ರಾಜೀವ್‌ಗಾಂಧಿ ವಿವಿ ಕುಲಸಚಿವರ ನೇಮಕಕ್ಕೆ ತಿದ್ದುಪಡಿ
Team Udayavani, Feb 15, 2019, 6:37 AM IST
ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲ ಸಚಿವರ ನೇಮಕ ಮಾಡಲು ಕಾಯ್ದೆ ತಿದ್ದುಪಡಿಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿದ್ದ ವಿಧೇಯಕಕ್ಕೆ ಬಿಜೆಪಿ ಗಲಾಟೆಯ ನಡುವೆಯೇ ವೈದ್ಯಕೀಯ ಶಿಕ್ಷಣ ಸಚಿವ ಇ ತುಕಾರಾಂ ಒಪ್ಪಿಗೆ ಪಡೆದುಕೊಂಡರು.
ಕುಲಸಚಿವರ ನೇಮಕಕ್ಕೆ ಕಡ್ಡಾಯವಾಗಿ ಐದು ವರ್ಷ ಪ್ರೊಫೇಸರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು ಎನ್ನುವ ನಿಬಂಧನೆಯನ್ನು ಸಡಿಲಗೊಳಿಸಲು ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಕಾಯ್ದೆ ಸದನದಲ್ಲಿ ಅಂಗೀಕಾರ ತಕ್ಷಣವೇ ಹಾಲಿ ಮೌಲ್ಯಮಾಪನ ಕುಲಸಚಿವ-
ಡಾ. ಎಂ.ಕೆ. ರಮೇಶ್ ಅವರನ್ನು ಬಿಡುಗಡೆಗೊಳಿಸಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕರ ಹುದ್ದೆಗೆ ವರ್ಗಾಯಿಸಲಾಗಿದೆ. ಮೌಲ್ಯಮಾಪನ ಕುಲ ಸಚಿವ ಹುದ್ದೆಗೆ ಕಿದ್ವಾಯಿ ಸಂಸ್ಥೆ ಪ್ರಾಧ್ಯಾಪಕ ಡಾ. ಕೆ.ಬಿ. ಲಿಂಗೇಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.