ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ


Team Udayavani, Jun 12, 2018, 11:07 AM IST

vij-2.jpg

ಸಿಂದಗಿ: ಮತ ಹಾಕಿ ನೀವು ನನ್ನ ಗೆಲ್ಲಿಸಿದ್ದಿರಿ ನಿಮ್ಮ ಋಣ ತೀರಿಸಲು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ ಎಂದು ನೂತನ ತೋಟಗಾರಿಕೆ ಸಚಿವರಾಗಿ ಎಂ.ಸಿ. ಮನಗೂಳಿ ಹೇಳಿದರು. ಸೋಮವಾರ ಪಟ್ಟಣದ ಅನಂದ ಚಿತ್ರಮಂದಿರದಲ್ಲಿ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಹಾಗೂ ಎಂ.ಸಿ. ಮನಗೂಳಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಕೃಷಿಯಲ್ಲಿ ಡಿಪ್ಲೋಮಾ ಪಾಸಾಗಿ 15 ವರ್ಷ ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ರೈತರ ಒಡನಾಡಿಯಾಗಿ ಬದುಕು ಸಾಗಿಸಿದ್ದೇನೆ. ಆಗ ರೈತರ ಮತ್ತು ಜನ ಸಾಮಾನ್ಯರ ಕಷ್ಟಗಳನ್ನು ಅರಿತೇನು. ಅವರ ಕಷ್ಟಗಳಿಗೆ ಸ್ಪಂದಿಸಿಲು ರಾಜಕೀಯ ಪ್ರವೇಶಿಸಿದ ನಂತರ ರಾಜಕೀಯ ಜೀವನ ನಿಮಗೆಲ್ಲರಿಗೂ ಗೊತ್ತು. ರೈತರ ಮೇಲಿನ ನನ್ನ ಕಾಳಜಿ ಗುರುತಿಸಿ ನಮ್ಮ ನಾಯಕರಾದ ಎಚ್‌.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತೋಟಗಾರಿಕೆ ಇಲಾಖೆ ಕ್ಯಾಬಿನೇಟ್‌ ಸಚಿವ ಸ್ಥಾನ ನೀಡುವ ಮೂಲಕ ರೈತರ ಸೇವೆಗೆ ಹೆಚ್ಚಿನ ಅವಕಾಶ ನೀಡಿದ್ದಾರೆ ಎಂದರು.

ಜಿಲ್ಲೆ ಬರಗಾಲ ಪ್ರದೇಶವಾಗಿದೆ. ಈ ಭಾಗದಲ್ಲಿ ಬೆಳೆಯುವ ದ್ರಾಕ್ಷಿ, ದಾಳಿಂಬೆ, ನಿಂಬೆ ಮುಂತಾದ ತೋಟಗಾರಿಕೆ ಬೆಳೆಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ತೋಟಗಾರಿಕೆ ಬೆಳೆ ಬೆಳೆಯುವ ರೈತರ ಸಂಕಷ್ಟಗಳು ಅರಿತಿದ್ದೇನೆ. ವಿಜಯಪುರ ಜಿಲ್ಲೆಯಲ್ಲದೇ ರಾಜ್ಯದ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ನನಗೆ ಸೇವೆ ಸಲ್ಲಿಸಲು ನೀಡಿದ ಅವಕಾಶವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಕ್ಷೇತ್ರದಲ್ಲಿ ಇನ್ನು ಹೆಚ್ಚು ತೋಟಗಾರಿಕೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡುತ್ತೇನೆ. ಹೆಚ್ಚಿನ ಅಧ್ಯಯನಕ್ಕಾಗಿ ಇಸ್ರೇಲ್‌ ದೇಶಕ್ಕೆ ಕಳುಹಿಸುತ್ತೇನೆ. ಅಲ್ಲಿ ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಇಳುವರಿಗೆ ತೆಗೆಯುವ ಪದ್ಧತಿ ಅಧ್ಯಯನ ಮಾಡಲು ಕಳುಹಿಸಲಾಗುವುದು. ತೋಟಗಾರಿಕೆ ಇಲಾಖೆ ಜವಾಬ್ದಾರಿ ಹೆಚ್ಚಿದೆ. ಇಲಾಖೆಯಲ್ಲಿ ರೈತರಿಗೆ ಸಿಗುವ ಸೌಲಭ್ಯ, ಸಬ್ಸಿಡಿ ಮುಂತಾದ ಮಾಹಿತಿ ಅಧ್ಯಯನ ಮಾಡಿ ಎಲ್ಲವನ್ನು ರೈತರಿಗೆ ತಲುಪಿಸುತ್ತೇನೆ ಎಂದರು. 

ನನ್ನ ದೇಹಕ್ಕೆ ವಯಸ್ಸಾಗಿರಬಹುದು ಕೆಲಸ ಮಾಡುವ ಮನಸ್ಸಿಗೆ ವಯಸ್ಸಾಗಿಲ್ಲ. ಅಧಿಕಾರದ ಅವಧಿಯಲ್ಲಿ ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಕ್ಯಾಬಿನೇಟ್‌ ಸಚಿವ ಸ್ಥಾನ ಸಿಕ್ಕಿರುವುದರಿಂದ ಹೆಚ್ಚು ಸಂಚಾರ, ಸಭೆಗಳಿಗೆ ಹಾಜರಾತಿ ಇರುವುದು ಹೆಚ್ಚಿರುತ್ತದೆ. ಇದರ ಮಧ್ಯದಲ್ಲಿ ಕ್ಷೇತ್ರದ ಪ್ರತಿ ಹೋಬಳಿಯಲ್ಲಿ ಒಂದೊಂದು ದಿನ ಇದ್ದು ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದರು.

ನನಗೆ ಸಲ್ಲಿಸಿದ ಸನ್ಮಾನ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಸಲ್ಲುತ್ತದೆ. ಅವರ ಶ್ರಮದ ಫಲವಾಗಿ ನಾನು ಇಂದು ನಿಮ್ಮ ಮುಂದೆ ಸಚಿವನಾಗಿ ನಿಂತಿದ್ದೇನೆ. ಚುನಾವಣೆ ಫಲಿತಾಂಶದ ನಂತರ ನಿರಂತರ ತಿರುಗಾಟದಲ್ಲಿನ ದಣಿವಿನ ಮಧ್ಯದಲ್ಲಿ ನಾನು ಸಿಂದಗಿ ಪಟ್ಟಣಕ್ಕೆ ಬಂದಿದ್ದೇನೆ. ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮ ನೋಡಿ ನನ್ನ ದಣಿವು ಮಾಯವಾಗಿ ಉತ್ಸಾಹ ತುಂಬಿದೆ ಎಂದರು.

ಮನಗೂಳಿ ಮನೆತನದ ಮೇಲೆ ಇಟ್ಟಿರುವ ವಿಶ್ವಾಸ ನಾವು ಎಂದು ಕಳೆದುಕೊಳ್ಳುವುದಿಲ್ಲ. ನಿಮ್ಮ ಆಶೀರ್ವಾದ ಸದಾ ಮನಗೂಳಿ ಮನೆತನದ ಮೇಲೆ ಇರಲಿ. ನನ್ನ ಮಗ ಅಶೋಕ ಮನಗೂಳಿ ಮೇಲೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದರು. 

ನನ್ನ ಅಧಿಕಾರದ ಅವಧಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡುವುದಿಲ್ಲ. ನಿಮ್ಮ ಸಮಸ್ಯೆಗಳಿಗೆ ನಾನು ನೇರವಾಗಿ ಸ್ಪಂದಿ ಸುತ್ತೇನೆ. ನಿಮ್ಮ 2 ಭಾವಚಿತ್ರಗಳು, ಆಧಾರ್‌ ಕಾರ್ಡ್‌ ಝರಾಕ್ಸ್‌ ಪ್ರತಿಯೊಂದಿಗೆ ಮೊಬೈಲ್‌ ನಂ. ನೀಡಿ. ನಿಮಗೆ ಗುರುತಿನ ಚೀಟಿ ನೀಡಲಾಗುವುದು. ಯಾವುದೇ ಇಲಾಖೆ ಕೆಲಸವಿರಲಿ ಅಧಿಕಾರಿಗಳನ್ನು ಕರೆಸಿ ನಿಮ್ಮ ಕೆಲಸ ಮಾಡುತ್ತೇನೆ. ನಿಮ್ಮಿಂದ ಯಾವುದೇ ಫಲಾಪೇಕ್ಷೆ ಪಡೆಯದೇ ಕೆಲಸ ಮಾಡುವ ಮೂಲಕ ನಿಮ್ಮ ಋಣತೀರಿಸಲಾಗುವುದು ಎಂದರು.

ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಗಲಿಕೆ ನಮಗೆ ದುಖಃ ತಂದಿದೆ. ಅವುರ ನನ್ನ ಒಡನಾಡಿ. ನನಗಿಂತ 3 ವರ್ಷ ದೊಡ್ಡವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು. ಶಿವಪ್ಪಗೌಡ ಬಿರಾದಾರ, ಗುರಣ್ಣಗೌಡ ಬಿರದಾರ ನಾಗಾವಿ ಬಿ.ಕೆ., ತಮ್ಮನಗೌಡ ಪಾಟೀಲ, ಧರ್ಮಪತ್ನಿ ಸಿದ್ದಮ್ಮ ಮನಗೂಳಿ, ಅಶೋಕ ಮನಗೂಳಿ, ಡಾ| ಮುತ್ತು ಮನಗೂಳಿ, ಸಿದ್ದರಾಮ ಪಾಟೀಲ, ಉಮೇಶ ಜೋಗುರ, ರಾಜಶೇಖರ ಕೂಚಬಾಳ, ಅರವಿಂದ ಹಂಗರಗಿ, ಸಿದ್ದಣ್ಣ ಚೌಧರಿ ಕನ್ನೊಳ್ಳಿ, ಶೈಲಾ ಸ್ಥಾವರಮಠ, ಯಾಕೂಬ ನಾಟೀಕಾರ, ಮುತ್ತು ಮುಂಡೇವಾಡಗಿ, ಮುತ್ತು ಸೊನ್ನದ, ಸಲಿಂ ಜುಮನಾಳ, ರಮೇಶ ಹೂಗಾರ, ಅರವಿಂದ ಹೂಗಾರ, ಶಂಕರ ಹೂಗಾರ
ಸೇರಿದಂತೆ ಕ್ಷೇತ್ರದ ಮತದಾರರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Waqf JPC President visit : Jolle couple, Jarakiholi visit to Vijayapura

Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.