ನಾಳೆ ಶಾ ಆಗಮನ ಶ್ರೀಗಳ ಜತೆ ಚರ್ಚೆ
Team Udayavani, Mar 25, 2018, 6:00 AM IST
ಬೆಂಗಳೂರು: ರಾಜ್ಯ ಸರ್ಕಾರ ಲಿಂಗಾಯಿತ ವೀರಶೈವ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸು ಮಾಡಿದ ಬೆನ್ನಲ್ಲೇ ವೀರಶೈವ-ಲಿಂಗಾಯಿತ ಮಠಾಧೀಶರ ಭೇಟಿಗಾಗಿ ಆಗಮಿಸುತ್ತಿರುವ ಅಮಿತ್ ಶಾ ರಾಜ್ಯ ಪ್ರವಾಸ ಯಶಸ್ವಿಗೊಳಿಸುವ ಸಂಬಂಧ ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಿತು.
ರಾಜ್ಯ ಸರ್ಕಾರದ ಕ್ರಮಕ್ಕೆ ಅಖೀಲ ಭಾರತ ವೀರಶೈವ ಮಹಾಸಭಾ ಸಹ ಖಂಡನಾ ನಿರ್ಣಯ ಕೈಗೊಂಡಿರುವುದು ಬಿಜೆಪಿಯ ವಾದ ಕ್ಕೆ ಬಲ ಬಂದಂತಾಗಿದ್ದು ಅಮಿತ್ ಶಾ ಪ್ರವಾಸ ಸಂದರ್ಭದಲ್ಲಿ ಇದೇ ವಿಚಾರ ಪ್ರಮುಖವಾಗಿ ಪ್ರಸ್ತಾಪಿಸಿ ರಾಜ್ಯಸರ್ಕಾರದ ವಿರುದ್ಧ ವಾಗಾœಳಿ ನಡೆಸಲು ನಿರ್ಧರಿಸಲಾಯಿತು.
ಎರಡು ದಿನಗಳ ಭೇಟಿ ಸಂದರ್ಭದಲ್ಲಿ ಸಿದ್ಧಗಂಗಾ, ಸಿರಿಗೆರೆ, ಮುರುಘಾ ಮಠ ಭೇಟಿ ನೀಡಿ ಶ್ರೀಗಳ ಜತೆ ರಾಜ್ಯ ಸರ್ಕಾರದ ಕ್ರಮದ ಬಗ್ಗೆಯೂ ಚರ್ಚಿಸಿ ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕು ಎಂಬ ಸಲಹೆ ಸಹ ಪಡೆಯಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಹೇಳಲಾಗಿದೆ. ರಾಹುಲ್‌ಗಾಂಧಿ ಪ್ರವಾಸ, ಎಚ್.ಡಿ.ಕುಮಾರಸ್ವಾಮಿ ವಿಕಾಸಪರ್ವ ಯಾತ್ರೆಯಿಂದ ಬಿಜೆಪಿ ಮೇಲಾಗುವ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ.
ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿ ಸ್ಥಳೀಯ ನಾಯಕರ ಜತೆ ಚರ್ಚಿಸಿ ಆದಷ್ಟು ಶೀಘ್ರ ಸೇರ್ಪಡೆಗೆ ಸಮ್ಮತಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಆದರೆ, ಸೇರ್ಪ ಡೆಗೂ ಮುನ್ನ ಆಯಾ ಕ್ಷೇತ್ರಗಳಲ್ಲಿನ ನಾಯಕರ ಅಭಿಪ್ರಾಯ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್‌ನಿಂದ ನಕಲಿ ಮತದಾರರ ತಯಾರಿಕೆ?
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನಕಲಿ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಪ್ರಯತ್ನ ನಡೆಸಿದೆ ಎಂಬ ದೂರುಗಳ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತರಲು ಬಿಜೆಪಿ ಕೋರ್ ಕಮಿಟಿ ತೀರ್ಮಾನಿಸಿದೆ. ಜತೆಗೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣೆಯಲ್ಲಿ ಲಾಭ ಪಡೆಯಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಖಾಸಗಿ ಸ್ವತ್ತುಗಳ ಮೇಲೆ ಹಾಕಲಾದ ಬಿಜೆಪಿ ಚಿಹ್ನೆ ಅಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳೇ ಇದರ ನೇತೃತ್ವ ಸಹ ವಹಿಸಿದ್ದಾರೆ. ಇದನ್ನು ಆಯೋಗದ ಗಮನಕ್ಕೆ ತರಬೇಕು ಎಂದು ಚರ್ಚಿಸಲಾಯಿತು.
ನಾಳೆಯಿಂದ ಶಾ ಪ್ರವಾಸ
ಮಾ.26,27
ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ
ಮಾ. 30,31
ಮೈಸೂರು, ಮಂಡ್ಯ, ಚಾಮರಾಜನಗರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.