಲ್ಲಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ದೊರೆಯಲಿದೆ (ಕೆಲವು ಕಾಲೇಜು ಇನ್ನೂ ಕನ್ನಡ ವೆಬ್‌ಸೈಟ್‌ ಸಿದ್ಧಪಡಿಸಿಲ್ಲ). ಕಾಲೇಜಿನ ಇತಿಹಾಸದ ಮೆಲುಕು, ಮಿಷನ್‌, ಗುರಿ ಮತ್ತು ವಿಷನ್‌ ಈ ಮೂರು ಅಂಶಗಳು ಹೋಂ ಪೇಜ್‌ನಲ್ಲಿ ಸಿಗಲಿದೆ.

ಎಲ್ಲಾ ವಿವರ ಲಭ್ಯ: ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್‌ಗಳು, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಸಂಪೂರ್ಣ ವಿವರ ದೊರೆಯಲಿದೆ. ಎಷ್ಟು ಕೋರ್ಸ್‌ಗಳು ಮತ್ತು ಅಲ್ಲಿರುವ ಕಾಂಬಿಷೇನ್‌ ವಿವರವು ಅಲ್ಲೇ ದೊರೆಯಲಿದೆ.

ಕೋರ್ಸ್‌ಗಳ ಮಾಹಿತಿಯ ಜತೆಗೆ ಕಾಯಂ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು ಹಾಗೂ ಕಾಲೇಜು ಸಿಬ್ಬಂದಿ ಮಾಹಿತಿಯೂ ಲಭ್ಯವಾಗಲಿದೆ. ಅಲ್ಲದೆ, ಯಾವ ವಿಭಾಗಕ್ಕೆ ಯಾವ ಪ್ರಾಧ್ಯಾಪಕರು ಎಂಬ ಮಾಹಿತಿಯೂ ಇದರಲ್ಲಿ ಸಿಗಲಿದೆ. ವೆಬ್‌ಸೈಟ್‌ನ ಸ್ಟುಡೆಂಟ್‌ ಸಫೋರ್ಟ್‌ ವಿಭಾಗದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌, ರೇಂಜರ್‌, ರೋವರ್‌, ರ್ಯಾಗಿಂಗ್‌ ತಡೆ ಸಮಿತಿ ಮತ್ತು ಪ್ಲೇಸ್‌ಮೆಂಟ್‌ ಸೆಲ್‌ಗ‌ಳ ಮಾಹಿತಿ ಇದೆ.

ಆನ್‌ಲೈನ್‌ನಲ್ಲೇ ವೇಳಾಪಟ್ಟಿ: ಕೋರ್ಸ್‌ ಮತ್ತು ಪ್ರಾಧ್ಯಾಪಕರ ಮಾಹಿತಿ ಮಾತ್ರವಲ್ಲ. ಪ್ರತಿ ವಿದ್ಯಾರ್ಥಿಗೂ ಅತಿ ಅವಶ್ಯಕವಾಗಿರುವ ವೇಳಾಪಟ್ಟಿ ಕೂಡ ವೆಬ್‌ಸೈಟ್‌ನಲ್ಲೇ ದೊರೆಯಲಿದೆ. ಒಂದೊಂದು ಸೆಮಿಸ್ಟರ್‌ಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಸೋಮವಾರದಿಂದ ಶನಿವಾರದವರೆಗಿನ ಎಲ್ಲ ವಿಷಯದ ವೇಳಾಪಟ್ಟಿ ಇಲ್ಲಿ ಸುಲಭವಾಗಿ ಸಿಗುತ್ತದೆ. ಜತೆಗೆ ಕಳೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ವಿವಿಧ ಕೋರ್ಸ್‌ಗಳ ಪಠ್ಯಕ್ರಮವೂ ಲಭ್ಯವಿದೆ. ಕಾಲೇಜಿನ ಗ್ರಂಥಾಲಯ ಮತ್ತು ಆನ್‌ಲೈನ್‌ ಓದಬಹುದಾದ ಪುಸ್ತಕ ಮತ್ತು ಅದರ ಮಾಹಿತಿಯೂ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗಲಿದೆ.

ಆನ್‌ಲೈನ್‌ ಅರ್ಜಿ ಇಲ್ಲ: 2019-20ನೇ ಸಾಲಿಗೆ ಪದವಿ ಕಾಲೇಜಿಗೆ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಲು ಅನುಕೂಲವಾಗುವ ವೆಬ್‌ಸೈಟ್‌ ಒಂದನ್ನು ಕಾಲೇಜು ಶಿಕ್ಷಣ ಇಲಾಖೆ ಅಭಿವೃದ್ಧಿ ಪಡಿಸುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗದೇ ಇರುವುದರಿಂದ 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

ಕಾಲೇಜಿಗೆ ಹೋಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳ ಪೂರ್ಣ ವಿವರನ್ನು ಆನ್‌ಲೈನ್‌ನಲ್ಲಿ ಎಂಟ್ರಿ ಮಾಡಲಾಗುತ್ತದೆ. 2020-21ನೇ ಸಾಲಿನಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಬರಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ವೆಬ್‌ಸೈಟ್‌ ಬಳಕೆ ಹೇಗೆ?: ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ dce.kar.nic.in ಅನ್ನು ತೆರೆದರೆ, ಮುಖ ಪುಟದ ಎಡಭಾಗದಲ್ಲಿ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಂಬ್ರೆಲಾ ವೆಬ್‌ಸೈಟ್‌ ಎಂಬ ಲಿಂಕ್‌ ಇದೆ. ಆ ಲಿಂಕ್‌ ತೆರೆದರೆ ನಿಮಗೆ ಬೇಕಾದ ಕಾಲೇಜು ಬರುತ್ತದೆ. ಕಾಲೇಜಿನ ಹೆಸರಿನ ಮೇಲೆ ಕ್ಲಿಕ್‌ ಮಾಡಿದರೆ, ಕಾಲೇಜಿನ ವೆಬ್‌ಸೈಟ್‌ ತೆರೆದುಕೊಳ್ಳುತ್ತದೆ.

ಎಲ್ಲ ಸರ್ಕಾರಿ ಕಾಲೇಜುಗಳು ವೆಬ್‌ಸೈಟ್‌ ತೆರೆಯಬೇಕು ಎಂದು ಸೂಚನೆ ನೀಡಿದ್ದೇವೆ. ಈಗ ವೆಬ್‌ಸೈಟ್‌ ಬಳಕೆಗೆ ಸಿದ್ಧವಾಗಿದೆ. ವಿದ್ಯಾರ್ಥಿಗಳು, ಪಾಲಕ, ಪೋಷಕರು ಕಾಲೇಜುಗಳ ಮಾಹಿತಿಯನ್ನು ಸುಲಭವಾಗಿ ಪಡೆದು, ಸರ್ಕಾರಿ ಕಾಲೇಜಿಗೆ ದಾಖಲಾಗಬಹುದಾಗಿದೆ.
-ಪ್ರೊ.ಎಸ್‌.ಮಲ್ಲೇಶ್ವರಪ್ಪ, ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.