Bangalore: ಡ್ರಂಕ್‌ ಆ್ಯಂಡ್‌ ಡ್ರೈವ್‌ ನೆಪದಲ್ಲಿ ಸುಲಿಗೆ ಆರೋಪ

Team Udayavani, Feb 26, 2024, 12:31 PM IST

Bangalore: ಡ್ರಂಕ್‌ ಆ್ಯಂಡ್‌ ಡ್ರೈವ್‌ ನೆಪದಲ್ಲಿ ಸುಲಿಗೆ ಆರೋಪ

ಸಾಂದರ್ಭಿಕ ಚಿತ್ರ

ಬೆಂಗಳೂರು: ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ವೇಳೆ ಜೀವನ್‌ಭೀಮಾ ನಗರ ಸಂಚಾರ ಪೊಲೀಸರು ಯುವತಿಯೊಬ್ಬಳಿಂದ ಐದು ಸಾವಿರ ರೂ. ಸುಲಿಗೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತು ಯುವತಿಯ ತಂದೆ ಕೋಶಿ ವರ್ಗೀಸ್‌ ಎಂಬವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿವರ ಬರೆದು ನಗರ ಪೊಲೀಸ್‌ ಆಯುಕ್ತರು ಹಾಗೂ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?: “ಫೆ.23ರಂದು ರಾತ್ರಿ 11 ಗಂಟೆಗೆ ದೂರುದಾರ ತಮ್ಮ ಪುತ್ರಿ ದ್ವಿಚಕ್ರ ವಾಹನದಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದರು. ಅದೇ ವೇಳೆ ಮಣಿಪಾಲ್‌ ಆಸ್ಪತ್ರೆ ಸಮೀಪದಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ನಡೆಸುತ್ತಿದ್ದ ಜೀವನ್‌ ಭೀಮಾನಗರ ಸಂಚಾರ ಠಾಣೆ ಪೊಲೀಸರು, ಆಕೆಯನ್ನು ತಡೆದಿದ್ದಾರೆ. ಬಳಿಕ ಮದ್ಯ ಸೇವಿಸಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಆಕೆ ಇಲ್ಲ ಎಂದಾಗ, ಮದ್ಯ ಸೇವನೆ ಪತ್ತೆ ಪರೀಕ್ಷೆ ನಡೆಸದೆಯೇ, “ನೀನು ಮದ್ಯ ಸೇವಿಸಿದ್ದು, 15 ಸಾವಿರ ರೂ. ಕೊಡು, ಬಿಟ್ಟು ಕಳುಹಿಸುತ್ತೇವೆ ಎಂದು ಬೇಡಿಕೆ ಇಟ್ಟಿದ್ದಾರೆ. ಅಂತಿಮವಾಗಿ 5 ಸಾವಿರ ರೂ. ಅನ್ನು ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿ ಗೂಗಲ್‌ ಪೇ ಮೂಲಕ ಮಾಡಿಸಿಕೊಂಡಿದ್ದಾರೆ’ ಎಂದು ಯುವತಿಯ ತಂದೆ ಕೋಶಿ ವರ್ಗಿಸ್‌ ಆರೋಪಿಸಿ ಪೋಸ್ಟ್‌ ಮಾಡಿದ್ದಾರೆ.

ಸೂಕ್ತ ಕ್ರಮಕ್ಕೆ ಮನವಿ: ಅದಕ್ಕೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ವಿಭಾಗ ಹಾಗೂ ಜೀವನ್‌ಭೀಮಾನಗರ ಸಂಚಾರ ಠಾಣೆ ಪೊಲೀಸರು, 5 ಸಾವಿರ ರೂ. ಗೂಗಲ್‌ ಪೇ ವರ್ಗಾಹಿಸಿಕೊಂಡ ಮೊಬೈಲ್‌ ನಂಬರ್‌(ಯುಪಿಐ) ವಿವರ ಕೋರಿದ್ದು, ಅದನ್ನು ದೂರುದಾರರು ಒದಗಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ಪೂರ್ವವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಜೈನ್‌ಗೆ ಸೂಚಿಸಿದ್ದಾರೆ.

ವರದಿ ನೀಡಲು ಎಸಿಪಿಗೆ ತಿಳಿಸಿದ್ದೇನೆ: ಕುಲದೀಪ್‌ ಜೈನ್‌ :

ಈ ಕುರಿತು ಮಾಹಿತಿ ನೀಡಿದ ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಜೈನ್‌, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರ ವಿರುದ್ಧ ಲಂಚ ಪಡೆದ ಕುರಿತು ಆರೋಪಿಸಿ ಪೋಸ್ಟ್‌ ಮಾಡಿದ್ದಾರೆ. ಈ ಸಂಬಂಧ ಪೂರ್ವ ಸಂಚಾರ ಉಪವಿಭಾಗದ ಎಸಿಪಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಒಂದೆರಡು ದಿನಗಳಲ್ಲಿ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.