ವಾಣಿವಿಲಾಸ್ ಆಸ್ಪತ್ರೆಯಲ್ಲಿ 5.9 ಕೆ.ಜಿ. ತೂಕದ ಶಿಶು ಜನನ
Team Udayavani, Jan 22, 2020, 3:06 AM IST
ಬೆಂಗಳೂರು: ನಗರದ ವಾಣಿವಿಲಾಸ ಆಸ್ಪತ್ರೆ ಯಲ್ಲಿ ಮೊದಲ ಬಾರಿಗೆ 5.9 ಕೆ.ಜಿ. ತೂಕದ ಶಿಶು ಜನಿಸಿದ್ದು, ಎಲ್ಲರನ್ನು ಅಚ್ಚರಿಗೊಳಿಸಿದೆ. ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಮೂಲದ ಸರಸ್ವತಿ ಮಂಗೂರ್ ಮತ್ತು ಯೋಗೇಶ್ ಮಂಗೂರ್ ದಂಪತಿಗಳಿಗೆ ಜನಿಸಿದ ಮಗು ಇದಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮತ್ತ ಮಗು ಇಬ್ಬರು ಆರೋಗ್ಯವಾಗಿದ್ದಾರೆ.
ಈ ದಂಪತಿ ಯಲಹಂಕ ಬಳಿ ವಾಸಿಸುತ್ತಿದ್ದರಿಂದ ಸರಸ್ವತಿಯು ಅಲ್ಲಿನ ಯಲಹಂಕ ಓಲ್ಡ್ ಟೌನ್ ಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಗು ದಪ್ಪ ಇರುವುದರಿಂದ ಹೆರಿಗೆ ಕಷ್ಟ ಎಂದು ವೈದ್ಯರು ಜ. 17ರಂದು ವಾಣಿವಿಲಾಸ ಆಸ್ಪತ್ರೆಗೆ ವರ್ಗಾಹಿಸಿದ್ದರು. ಮಗು ದಪ್ಪ ಇದ್ದ ಕಾರಣ ಸಹಜ ಹೆರಿಗೆ ಸಾಧ್ಯವಾಗದೇ ವೈದ್ಯರು 18ರಂದು ಬೆಳಗ್ಗೆ 7.46ಕ್ಕೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಗೀತಾ ಶಿವ ಮೂರ್ತಿ, ಸಾಮಾನ್ಯವಾಗಿ ಆರೋಗ್ಯಕರವಾಗಿ ಜನಿಸುವ ಯಾವುದೇ ಶಿಶು 2.5 ರಿಂದ 3 ಕೆ.ಜಿ. ತೂಕ ಹೊಂದಿರುತ್ತದೆ. ಅಪರೂಪಕ್ಕೊಮ್ಮೆ 3.5ರಿಂದ 4 ಕೆ.ಜಿ. ತೂಕದ ಶಿಶುಗಳು ಜನಿಸಿ ರು ವುದೂ ಉಂಟು. ಆದರೆ ವಾಣಿವಿಲಾಸ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ 5.9 ಕೆ.ಜಿ. ತೂಕದ ಗಂಡು ಶಿಶು ಜನಿಸಿದೆ.
ತಾಯಿಗೆ ಮಧುಮೇಹ, ರಕ್ತದೊತ್ತಡ ಇತರೆ ಸಮಸ್ಯೆ ಇದ್ದಾಗ ಈ ರೀತಿಯ ಮಗು ಜನಿಸುವ ಸಾಧ್ಯತೆಗಳು ಹೆಚ್ಚು. ಆದರೆ ಈ ಪ್ರಕರಣದಲ್ಲಿ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಗುವಿನ ತೂಕ ಹೆಚ್ಚಿರುವುದರಿಂದ ಮುಂದೆ ಯಾವುದೇ ಸಮಸ್ಯೆ ಎದುರಾಗದಿರಲಿ ಎಂಬ ಕಾರಣಕ್ಕೆ ಕೆಲ ಪರೀಕ್ಷೆಗಳನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಮಗುವನ್ನು ನೋಡಲು ಆಸ್ಪತ್ರೆ ಸಿಬ್ಬಂದಿ ಹಾಗೂ ವಿಕ್ಟೋರಿಯಾ ಆಸ್ಪತ್ರೆ ರೋಗಿಗಳ ಸಂಬಂಧಿಕರು ಮುಗಿಬೀಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.