ಎಲ್ಲ ಹೆಣ್ಮಕ್ಳೂ ಮಹಾಲಕ್ಷ್ಮಿಯರು
Team Udayavani, Jan 9, 2020, 3:09 AM IST
ಬೆಂಗಳೂರು: ಸಾಮಾನ್ಯ ಹೆರಿಗೆ ಅಥವಾ ಶಸ್ತ್ರಚಿಕಿತ್ಸೆ ಮೂಲಕ ಜನಿಸುವ ಎಲ್ಲ ಹೆಣ್ಣು ಮಕ್ಕಳಿಗೆ ಮಹಾಲಕ್ಷ್ಮೀ ಯೋಜನೆ ವಿಸ್ತರಿಸಲು ಪಾಲಿಕೆ ಮುಂದಾಗಿದೆ. ಇದಕ್ಕೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಳ ಮಾನದಂಡವೂ ಇಲ್ಲ ಎನ್ನುವುದು ಮತ್ತೂಂದು ವಿಶೇಷ!.
ಪಾಲಿಕೆಯ 6ರೆಫರಲ್ ಹಾಗೂ 26ಪಾಲಿಕೆ ಹೆರಿಗೆ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲ ಹೆಣ್ಣು ಮಕ್ಕಳಿಗೆ ಮಹಾಲಕ್ಷ್ಮೀ ಯೋಜನೆಯಡಿ ಒಂದು ಲಕ್ಷ ರೂ. ಬಾಂಡ್ ವಿತರಿಸುವ ಯೋಜನೆಗೆ ನಿಯಮ ರೂಪಿಸಲು ಪಾಲಿಕೆ ಮುಂದಾಗಿದೆ. ಮುಂದಿನ ಕೌನ್ಸಿಲ್ ಸಭೆಯಲ್ಲಿ ನಿಯಮಗಳಿಗೆ ಅನುಮೋದನೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಪಾಲಿಕೆಯ 6ರೆಫರಲ್ ಹಾಗೂ 26ಪಾಲಿಕೆ ಹೆರಿಗೆ ಆಸ್ಪತ್ರೆಗಳಲ್ಲಿ ಸಾಮಾನ್ಯ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ಮೂಲಕ ಜನಿಸುವ ಹೆಣ್ಣು ಮಕ್ಕಳಿಗೆ ಈ ಯೋಜನೆಯ ಸೌಲಭ್ಯ ಸಿಗಲಿದೆ. ಕಳೆದ ವರ್ಷ ಪರಿಚಯಿಸಲಾಗಿದ್ದ ಪಿಂಕ್‌ಬೇಬಿ ಯೋಜನೆಯಡಿ ಪಾಲಿಕೆಯ ಆಸ್ಪತ್ರೆಗಳಲ್ಲಿ ಜನಿಸುವ ಮೊದಲ ಹೆಣ್ಣು ಮಗುವಿಗೆ 5 ಲಕ್ಷರೂ. ಬಾಂಡ್ ನೀಡಲಾಗುತ್ತಿತ್ತು.
ಈಗ ಪಾಲಿಕೆಯ ಹೆರಿಗೆ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲ ಹೆಣ್ಣು ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದ್ದು, ತಲಾ ಒಂದು ಲಕ್ಷರೂ. ನೀಡಲು 60 ಕೋಟಿ ರೂ. ಮೀಸಲಿರಿಸಲಾಗಿದೆ. ಬಾಂಡ್ ಮೊತ್ತವನ್ನು ಹೆಣ್ಣು ಮಗುವಿಗೆ 15 ವರ್ಷದವರೆಗೆ ವಿಸ್ತರಿಸಲಾಗಿದ್ದು, ಮಗುವಿಗೆ 15 ವರ್ಷ ಪೂರ್ಣಗೊಂಡ ನಂತರ ಈ ಹಣ ಸಿಗಲಿದೆ.
ಪಾಲಿಕೆಯ ಆಸ್ಪತ್ರೆಗಳಲ್ಲಿ ಜನಿಸುವ ಮೊದಲ ಎರಡು ಹೆಣ್ಣು ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ. ಎರಡನೇ ಬಾರಿ ಅವಳಿ-ಜವಳಿ ಹೆಣ್ಣು ಮಕ್ಕಳು ಜನಿಸಿದರೆ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಆ ಹೆಣ್ಣು ಮಗುವಿಗೂ ಮಹಾಲಕ್ಷ್ಮೀ ಯೋಜನೆ ವಿಸ್ತರಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ನಿರ್ಮಲಾ ಬುಗ್ಗಿ ತಿಳಿಸಿದ್ದಾರೆ.
ಫಲಾನುಭವಿಗಳಾಗಲು ಇರುವ ನಿಬಂಧನೆಗಳು: ದೇಶದ ಯಾವುದೇ ರಾಜ್ಯದವರಾಗಿದ್ದರೂ ಈ ಸೌಲಭ್ಯ ಸಿಗಲಿದೆ. ಸಹಜ ಹೆರಿಗೆ ಆಗಿದ್ದರೆ ಪಾಲಿ ಕೆಯ ಆಸ್ಪತ್ರೆಯಲ್ಲಿ ಎರಡು ದಿನ ಹಾಗೂ ಶಸ್ತ್ರಚಿಕಿತ್ಸೆ ಆಗಿದ್ದಲ್ಲಿ ಏಳು ದಿನಗಳ ಕಾಲ ವೈದ್ಯರಿಂದ ದೃಢೀ ಕರಣ ಪತ್ರ ಪಡೆದುಕೊಳ್ಳಬೇಕು.
ಸೌಲಭ್ಯ ಪಡೆಯಲು ಮಗುವಿನ ಜನನ ಪತ್ರ, ತಾಯಿ ಕಾರ್ಡ್, ಆಧಾರ್‌ಕಾರ್ಡ್, ಗುರುತಿನ ಚೀಟಿ ಹಾಗೂ ಮಗುವಿನ ಆಧಾರ್‌ಕಾರ್ಡ್ ಕಡ್ಡಾಯ. ಮಗುವಿಗೆ ಮೂರು ವರ್ಷ ತುಂಬುತ್ತಿದ್ದಂತೆ ಕಡ್ಡಾಯವಾಗಿ ಅಂಗನವಾಡಿ ಅಥವಾ ಶಾಲೆಗೆ ಸೇರಿಸಬೇಕು. ಮಹಾಲಕ್ಷ್ಮೀ ಯೋಜನೆಯು ಈ ವರ್ಷದ ಮಾರ್ಚ್ 31ರವರೆಗೆ ಜಾರಿಯಲ್ಲಿರಲಿದೆ. ಈ ಯೋಜನೆಯನ್ನು ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಆದಾಯ ಪ್ರಮಾಣ ಬೇಡ: ಪಾಲಿಕೆಯ ಮಹಾಲಕ್ಷ್ಮೀ ಯೋಜನೆ ಪೋಷಕರ ಆರ್ಥಿಕತೆ ಪರಿಗಣಿಸುವುದಿಲ್ಲ. ಪಾಲಿಕೆಯ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ್ದರೆ ಈ ಸೌಲಭ್ಯ ಪಡೆದುಕೊಳ್ಳ ಬಹುದು ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ನಿರ್ಮಲಾ ಬುಗ್ಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.