ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ
-1958ರ ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನದ ವ್ಯಾಪ್ತಿಗೆ ಈ ದೇವಾಲಯ ಬರಲಿದೆ
Team Udayavani, Nov 12, 2024, 5:51 PM IST
ಉದಯವಾಣಿ ಸಮಾಚಾರ
ಬೆಂಗಳೂರು: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಸ್ಥಾನ, ಅದರ ಶಿಲ್ಪಕಲೆ ಹಾಗೂ ಪ್ರಾಚೀನತೆಯು ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ಅಧಿನಿಯಮ-1961ರ ಅನ್ವಯ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಬರಲಿದೆಯೇ ಎಂಬ
ಬಗ್ಗೆ ನಿರ್ಧರಿಸಲು ತ್ರಿಸದಸ್ಯ ತಜ್ಞರ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಅಪಾಯದ ಅಂಚಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಸ್ಥಾನವನ್ನು ಸುರಕ್ಷಿತವಾಗಿ ಬೇರೆ ಕಡೆ ಸ್ಥಳಾಂತರಿಸಬೇಕು ಹಾಗೂ ದೇವಸ್ಥಾನವನ್ನು ಸಂರಕ್ಷಿತ ಪುರಾತನ ಸ್ಮಾರಕವೆಂದು ಘೋಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹಾರಾಷ್ಟ್ರದ ಕೊಲ್ಹಾಪುರದ ಕಾನೂನು ವಿದ್ಯಾರ್ಥಿ ನಿಖಿಲ್ ವಿಠಲ್
ಪಾಟೀಲ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿ, ಅಲ್ಲಮ ಪ್ರಭು ದೇವಾಲಯ 17-18ನೇ ಶತಮಾನದಲ್ಲಿ ನಿರ್ಮಾಣಗೊಂಡಿದ್ದು, ಪ್ರಾಚೀನ ಸ್ಮಾರಕದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದೆ.
ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ಅಧಿನಿಯಮ-1958ರ ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನದ ವ್ಯಾಪ್ತಿಗೆ ಈ ದೇವಾಲಯ ಬರಲಿದೆ. ಆದರೆ, ಕಾಯ್ದೆಯಡಿ ಅದನ್ನು ರಾಷ್ಟ್ರೀಯ ಮಹತ್ವದ ಸ್ಮಾರಕ ಎಂದು ಘೋಷಿಸಲಾಗಿಲ್ಲ. ಒಂದೊಮ್ಮೆ ಕೇಂದ್ರ ಕಾಯ್ದೆಯಡಿ ಪ್ರಾಚೀನ ಸ್ಮಾರಕವೆಂದು ಘೋಷಿಸಿಲ್ಲ ಎಂದಾದರೆ ಅದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸಬೇಕು ಎಂದರು.
ಅದಕ್ಕೆ, ಅಲ್ಲಮಪ್ರಭು ಸ್ವಾಮಿ ದೇವಸ್ಥಾನ, ಅದರ ಶಿಲ್ಪಕಲೆ ಹಾಗೂ ಪ್ರಾಚೀನತೆಯು ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ಅಧಿನಿಯಮ-1961ರ ಅನ್ವಯ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಬರಲಿದೆಯೇ ಎಂಬುದನ್ನು ನಿರ್ಧರಿಸಲು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಯನ್ನು ಒಳಗೊಂಡ ಮೂವರು
ಸದಸ್ಯರ ಸಮಿತಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ರಚನೆ ಮಾಡಬೇಕು. ಆ ಸಮಿತಿಯು ಅಧ್ಯಯನ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಡಿ. 10ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.