ಬಿಎಸ್‌ವೈ-ಅನಂತ್‌ ಸೀಡಿ ಮೋದಿಗೆ ರವಾನೆ

Team Udayavani, Feb 18, 2017, 12:35 PM IST

bsy-anath.jpg

ಬೆಂಗಳೂರು: ಹೈಕಮಾಂಡ್‌ಗೆ ಹಣ ನೀಡಿರುವ ವಿಚಾರದ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್‌ ನಡೆಸಿರುವ ಸಂಭಾಷಣೆಯ ಸೀಡಿಯನ್ನು ಯುವ ಕಾಂಗ್ರೆಸ್‌ ಅಂಚೆ ಮೂಲಕ ಅಮಿತ್‌ ಶಾಗೆ ಕಳುಹಿಸಿಕೊಟ್ಟಿದೆ.  ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಬೆಂಗಳೂರಿನ ಜನರಲ್‌ ಪೋಸ್ಟ್‌ ಆಫೀಸ್‌ಗೆ ತೆರಳಿ ಸೀಡಿಗಳನ್ನು ಅಮಿತ್‌ ಶಾ ವಿಳಾಸಕ್ಕೆ ಕಳುಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್‌ ಘಟಕದ ಕಾರ್ಯದರ್ಶಿ ಅಮೃತ್‌ರಾಜ್‌, ಬಿಜೆಪಿ ನಾಯಕರು ಹೈ ಕಮಾಂಡ್‌ಗೆ ನೀಡಿದ ಲಂಚದ ಹಣ ರಾಜ್ಯದ ಜನರಿಗೆ ಸೇರಿದ್ದು. ರಾಜ್ಯದ ಬಡ ಜನರ ಹಣವನ್ನು ವಾಪಸ್‌ ನೀಡಬೇಕು. ಯಡಿಯೂರಪ್ಪ, ಅನಂತಕುಮಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.  ರಾಜ್ಯ ಕಾಂಗ್ರೆಸ್‌ ಮಹಿಳಾ ಘಟಕದ ಕಾರ್ಯದರ್ಶಿ ಸೌಮ್ಯ ರೆಡ್ಡಿ ಮಾತನಾಡಿದರು.

ಬಿಎಸ್‌ವೈ-ಅನಂತ್‌ ವಿರುದ್ಧ ದೂರು: ಯಡಿಯೂರಪ್ಪ, ಅನಂತ ಕುಮಾರ್‌ ಬಿಜೆಪಿ ಹೈಕಮಾಂಡ್‌ಗೆ ಹಣ ನೀಡಿದ್ದಾರೆಂಬ ಸೀಡಿ ಬಯಲಾದ ಪ್ರಕರಣದ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವಿರುದ್ಧ ಕಾಂಗ್ರೆಸ್‌ ಮುಖ್ಯ ಸಚೇತಕ ಐವಾನ್‌ ಡಿಸೋಜಾ ಮಲ್ಲೇಶ್ವರ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.  ದೂರು ಪಡೆದಿರುವ ಪೊಲೀಸರು, ಎಫ್ಐಆರ್‌ ದಾಖಲಿಸಿಲ್ಲ. ದೂರು ಭ್ರಷ್ಟಾಚಾರದ ಪ್ರಕರಣದಡಿ ಬರುವುದರಿಂದ ಪೊಲೀಸರ ವ್ಯಾಪ್ತಿಗೆ ಬರುವುದಿಲ್ಲ.

ದೂರು ಪಡೆದಿದ್ದು, ಈ ಸಂಬಂಧ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಯಡಿಯೂರಪ್ಪ, ಅನಂತ್‌ ಕುಮಾರ್‌ ಅವರು ಬಿಜೆಪಿ ಹೈಕಮಾಂಡ್‌ಗೆ ಹಣ ಕೊಟ್ಟಿರುವ ಬಗ್ಗೆ ಸಂಭಾಷಣೆ ನಡೆಸಿದ್ದಾರೆ. 58 ಸೆಕೆಂಡ್‌ಗಳ ಸಂಭಾಷಣೆ ವಿಡಿಯೋದಲ್ಲಿದ್ದು, ಈ ಬಗ್ಗೆ ತನಿಖೆಯಾಗಬೇಕೆಂದು ಡಿಸೋಜಾ ದೂರಿನಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.