ನಾಳೆಯಿಂದ ಹವ್ಯಾಸಿ ನಾಟಕೋತ್ಸವ

Team Udayavani, Feb 11, 2017, 11:59 AM IST

ravindra-kalakeshetra.jpg

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಫೆ.13ರಿಂದ 18ರವರೆ ರವೀಂದ್ರ ಕಲಾಕ್ಷೇತ್ರ ಮತ್ತು ಫೆ.12ರಿಂದ 18ರವರೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ “ಮಹಿಳೆ ಮತ್ತು ಮಕ್ಕಳ ವರ್ತಮಾನದ ನೋಟ’ ವಿಷಯ ಕುರಿತ ಹವ್ಯಾಸಿ ರಂಗಭೂಮಿ ನಾಟಕೋತ್ಸವ ನಡೆಯಲಿದೆ. 

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ್‌, ನಾಟಕೋತ್ಸವದಲ್ಲಿ 16 ನಾಟಕಗಳು ಪ್ರದರ್ಶನಗೊಳ್ಳಲಿವೆ. ಫೆ.13ರಂದು ಸಂಜೆ 5.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಅತಿಥಿಗಳಾಗಿ ಕೇಂದ್ರ ಸಚಿವ ಅನಂತಕುಮಾರ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಮೇಯರ್‌ ಜಿ.ಪದ್ಮಾವತಿ, ಇಲಾಖೆ ಸಂಸದೀಯ ಕಾರ್ಯದರ್ಶಿ ಶಕುಂತಲಾಶೆಟ್ಟಿ, ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಪಾಲ್ಗೊಳ್ಳುವರು. ಶಾಸಕ ಆರ್‌.ವಿ.ದೇವರಾಜ್‌ ಅಧ್ಯಕ್ಷತೆ ವಹಿಸುವರು ಎಂದರು. 

ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಡಾ.ಚಂದ್ರಶೇಖರ ಕಂಬಾರರ ಅಧ್ಯಕ್ಷತೆಯಲ್ಲಿ “ಹವ್ಯಾಸಿ ವೃತ್ತಿರಂಗಭೂಮಿ ಪ್ರೋತ್ಸಾಹ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ’ ಕುರಿತು 7 ಸದಸ್ಯರನ್ನೊಳಗೊಂಡ ನಾಟಕ ರಚನೆ ಸಲಹಾ ಸಮಿತಿ ರಚಿಸಲಾಗಿತ್ತು.

ಸದರಿ ಸಮಿತಿ ತೀರ್ಮಾನದಂತೆ ನಾಟಕ ರಚನಾಕಾರರಿಗೆ ಕಮ್ಮಟ ಏರ್ಪಡಿಸಿ ಸಿದ್ಧಪಡಿಸಲಾದ ನಾಟಕಗಳನ್ನು ಆಯ್ಕೆ ಮಾಡಿಕೊಂಡಿದ್ದು, ಹವ್ಯಾಸಿ ತಂಡಗಳು ಸಿದ್ಧಪಡಿಸಿದ 19 ನಾಟಕಗಳ ಪೈಕಿ 16 ನಾಟಕಗಳು ಪ್ರದರ್ಶನಕ್ಕೆ ಆಯ್ಕೆಯಾಗಿವೆ. ಫೆ.12ರಿಂದ 18ರವರೆಗೆ ರವೀಂದ್ರ ಕಲಾಕ್ಷೇತ್ರ ಹಾಗೂ  ಕಲಾಗ್ರಾಮದಲ್ಲಿ ನಾಟಕ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್‌.ಚನ್ನೂರ್‌ ಇದ್ದರು.

ಪ್ರದರ್ಶನಗೊಳ್ಳಲಿರುವ ನಾಟಕಗಳು
ರವೀಂದ್ರ ಕಲಾಕ್ಷೇತ್ರದಲ್ಲಿ ಫೆ.13ರಂದು ಸಂಜೆ 6ಕ್ಕೆ ಅರುಂಧತಿ ಆಲಾಪ, ಸಂಜೆ 7.30- ಗಂಗೇಗೌರಿ ಪ್ರಸಂಗ. ಫೆ.14ರಂದು ಸಂಜೆ 6ಕ್ಕೆ ಬಣ್ಣಕ್ಕೆ ಬೆರಗಾದರೊ, ಸಂಜೆ 7.30- ಹಸಿರು ಭೂಮಿ ಹಾಡು. ಫೆ.15ರಂದು ಸಂಜೆ 7.30ಕ್ಕೆ ಪಂಚಾವರು, ಫೆ.16ರಂದು ಸಂಜೆ 6ಕ್ಕೆ ರಥಯಾತ್ರೆ, ಸಂಜೆ 7.30ಕ್ಕೆ ಗಣಿಗಣಮನ. ಫೆ.17ರಂದು ಸಂಜೆ 7ಕ್ಕೆ ಸ್ಯಾಪೋ ಒಂದು ನೀಲಾಗ್ನಿ ಹಾಗೂ ಫೆ.18ರಂದು ಸಂಜೆ 7ಕ್ಕೆ ರೂಪ ರೂಪಗಳನು ದಾಟಿ ನಾಟಕಗಳು ಪ್ರದರ್ಶನಗೊಳ್ಳಲಿವೆ.

ಕಲಾಗ್ರಾಮದಲ್ಲಿ ಪ್ರತಿದಿನ ಸಂಜೆ 7ಕ್ಕೆ ನಾಟಕಗಳು ನಡೆಯಲಿದ್ದು, ಫೆ.12ರಂದು ಬಾರಿಗಿಡ, ಫೆ.13ಕ್ಕೆ ಪಲ್ಲಟ, ಫೆ.14ಕ್ಕೆ ಮೋದಾಳಿ, 15ಕ್ಕೆ ಕೇಳೇಸಖೀ ಚಂದ್ರಮುಖೀ, 16ಕ್ಕೆ ತೆರೆಯದ ಪುಟ, 17ಕ್ಕೆ ಆರದಿರಲಿ ಬೆಳಕು ಮತ್ತು 18ರಂದು ಬಹುಮಾನ ನಾಟಕಗಳು ಪ್ರದರ್ಶನಗೊಳ್ಳಲಿವೆ.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.