ಸಿಎಂ ಸ್ಥಾನದಲ್ಲಿರಲು ಅನಂತ್‌ ಕಾರಣ

ದಿ.ಅನಂತಕುಮಾರ್‌ 61ನೇ ಜನ್ಮದಿನದಲ್ಲಿ ಸಿಎಂ ಬಿಎಸ್‌ವೈ ನುಡಿ

Team Udayavani, Sep 23, 2020, 2:44 PM IST

ಸಿಎಂ ಸ್ಥಾನದಲ್ಲಿರಲು ಅನಂತ್‌ ಕಾರಣ

ಅನಂತ ನಮನಕಾರ್ಯಕ್ರಮದಡಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಮಾರಂಭ ದಲ್ಲಿ ಅನಂತ ಪಥ ಮಾಸಿಕ ಪತ್ರಿಕೆಯನ್ನು ಸಿಎಂಯಡಿಯೂರಪ್ಪ ಬಿಡುಗಡೆಗೊಳಿಸಿದರು. ಸಚಿವ ಜಗದೀಶ್‌ ಶೆಟ್ಟರ್‌, ಸಿ.ಟಿ.ರವಿ ಇತರರಿದ್ದರು.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಈ ಮಟ್ಟಕ್ಕೆ ಬೆಳೆದಿದ್ದರೆ ಹಾಗೂ ನಾನು ಮುಖ್ಯಮಂತ್ರಿಯಾಗಿ ಈ ಸ್ಥಾನದಲ್ಲಿ ಕುಳಿತಿದ್ದರೆ ಅದಕ್ಕೆಅನಂತ ಕುಮಾರ್‌ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕೇಂದ್ರದ ಮಾಜಿ ಸಚಿವರಾದ ದಿವಂಗತ ಅನಂತ ಕುಮಾರ್‌ ಅವರ 61ನೇ ಜನ್ಮದಿನದ ಹಿನ್ನೆಲೆಯಲ್ಲಿ ಅನಂತ ನಮನ ಕಾರ್ಯಕ್ರಮದಡಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಅನಂತ ಪಥ ಮಾಸಿಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನನ್ನ ಹಾಗೂ ಅನಂತ ಕುಮಾರ್‌ ಅವರ ಸ್ನೇಹ ‌ 30 ವರ್ಷಕ್ಕಿಂತ ಹಿಂದಿನದು. ಆಗೆಲ್ಲಾ ನಾನು, ಅನಂತ ಕುಮಾರ್‌, ತೇಜಸ್ವಿನಿ ಅನಂತ ಕುಮಾರ್‌ ಅವರು ಬಹಳ ಕಾಲ ಒಂದೇ ಮನೆಯಲ್ಲಿದ್ದೆವು. ಬೆಳಗ್ಗೆ ವಾಯುವಿಹಾರಕ್ಕೆ ಹೋಗುವಾಗ ನಮ್ಮ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತಿದ್ದೆವು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, ನಾವು ಭೇಟಿ ನೀಡಿದ ಹಳ್ಳಿ, ಊರುಗಳಿಲ್ಲ.ರಾಜ್ಯದಲ್ಲಿ ಪಕ್ಷಈ ಮಟ್ಟಕ್ಕೆಬೆಳೆಯಲು ಅನಂತ ಕುಮಾರ್‌ ಅವರ ನಿಸ್ವಾರ್ಥ ಸೇವೆ ಕಾರಣ. ಆ ದಿನಗಳನ್ನು, ಅವರ ಅಗಲಿಕೆಯನ್ನು ನೆನೆದರೆ ಕಣ್ಣೀರು ಬರುತ್ತದೆ ಎಂದು ಸ್ಮರಿಸಿದರು.

ಆರು ಬಾರಿ ಸಂಸದರಾಗಿ ನಾನಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಅವರು ಮೇರು ನಾಯಕರಾಗಿದ್ದರು.ನಾವುಹಿಂದೆಲ್ಲಾ ಸಂಸತ್ತಿನಲ್ಲಿನ ಅವರ ಕಚೇರಿಗೆ ತೆರಳಿದಾಗ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಕಚೇರಿಗೆ ಕಳಿಸಿ ಸ್ಥಳದಲ್ಲೇ ಕೆಲಸ ಮಾಡಿಸಿಕೊಡುತ್ತಿದ್ದರು ಎಂದು ಗುಣಗಾನ ಮಾಡಿದರು. ಅನಂತ್‌ ಕುಮಾರ್‌ ಅವರ ನಾಯಕತ್ವ, ಜೀವನದಿಂದ ನಾವು ಕಲಿಯಬೇಕಾದ ಪಾಠ ಬಹಳಷ್ಟಿವೆ. ಪ್ರತಿಷ್ಠಾನವು ಬೆಂಗಳೂರಿನಲ್ಲಿ ನಾಯಕತ್ವ ತರಬೇತಿ ಸಂಸ್ಥೆ, ನೀತಿ- ನಿರೂಪಣಾ ಸಂಶೋಧನಾ ಕೇಂದ್ರ ಸ್ಥಾಪಿಸಲು ಮುಂದಾಗಿರುವುದು ಸ್ವಾಗತಾರ್ಹ. ಇದಕ್ಕೆ ಅಗತ್ಯವಿರುವ ಎಲ್ಲ ಸಹಕಾರ, ಬೆಂಬಲವಿರಲಿದೆ. ಅನಂತ ಪಥ ಮಾಸಿಕ ಬಿಡುಗಡೆಗೊಳಿಸಿರುವುದು ಸಂತೋಷವಾಗಿದೆ. ನನ್ನ ಆತ್ಮೀಯ ಸ್ನೇಹಿತ ಅನಂತ ಕುಮಾರ್‌ ಅವರನ್ನು ಕಳೆದುಕೊಂಡು ಈಗಾಗಲೇ ಎರಡು ವರ್ಷ ಕಳೆದಿದೆ. ಒಂದಲ್ಲ ಒಂದುಕಾರಣಕ್ಕೆ ನಿತ್ಯ ಅವರನ್ನು ನೆನಪಿಸಿಕೊಳ್ಳದ ದಿನವೇ ಇಲ್ಲ ಎಂದು ಹೇಳಿದರು.

ಸಚಿವ ಜಗದೀಶ ಶೆಟ್ಟರ್‌ ಮಾತನಾಡಿ, ದಿವಂಗತ ಅನಂತ ಕುಮಾರ್‌ ಅವರು ನನ್ನ ರಾಜಕೀಯ ಗುರುಗಳು ಎಂದರೆ ತಪ್ಪಾಗಲಾರದು. ನನ್ನ ಕ್ಷಮತೆ ಗಮನಿಸಿ ವಕೀಲನಾಗಿದ್ದ ನನ್ನನ್ನು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದರು ಎಂದು ತಿಳಿಸಿದರು. ಸಚಿವ ಸಿ.ಟಿ.ರವಿ ಮಾತನಾಡಿ, ದೂರದೃಷ್ಟಿಯುಳ್ಳ ನಾಯಕರಾಗಿದ್ದ ಅನಂತಕುಮಾರ್‌ ಅವರ ಮೌಲ್ಯಗಳು, ನಾಯಕತ್ವದ ಶೈಲಿಯನ್ನು ಪ್ರೇರಣೆಯಾಗಿಟ್ಟುಕೊಂಡು ಉದಯೋನ್ಮುಖ ನಾಯಕತ್ವ ಬೆಳೆಸುವುದಕ್ಕಾಗಿ ಪ್ರತಿಷ್ಠಾನವು ಮಾರ್ಗದರ್ಶನ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಶಾಸಕ ಎಲ್‌.ಎ. ರವಿಸುಬ್ರಹ್ಮಣ್ಯ, ಆನ್‌ಲೈನ್‌ ಮೂಲಕ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌, ವಿಧಾನ ಪರಿಷತ್‌ ಮಾಜಿ ಸದಸ್ಯೆ ತಾರಾ ಅನುರಾಧ, ಹೃದ್ರೋಗತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ, ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಪಿ.ವಿ. ಕೃಷ್ಣಭಟ್‌ ಸೇರಿದಂತೆ ಹಲವು ಪಾಲ್ಗೊಳ್ಳಲಿದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.