ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

Team Udayavani, Jan 19, 2022, 12:28 PM IST

ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

ಬೆಂಗಳೂರು: ನಗರದ ಪ್ರಮುಖ ರಸ್ತೆಗಳನ್ನಾದರೂ ಶಾಶ್ವತವಾಗಿ ಗುಂಡಿ ಮುಕ್ತಗೊಳಿಸುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ “ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ’ದಡಿ ಗರಿಷ್ಠ ಮೊತ್ತವನ್ನು ವೈಟ್‌ ಟಾಪಿಂಗ್‌ ರಸ್ತೆಗಳ ನಿರ್ಮಾಣಕ್ಕೆ ವಿನಿಯೋಗಿಸಲು ಚಿಂತನೆ ನಡೆದಿದೆ.

ಇತ್ತೀಚೆಗಷ್ಟೇ ಆರು ಸಾವಿರ ಕೋಟಿ ಅಂದಾಜು ಮೊತ್ತದ ಉದ್ದೇಶಿತ ಅಮೃತ ನಗರೋತ್ಥಾನ ಯೋಜನೆಗೆ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ಇದರಡಿ ನಗರದ ರಸ್ತೆ, ಗ್ರೇಡ್‌ ಸಪರೇಟರ್‌, ಕೆರೆ, ಬೃಹತ್‌ ನೀರು ಗಾಲುವೆ, ಕಟ್ಟಡಗಳು, ಘನತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳು, ಉದ್ಯಾನಗಳು, ಆಸ್ಪತ್ರೆ, ಕೊಳಚೆಪ್ರದೇಶ, ಶಾಲಾ ಕಟ್ಟಡದ ನಿರ್ಮಾಣ ಮತ್ತಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಪೈಕಿ ರಸ್ತೆ ಅಭಿವೃದ್ಧಿಯಲ್ಲಿ ಅತಿಹೆಚ್ಚು ವೈಟ್‌ಟಾಪಿಂಗ್‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಯೋಚನೆ ನಡೆದಿದೆ.

ಇದು ಸಾಧ್ಯವಾದರೆ, ನೂರಾರು ಕಿ.ಮೀ. ಮುಖ್ಯರಸ್ತೆ ಗಳು ಶಾಶ್ವತ ಗುಂಡಿಮುಕ್ತವಾಗಿ ಪರಿವರ್ತನೆ ಆಗಲಿವೆ. “ನಗರದಲ್ಲಿ ಕಳೆದ ಐದು ವರ್ಷಗಳಲ್ಲಿ ಬಿದ್ದ ಮಳೆ ಮತ್ತು ಅದರಿಂದ ಉಂಟಾದ ದಿಢೀರ್‌ ನೆರೆ ನಡುವೆಯೂ ಒಂದೇ ಒಂದು ಗುಂಡಿ ಸೃಷ್ಟಿಯಾಗದ ರಸ್ತೆಗಳೆಂದರೆ ವೈಟ್‌ಟಾಪಿಂಗ್‌ ಮತ್ತು ಟೆಂಡರ್‌ಶ್ಯೂರ್‌. ಈ ಮಾದರಿಯ ರಸ್ತೆಗಳ ಬಾಳಿಕೆ ಒಂದು ತಲೆಮಾರು ಅಂದರೆ 20-25 ವರ್ಷ. ಆ ರಸ್ತೆಗಳೇ ತಮ್ಮ ಗುಣಮಟ್ಟದ ಬಗ್ಗೆ ಮಾತನಾಡುತ್ತಿವೆ. ಅಷ್ಟಕ್ಕೂ ಬೆಳೆಯುತ್ತಿರುವ ಬೆಂಗಳೂರು ಮತ್ತು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಮಳೆ ಹಾಗೂ ನೆರೆ ಹಾವಳಿಗೆ ವೈಟ್‌ಟಾಪಿಂಗ್‌ ಹೇಳಿ ಮಾಡಿಸಿದಂತಿವೆ. ಆದ್ದರಿಂದ ಅಮೃತ ನಗರೋತ್ಥಾನದಡಿ ಸಾಧ್ಯವಾದಷ್ಟು ಹೆಚ್ಚು ಅನುದಾನವನ್ನು ಈ ಮಾದರಿಯ ರಸ್ತೆಗಳ ನಿರ್ಮಾಣಕ್ಕೆ ವಿನಿಯೋಗಿಸುವ ಚಿಂತನೆ ಇದೆ. ಅಂತಿಮವಾಗಿ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಬಿಬಿಎಂಪಿ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರ್ಷಕ್ಕೆ 200 ಕಿ.ಮೀ. ನಿರ್ಮಿಸುವ ಸಾಮರ್ಥ್ಯ: “ಕಳೆದ ಸುಮಾರು ನಾಲ್ಕೂವರೆ ವರ್ಷಗಳಲ್ಲಿ ನಗರದಲ್ಲಿ ಅಂದಾಜು ಸಾವಿರ ಕೋಟಿ ರೂ. ವೆಚ್ಚದಲ್ಲಿ ನೂರು ಕಡೆಗಳಲ್ಲಿ ಒಟ್ಟಾರೆ 105 ಕಿ.ಮೀ. ವೈಟ್‌ಟಾಪಿಂಗ್‌ ರಸ್ತೆ ಗಳನ್ನು ನಿರ್ಮಿಸಲಾಗಿದೆ. ಕೊರೊನಾ ಹಾವಳಿ ಮತ್ತು ಲಾಕ್‌ಡೌನ್‌ ಹಾಗೂ ಕಾರ್ಮಿಕರ ವಲಸೆ ನಡುವೆ ಈಕೆಲಸ ಆಗಿದೆ. ಗುರಿ ಇರುವುದು 152 ಕಿ.ಮೀ. ಮಾರ್ಚ್‌ ಅಂತ್ಯಕ್ಕೆ 47 ಕಿ.ಮೀ. ಕೂಡ ಪೂರ್ಣ ಗೊಳ್ಳಲಿದೆ. ಇದೇ ಅನುಭವದಿಂದ ಸಮರ್ಪಕ ಮತ್ತು ಸಕಾಲಿಕ ಅನುದಾನ ದೊರೆತರೆ, ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ 800-1000 ಕಿ.ಮೀ. ರಸ್ತೆಗಳನ್ನು ವೈಟ್‌ಟಾಪಿಂಗ್‌ಗೆಪರಿವರ್ತನೆ ಮಾಡಬಹುದು. ಮುಖ್ಯವಾಗಿ ಇಲ್ಲಿ ಯುಟಿಲಿಟಿ ಸ್ಥಳಾಂತರಕ್ಕೆ ಹೆಚ್ಚು ಸಮಯ ವ್ಯಯವಾಗುತ್ತದೆ. ನಗರದಲ್ಲಿ 1,300 ಕಿ.ಮೀ. ಮುಖ್ಯರಸ್ತೆಗಳಿವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಸಾಂಪ್ರದಾಯಿಕ ಡಾಂಬರು ರಸ್ತೆಗಳಿಗೆ ಹೋಲಿಸಿದರೆ, ವೈಟ್‌ ಟಾಪಿಂಗ್‌ ರಸ್ತೆಗಳ ನಿರ್ಮಾಣ ತುಸು ದುಬಾರಿ. ಡಾಂಬರು ರಸ್ತೆಗೆ ಪ್ರತಿ ಕಿ.ಮೀ.ಗೆ 4-6 ಕೋಟಿ ರೂ. ಖರ್ಚಾಗಲಿದ್ದು, ಬಾಳಿಕೆ 3-5 ವರ್ಷ. ಅದೇ ರೀತಿ ವೈಟ್‌ಟಾಪಿಂಗ್‌ಗೆ 10-12 ಕೋಟಿ ರೂ. ಆಗಲಿದ್ದು, ಬಾಳಿಕೆ20-25 ವರ್ಷ ಆಗಿದೆ. ನಿರ್ವಹಣೆ ಕಿರಿಕಿರಿ ಇರುವುದಿಲ್ಲ’ಎಂದು ಮತ್ತೂಬ್ಬ ಹಿರಿಯ ಅಧಿಕಾರಿ ತಿಳಿಸಿದರು.

ದಕ್ಷಿಣ ಭಾರತದ ಮೊದಲ ವೈಟ್‌ಟಾಪಿಂಗ್‌ :

ಹೊಸೂರು ರಸ್ತೆಯ ಮಡಿವಾಳ ಅಂಡರ್‌ಪಾಸ್‌ ದಕ್ಷಿಣ ಭಾರತದ ಮೊದಲ ವೈಟ್‌ಟಾಪಿಂಗ್‌ ರಸ್ತೆ ಆಗಿದೆ! ಸುಮಾರು 11 ವರ್ಷಗಳ ಹಿಂದೆ ಸುಮಾರು 500 ಮೀಟರ್‌ ಉದ್ದದ ಅಂಡರ್‌ಪಾಸ್‌ ಅನ್ನು ವೈಟ್‌ಟಾಪಿಂಗ್‌ ಮಾಡಲಾಗಿತ್ತು. ಈಗಲೂ ಆ ರಸ್ತೆಯಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಇದೇ ಮಾದರಿಯನ್ನು ಇಟ್ಟು ಕೊಂಡು ಮುಂಬೈನಲ್ಲಿ ಅನೇಕ ಉಪ ಮುಖ್ಯ ರಸ್ತೆಗಳನ್ನು ವೈಟ್‌ ಟಾಪಿಂಗ್‌ ಆಗಿ ಪರಿವರ್ತಿಸಲಾಗಿದೆ.

ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.