ಅಂಬೇಡ್ಕರ್ ಮುಂದೆ ಪಕ್ಷಗಳ ಒಗ್ಗಟ್ಟು
Team Udayavani, Apr 15, 2020, 12:52 PM IST
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 129 ನೇ ಜಯಂತಿಯನ್ನು ಮಂಗಳವಾರ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರು ಜತೆಯಾಗಿ ಆಚರಣೆ ಮಾಡಿದರು.
ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಸರ್ಕಾರದ ವತಿಯಿಂದ ಗೌರವ ಸಲ್ಲಿಸುವ ಅಧಿಕೃತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಸರಳವಾಗಿ ಆಚರಿಸಲು ನಿರ್ಧರಿಸಲಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಜರಿದ್ದರು. ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಜರಾಗಿ ಎಲ್ಲರೂ ಏಕಕಾಲಕ್ಕೆ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.