ಅಮಿತ್ ಶಾ ಅಸಮಾಧಾನ
Team Udayavani, Feb 18, 2019, 12:30 AM IST
ಬೆಂಗಳೂರು: ಒಂದೆಡೆ “ಆಪರೇಷನ್’ನಂಥ ಬೆಳವಣಿಗೆಗಳಿಂದ ಪಕ್ಷಕ್ಕೆ ಉಂಟಾದ ಮುಜುಗರದಿಂದ ಅಸಮಾಧಾನಿತರಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಲೋಕಸಭಾ ಚುನಾವಣಾ ಪೂರ್ವ ಸಿದ್ಧತೆ ಕೊರತೆಗಳ ಕುರಿತೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತರೆ ರಾಜ್ಯಗಳಲ್ಲಿ ಲೋಕಸಭಾ ಚುನಾವಣಾ ಸಿದ್ಧತೆ ಚುರುಕಾಗಿದ್ದರೆ, ಕರ್ನಾಟಕದಲ್ಲಿ ಪಕ್ಷಕ್ಕೆ ಉತ್ತಮ ನೆಲೆಯಿದ್ದರೂ ಸಂಘಟನೆ ಹಾಗೂ ಸಿದ್ಧತಾ ಕಾರ್ಯ ಚುರುಕುಗೊಳ್ಳದಿರುವ ಬಗ್ಗೆ ಶಾ ಅಸಮಾಧಾಬನ ವ್ಯಕ್ತಪಡಿಸಿದ್ದಾರಲ್ಲದೆ, ಈ ಸಂಬಂಧ ತಾವೇ ಸಭೆಗಳನ್ನು ನಡೆಸಲು ಮುಂದಾಗಿದ್ದಾರಲ್ಲದೆ, ಕೋರ್ ಕಮಿಟಿ ಸಭೆಯಲ್ಲೂ ಭಾಗವಹಿಸುತ್ತಿದ್ದಾರೆ. ಫೆ. 21ರಂದು ಚಿಕ್ಕಬಳ್ಳಾಪುರ, ಕೋಲಾರ ಇತರೆ ಕ್ಷೇತ್ರಗಳ “ಶಕ್ತಿಕೇಂದ್ರ ಪ್ರಮುಖ’ರ ಸಭೆ ನಡೆಸಲು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿಗಳು, ಪ್ರಭಾರಿಗಳ ಸಭೆ, ಇತರೆ ಪ್ರಮುಖರ ಸಭೆಯನ್ನೂ ನಡೆಸಲಿರುವ ಅಮಿತ್ ಶಾ ಅವರು ಲೋಕಸಭಾ ಚುನಾವಣಾ ತಯಾರಿ ಬಗ್ಗೆಯೂ ಲೋಕಸಭಾ ಚುನಾವಣೆಗೆ ಸ್ಪಷ್ಟ ನಿರ್ದೇಶನ ನೀಡುವ ನಿರೀಕ್ಷೆ ಇದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿಯು ಪೂರ್ವ ಸಿದ್ಧತಾ ಕಾರ್ಯಗಳನ್ನು ಚುರುಕುಗೊಳಿಸಿದೆ. ಶಕ್ತಿ ಕೇಂದ್ರ ಪ್ರಮುಖರು, ಲೋಕಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿಗಳು, ಪ್ರಭಾರಿಗಳು, ನಾನಾ ಮೋರ್ಚಾ ಪದಾಧಿಕಾರಿಗಳಿಗೆ ನಿರ್ದಿಷ್ಟ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕೇಂದ್ರ ಬಿಜೆಪಿ ಸೂಚನೆ ನೀಡಿತ್ತು. ಆದರೆ ಅನ್ಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯ ಬಿಜೆಪಿಯ ಸಿದ್ಧತಾ ಕಾರ್ಯ ವರಿಷ್ಠರಿಗೆ ಸಮಾಧಾನ ತಂದಿರಲಿಲ್ಲ.
ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ಪಕ್ಷದ ಬಗ್ಗೆ ಜನರಿಂದ ಉತ್ತಮ ಒಲವಿದೆ. ಹಾಗಾಗಿ ಆ ವಿಶ್ವಾಸಕ್ಕೆ ಚ್ಯುತಿ ಉಂಟಾಗದ ರೀತಿಯಲ್ಲಿ ನಡೆದುಕೊಳ್ಳಬೇಕಿದೆ. ಈವರೆಗೆ ತಪ್ಪು ಹೆಜ್ಜೆಗಳನ್ನು ಸರಿಪಡಿಸಿಕೊಂಡು ಎಚ್ಚರಿಕೆಯಿಂದ ಮುಂದುವರಿಯಬೇಕಿದೆ. ಉಸ್ತುವಾರಿಗಳು ಸಹ ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಹಿಸಿದ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆ. 14ರಂದು ರಾಯಚೂರಿನ ಸಿಂಧನೂರಿನಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ. ರಾಜ್ಯ ಬಿಜೆಪಿ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ “ಆಪರೇಷನ್ ಕಮಲ’ದ ಆಡಿಯೋ ಪ್ರಕರಣದಿಂದ ಪಕ್ಷದ ಲೆಕ್ಕಾಚಾರಗಳು ತಲೆಕೆಳಗಾಗಿದ್ದವು. ಈ ವಿಚಾರ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರ ರಾಜಕಾರಣದಲ್ಲೂ ಪಕ್ಷಕ್ಕೆ ಮುಜುಗರ ಉಂಟುಮಾಡಿತ್ತು. ಈ ಬೆಳವಣಿಗೆಗಳಿಂದ ವರಿಷ್ಠರು ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಮಹತ್ವದ ಕೋರ್ ಕಮಿಟಿ ಸಭೆ
ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯೂ ನಿಗದಿಯಾಗಿದ್ದು, ಅದರಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ನಾಯಕರೊಂದಿಗೆ ನೇರವಾಗಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಖಾಮುಖೀ ಮಾತುಕತೆಯ ಬಳಿಕ ಕೆಲ ನಿರ್ದಿಷ್ಟ ಸೂಚನೆಗಳನ್ನು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಾಕೀತು ಮಾಡುವ ಸಾಧ್ಯತೆ ಇದೆಎಂದು ಉನ್ನತ ಮೂಲಗಳು ತಿಳಿಸಿವೆ.
ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ನಿರಂತರವಾಗಿ ತಮ್ಮದೇ ಮೂಲಗಳಿಂದ ಮಾಹಿತಿ ಪಡೆಯುತ್ತಿರುವ ವರಿಷ್ಠರು ಈವರೆಗೆ ರಾಜ್ಯ ನಾಯಕರಿಗೆ ಸ್ಪಷ್ಟ ನಿರ್ದೇಶನ ನೀಡಿದಂತಿರಲಿಲ್ಲ. ಇದು ರಾಜ್ಯ ಬಿಜೆಪಿ ನಾಯಕರ ತಲೆಬಿಸಿಗೂ ಕಾರಣವಾಗಿದೆ. ಈಚಿನ ಬೆಳವಣಿಗೆ ಬಗ್ಗೆ ಮುಖಾಮುಖೀ ಚರ್ಚೆಗೆ ಮುಂದಾದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ ಎಂಬ ಆತಂಕವು ಕೆಲ ನಾಯಕರಲ್ಲಿ ಮನೆ ಮಾಡಿದೆ ಎನ್ನಲಾಗಿದೆ. ಒಟ್ಟಾರೆ ಅಮಿತ್ ಶಾ ಅವರ ಸೂಚನೆ ಬಳಿಕವಷ್ಟೇ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಇನ್ನಷ್ಟು ಶರವೇಗದಿಂದ ಸಜ್ಜಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
– ಎಂ. ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.