Viral Video: ಕಬ್ಬನ್‌ ಪಾರ್ಕ್‌ನಲ್ಲಿ ಮಹಿಳೆಯರ ಮುಂದೆ ವೃದ್ಧನಿಂದ ಹಸ್ತಮೈಥುನ!


Team Udayavani, Aug 18, 2024, 11:39 AM IST

5

ಬೆಂಗಳೂರು: ಕಬ್ಬನ್‌ ಪಾರ್ಕ್‌ ಆವರಣದಲ್ಲಿ ಇತ್ತೀಚೆಗೆ ವೃದ್ಧನೊಬ್ಬ ಮಹಿಳೆಯರ ಮುಂದೆ ಹಸ್ತಮೈಥುನ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್‌ ಆಗಿದೆ. ಅಲ್ಲದೆ, ಸಾರ್ವಜನಿಕರೊಬ್ಬರು ತಮ್ಮ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್‌ ಮಾಡಿ, ನ್ಯಾಯ ಒದಗಿಸುವಂತೆ ನಗರ ಪೊಲೀಸರ ಮೊರೆ ಹೋಗಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಕಬ್ಬನ್‌ ಪಾರ್ಕ್‌ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಕಬ್ಬನ್‌ ಪಾರ್ಕ್‌ನಲ್ಲಿ ಮಹಿಳೆಯರು ಕುಳಿತುಕೊಂಡಿರುವ ಜಾಗದಲ್ಲಿ ಸುತ್ತಾಡಿರುವ ವೃದ್ಧ, ಅವರ ಮುಂಭಾಗದ ಮರದ ಕೆಳಗೆ ಕುಳಿತು ಹಸ್ತಮೈಥುನ ಮಾಡಿಕೊಂಡಿದ್ದಾನೆ. ಅದನ್ನು ಗಮನಿಸಿದ ಮಹಿಳೆಯರು, ವೃದ್ಧನಿಗೆ ಎಚ್ಚರಿಕೆ ನೀಡಿದ್ದಾರೆ. ಆಗ ಆತ ಸ್ಥಳದಿಂದ ಓಡಿದ್ದು, ಮಹಿಳೆ ಆತನನ್ನು ಹಿಂಬಾಲಿಸಿದ್ದಾರೆ. ಆದರೆ, ಆತ ಪರಾರಿಯಾಗಿದ್ದಾನೆ.

ವಿಡಿಯೋ ವೈರಲ್‌: ವೈರಲ್‌ ಆಗಿರುವ ಈ ವಿಡಿಯೋದಲ್ಲಿ ವೃದ್ಧ ಮರದಡಿ ಕುಳಿತಿದ್ದು, ಯಾರೂ ತನ್ನನ್ನು ನೋಡುತ್ತಿಲ್ಲ ಎಂದು ತಿಳಿದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ. ನಂತರ ಆತನನ್ನು ಮಹಿಳೆಯೊಬ್ಬರು ಪ್ರಶ್ನಿಸಿದ್ದು, ವೃದ್ಧ ಅದರಿಂದ ಗಾಬರಿಯಾಗಿ ಎದ್ದು ಅಲ್ಲಿಂದ ಓಡಿಹೋಗುತ್ತಿದ್ದಾನೆ. ಆರಂಭದಲ್ಲಿ ಆತನ ಮುಖವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೆ, ಏನು ಮಾಡ್ತಿದ್ದೀ ಎಂದು ಮಹಿಳೆ ಆತನನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಆತ ಏನು ಎನ್ನುತ್ತಾನೆ. ಸೆಕ್ಯೂರಿಟಿಯನ್ನು ಕರೆಯಬೇಕಾ ಎಂದು ಮಹಿಳೆ ಕೇಳುತ್ತಿರುವುದನ್ನು ಈ ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ  ವಾಸೀಂ ಎಂಬವರು, “ಈತ ಕಬ್ಬನ್‌ ಪಾರ್ಕ್‌ನಲ್ಲಿ ಮಹಿಳೆಯರು ಕುಳಿತುಕೊಳ್ಳುವ ಜಾಗಕ್ಕೆ ಬಂದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ ಎಂದು ಅನೇಕ ಮಹಿಳೆಯರು ಆರೋಪ ಮಾಡಿದ್ದಾರೆ’ ಎಂದು ವಿಡಿಯೋಗೆ ಶೀರ್ಷಿಕೆ ಕೊಟ್ಟಿದ್ದಾರೆ.

ವಾಸೀಂ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸರು, ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.  ಈ ಸಂಬಂಧ ಕಬ್ಬನ್‌ ಪಾರ್ಕ್‌ ಪೊಲೀಸರು ದೂರು ದಾಖಲಿಸಿಕೊಂಡುಡಿದ್ದು,  ವಿಡಿಯೋ ವೈರಲ್‌ ಮಾಡಿರುವ ವಾಸೀಂ ಅವರಿಗೆ ಇನ್ನಷ್ಟು ಮಾಹಿತಿ ನೀಡುವಂತೆ ನೋಟಿಸ್‌ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

 

 

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.