Bangalore: ಪರಶುರಾಮ್‌ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ! 

Team Udayavani, Jan 28, 2024, 1:02 PM IST

Bangalore: ಪರಶುರಾಮ್‌ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ! 

ಬೆಂಗಳೂರು:  ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನುಗ್ಗಲು ಯತ್ನಿಸಿದ ಮೈಸೂರು ಮೂಲದ ಪರಶುರಾಮ್‌ ಎಂಬಾತನ ವಿರುದ್ಧ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

ಮತ್ತೂಂದೆಡೆ ಆರೋಪಿ ಪರಶುರಾಮ್‌ನ ವಿಚಾರಣೆ ವೇಳೆ ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಅವರ ಎದುರೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಪರಶುರಾಮ್‌ ವಿರುದ್ಧ ಸಾರ್ವಜನಿಕರಲ್ಲಿ  ಆತಂಕ ಉಂಟುಮಾಡುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮೈಸೂರು ಮೂಲದ ಪರಶುರಾಮ್ 1993ರಲ್ಲಿ ಕೆಪಿಎಸ್‌ಸಿ ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಫ‌ಲಿತಾಂಶವನ್ನು ಸರ್ಕಾರ ತಡೆಹಿಡಿದಿತ್ತು. ಅದರಿಂದ ಬೇಸತ್ತು ಮನವಿ ಕೊಡಲು ಪತ್ರಕರ್ತರ ಗ್ಯಾಲರಿಯಿಂದ ಜಿಗಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದರು. ಮೊದಲು ಸಿದ್ದರಾಮಯ್ಯ ಅವರ ಗಮನ ಸೆಳೆಯಲು ಪತ್ರ ಪ್ರದರ್ಶಿಸಿದ್ದರು. ಸಿದ್ದರಾಮಯ್ಯ ಅವರು ಗಮನಿಸದಿದ್ದಾಗ ಮೈದಾನಕ್ಕೆ ನುಗ್ಗಲು ಪ್ರಯತ್ನಿಸಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು, ಪರುಶರಾಮನನ್ನು ವಶಕ್ಕೆ ಪಡೆದಿದ್ದರು.

ಆರೋಪಿ ಪರಶುರಾಮ್‌ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರೂ ಎಂಬುದು ಪ್ರಾಥಮಿಕ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ 2017ರ ಫೆ.16 ರಂದು ಜ್ಞಾನ ಜ್ಯೋತಿ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮಕ್ಕೆ ನುಗ್ಗಿದ್ದ ಆರೋಪಿ, ಆಗ ಸಿಎಂ ಆಗಿದ್ದ ಸಿದ್ದರಾಮಯ್ಯನವರ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ವಶಕ್ಕೆ ಪಡೆದಿದ್ದ ಹಲಸೂರು ಗೇಟ್‌ ಪೊಲೀಸರು ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದರು. ಇದಾದ ಬಳಿಕ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸಿ ಅವಂತಾರ ಸೃಷ್ಟಿಸಿದ್ದ. ಶುಕ್ರವಾರ ಗಣರಾಜ್ಯೋತ್ಸವದ ದಿನ ಸಿಎಂ ಭೇಟಿಯಾಗಲು ನಿರ್ಧರಿಸಿ ಪಾಕ್ಷಿಕ ಪತ್ರಿಕೆಯ ಸಂಪಾದಕನ ಹೆಸರಲ್ಲಿ ಕಾರ್ಯಕ್ರಮದ ಪಾಸ್‌ ಪಡೆದು ಕೊಂಡಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

putin (2)

Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.