ಶ್‌! ಚಾಡಿ ಹೇಳಂಗಿಲ್ಲ : ಓನ್ಲಿ ಚುನಾವಣೆ ಕಾರ್ಯತಂತ್ರ


Team Udayavani, Aug 12, 2017, 8:00 AM IST

Amith-Sha-1-600.jpg

ಬೆಂಗಳೂರು: ಬಿಜೆಪಿ ಮಟ್ಟಿಗೆ ಮಾತ್ರವಲ್ಲ, ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲೂ ಕೌತುಕ ಮೂಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ 3 ದಿನಗಳ ರಾಜ್ಯ ಭೇಟಿ ಶನಿವಾರ ಆರಂಭವಾಗುತ್ತಿದೆ. ಒಳಗೊಳಗೆ ಸಾಕಷ್ಟು ಭಿನ್ನಾಭಿಪ್ರಾಯಗಳಿಂದ ಕುದಿಯುತ್ತಿರುವ ರಾಜ್ಯ ಬಿಜೆಪಿ ನಾಯಕರು ಶಾ ಭೇಟಿ ಸಮಯದಲ್ಲಿ ಅದನ್ನೆಲ್ಲ ತೋರಿಸುವ ಹಾಗಿಲ್ಲ. ಏಕೆಂದರೆ, ಅದಾವುದಕ್ಕೂ ಶಾ ಸೊಪ್ಪು ಹಾಕುವುದಿಲ್ಲ!

ಸಾಮಾನ್ಯವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬಂದರೆ ಸಂಘಟನೆಯಷ್ಟೇ ಮುಖ್ಯವಾಗಿ ಪಕ್ಷದ ಆಂತರಿಕ ಭಿನ್ನಮತ, ದೂರುಗಳ ಸುರಿ ಮಳೆಯಾಗುತ್ತದೆ. ಆದರೆ, ಶಾ ಪ್ರವಾಸದ ಅವಧಿಯಲ್ಲಿ ಪಕ್ಷದ ರಾಜ್ಯ ನಾಯಕರ ವಿರುದ್ಧ ದೂರುಗಳಿಗೆ ಅವಕಾಶವಿಲ್ಲ. ಕೇವಲ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದನ್ನೇ ದೃಷ್ಟಿಯಲ್ಲಿಟ್ಟು ಕಾರ್ಯತಂತ್ರಗಳನ್ನು ಸಿದ್ಧಪಡಿಸಲು ಸೀಮಿತಗೊಳಿಸುವಂತೆ ಶಾ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೆಂಪೇಗೌಡ ಅಂ.ರಾ.ವಿಮಾನ ನಿಲ್ದಾಣದಿಂದ ಶನಿವಾರ ಬೆಳಗ್ಗೆ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಲಿರುವ ಅಮಿತ್‌ ಶಾ ಅವರು ತತ್‌ಕ್ಷಣದಿಂದಲೇ ಕಾರ್ಯಪ್ರವೃತ್ತರಾಗಲಿದ್ದು, ಈಗಾಗಲೇ ಕಾರ್ಯಕ್ರಮಗಳ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಇದನ್ನು ಹೊರತುಪಡಿಸಿ ಬೇರೆಯವರ ಭೇಟಿಗೆ ಅವಕಾಶವೇ ಇಲ್ಲ ಎನ್ನಲಾಗಿದೆ.

3 ದಿನಗಳ ಪ್ರವಾಸದಲ್ಲಿ ಶಾ ಅವರು ಪಕ್ಷದ ಎಲ್ಲ ಪ್ರಮುಖರ ಜತೆ ಮಾತುಕತೆ ನಡೆಸಲಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನಷ್ಟೇ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯತ್ತ ಗಮನ ಹರಿಸಲಿದ್ದಾರೆ. ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳನ್ನು ಈಗಾಗಲೇ ಬಗೆಹರಿದಿರುವುದರಿಂದ ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಹೋಗಲು ಏನು ಮಾಡಬೇಕು ಎಂಬ ಬಗ್ಗೆ ಸಲಹೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಮಿಷನ್‌ 150ಗೆ ಪೂರಕ ವಾತಾವರಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತಳಮಟ್ಟದಿಂದ ಕೆಲಸ ಆಗಬೇಕಾಗುತ್ತದೆ. ಅದಕ್ಕಾಗಿ ತಳಮಟ್ಟದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಆವಶ್ಯಕತೆ ಇದೆ. ರಾಜ್ಯದಲ್ಲಿ ಇತ್ತೀಚೆಗೆ ಉದ್ಭವವಾಗಿದ್ದ ಭಿನ್ನಮತ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ನಾಯಕರನ್ನು ಒಟ್ಟಾಗಿ ಕೂರಿಸಿ ಪರಸ್ಪರ ವಿಶ್ವಾಸ ಮೂಡಿಸುವ ಕೆಲಸವನ್ನು ಅಮಿತ್‌ ಶಾ ಅವರು ಮಾಡಲಿದ್ದಾರೆ. ಆ ಮೂಲಕ ಕಾರ್ಯಕರ್ತರನ್ನು ಸಕ್ರಿಯಗೊಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮಿಷನ್‌-150ರ ಗುರಿ ತಲುಪಲು ಪೂರಕವಾಗಿ ಕೆಲಸ ಮಾಡುವಂತೆ ಪ್ರೇರೇಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2019ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಬಗ್ಗೆಯೂ ಸಿದ್ಧತೆ ಆರಂಭವಾಗಲಿದೆ. ಸಂಸದರೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್‌ ಶಾ ಬಳಿಕ ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೋಲು ಅನುಭವಿಸಿದ 11 ಲೋಕಸಭಾ ಕ್ಷೇತ್ರಗಳ ಉಸ್ತುವಾರಿಗಳನ್ನು ಕರೆಸಿ ಮಾತುಕತೆ ನಡೆಸಲಿದ್ದಾರೆ. ಆ ಮೂಲಕ ಅಲ್ಲಿ ಈಗಿನಿಂದಲೇ ಪಕ್ಷ ಸಂಘಟನೆಗೆ ಸೂಚನೆಗಳನ್ನು ನೀಡಲಿದ್ದಾರೆ.

ಪರಿವಾರದ ಜತೆ ಮಾತುಕತೆ: ಅಮಿತ್‌ ಶಾ ಸೋಮವಾರ ಬೆಳಗ್ಗೆ ಸಂಘ ಪರಿವಾರದ ಮುಖಂಡರೊಂದಿಗೆ ಸುದೀರ್ಘ‌ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಗಣ್ಯರ ಸಭೆಗೆ ದೇವಿಶೆಟ್ಟಿ, ಚಿಮೂ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಶನಿವಾರ ಸಂಜೆ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಮಾಲೋಚನೆ ನಡೆಸಲಿದ್ದು, ಸುಮಾರು 600ರಿಂದ 800 ಮಂದಿಗೆ ಆಹ್ವಾನ ನೀಡಲಾಗಿದೆ. ನಗರದ ಖಾಸಗಿ ಹೊಟೇಲ್‌ನಲ್ಲಿ ಸಂಜೆ 6.45ಕ್ಕೆ ನಡೆಯುವ ಈ ಸಮಾಲೋಚನೆಗೆ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ| ದೇವಿಶೆಟ್ಟಿ, ಹಿರಿಯ ಸಂಶೋಧಕ ಡಾ| ಎಂ. ಚಿದಾನಂದಮೂರ್ತಿ, ಸಾಹಿತಿ ಸುಮತೀಂದ್ರ ನಾಡಿಗ್‌, ಚಿತ್ರ ನಿರ್ದೇಶಕ ಟಿ.ಎಸ್‌. ನಾಗಾಭರಣ, ವಿವಿಧ ಕಂಪೆನಿಗಳ ಸಿಇಒಗಳು, ಪ್ರಮುಖ ವಕೀಲರು, ಲೆಕ್ಕ ಪರಿಶೋಧಕರು, ಉದ್ಯಮಿಗಳನ್ನು ಆಹ್ವಾನಿಸಲಾಗಿದೆ. ನಟ ಉಪೇಂದ್ರ ಅವರಿಗೂ ಆಹ್ವಾನವಿದೆ ಎಂದು ಹೇಳಲಾಗುತ್ತಿದೆಯಾದರೂ ಅದು ಖಚಿತವಾಗಿಲ್ಲ.

ಉಪೇಂದ್ರ ಬಿಜೆಪಿ ಸೇರ್ತಾರಾ?
ಚಿತ್ರನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಜೋರಾಗಿ ಕೇಳಿಬರುತ್ತಿದೆಯಾದರೂ ಅವರೇನೂ ಈ ತನಕ ಅಧಿಕೃತವಾಗಿ ಬಾಯಿಬಿಟ್ಟಿಲ್ಲ. ಆದರೆ, ದಟ್ಟವಾಗಿ ಹರಡುತ್ತಿರುವ ಸುದ್ದಿಗೆ ಪೂರಕವಾಗಿ ಇಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿ ಹಾಗೂ ತಮ್ಮ ಮುನ್ನೋಟದ ಕುರಿತು ಆಡಿಯೋವೊಂದನ್ನು ಅನಾಮತ್ತಾಗಿ ಹರಿಯಬಿಟ್ಟು ಬೆಂಕಿಗೆ ಗಾಳಿ ಹಾಕಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ, ಈಗಾಗಲೇ ಉಪೇಂದ್ರ ಅವರನ್ನು ಪಕ್ಷಕ್ಕೆ ಆಹ್ವಾನಿಸಲಾಗಿದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಂತೆ. ನಟ ಉಪೇಂದ್ರ ಅವರು ಮೋದಿ ಅಭಿಮಾನಿಯಾಗಿದ್ದು, ಅವರ ಕುರಿತಾದ ಚಲನಚಿತ್ರವೊಂದನ್ನು ಮಾಡಲು ಕೂಡ ಮುಂದಾಗಿದ್ದಾರೆ. ಹೀಗಾಗಿ ಅಮಿತ್‌ ಶಾ ಅವರು ಬೆಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿ ಪಕ್ಷ ಸೇರಬಹುದು ಎಂಬ ಮಾತು ಕೇಳಿಬರುತ್ತಿದೆ.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.