ಅಲ್ವಸಂಖ್ಯಾತರ ಕೇಸ್ ವಾಪಸ್: ಸರ್ಕಾರ ಪತ್ರ
Team Udayavani, Jan 27, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಕೋಮುಗಲಭೆ ಹಾಗೂ ಇತರ ಪ್ರಕರಣಗಳ ಸಂದರ್ಭದಲ್ಲಿ ಮುಗ್ಧ ಅಲ್ವಸಂಖ್ಯಾತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ನಿಂದ ಹಿಂದಕ್ಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ವಿಳಂಬ ಮಾಡದೇ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಾರ್ಯಾಲಯದಿಂದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
ಡಿಐಜಿ ಪರವಾಗಿ ಹಿರಿಯ ಪೊಲಿಸ್ ಅಧಿಕಾರಿಯಾಗಿರುವ ಎಐಜಿಪಿ ಶಿವಪ್ರಕಾಶ್ ದೇವರಾಜ್ ಅವರು ಮಂಗಳೂರು, ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ 21 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಹಲವೆಡೆ ಕೋಮು ಗಲಭೆ ಸಂಭವಿಸಿದ ಪ್ರಕರಣಗಳಲ್ಲಿ ಅಮಾಯಕ ಅಲ್ಪಸಂಖ್ಯಾತರ ಮೇಲಿನ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಕುರಿತು ತಮ್ಮ ನಿಲುವು ತಿಳಿಸಬೇಕು. ಈ ಹಿಂದೆ ಪತ್ರ ಬರೆದಾಗಲೂ ಯಾವುದೇ ಅಭಿಪ್ರಾಯ ತಿಳಿಸದೇ ಇರುವುದನ್ನು ಪತ್ರದಲ್ಲಿ ಪ್ರಸ್ಥಾಪಿಸಲಾಗಿದ್ದು, ಈ ಬಾರಿಯ ಪತ್ರಕ್ಕೆ ತಕ್ಷಣ ಸ್ಪಂದಿಸಿ, ತಪ್ಪದೇ ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿದೆ.
ಮಂಗಳೂರು, ಬೆಳಗಾವಿ ಪೊಲೀಸ್ ಆಯುಕ್ತರಲ್ಲದೇ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಕೆಜಿಎಫ್, ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಕಾರವಾರ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಬೆಳಗಾವಿ, ಬಳ್ಳಾರಿ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಎಸ್ಪಿಗಳಿಗೆ “ನೆನಪೋಲೆ-2 ಅತ್ಯಂತ ಜರೂರು ‘ ಎಂದು ಜ.25ರಂದು ಬರೆಯಲಾದ ಪತ್ರದಲ್ಲಿ ತಿಳಿಸಲಾಗಿದೆ.
ಕಳೆದ ಐದು ವರ್ಷಗಳಲ್ಲಿ 2013 ರಿಂದ 2017 ರವರೆಗಿನ ಅವಧಿಯಲ್ಲಿ ನಡೆದ ಕೋಮುಗಲಭೆ ಮತ್ತು ಇತರ ಪ್ರಕರಣಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮುಗ್ಧ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯುವ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಈ ಮೊದಲು ಸಹ ಪತ್ರ ಬರೆದಾಗ ಇದುವರೆಗೂ ತಮ್ಮಿಂದ ಯಾವುದೇ ವರದಿ ಬಂದಿಲ್ಲ. ಹೀಗಾಗಿ ಕೂಡಲೇ ತಮ್ಮ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಹಿಂಪಡೆಯುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ವರದಿ ಕಳುಹಿಸಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.