ಕ್ಷುಲ್ಲಕ ಕಾರಣಕ್ಕೆ ಹೊಡೆದು ಕೊಂದರು
Team Udayavani, Feb 14, 2017, 11:40 AM IST
ಬೆಂಗಳೂರು: ಬೈಕ್ ತಳ್ಳಿಕೊಂಡು ಹೋಗುತ್ತಿದ್ದಾಗ ಅಡ್ಡ ಬಂದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ದುಷ್ಕರ್ಮಿಗಳು ಸವಾರನನ್ನು ಹತ್ಯೆ ಮಾಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಬೇಗೂರು ನಿವಾಸಿ ಅರುಣ್ ಕುಮಾರ್ (30) ಮೃತರು. ಪ್ರಕರಣದ ಆರೋಪಿಗಳಾದ ಸಂತೋಷ್ ಮತ್ತು ಮ್ಯಾಥ್ಯೂಸ್ ತಲೆ ಮರೆಸಿಕೊಂಡಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅರುಣ್ ಕುಮಾರ್ ಪತ್ನಿ ಮತ್ತು ಮಗುವಿನ ಜತೆ ಭಾನುವಾರ ಬೈಕ್ನಲ್ಲಿ ಬೇಗೂರು ಮುಖ್ಯರಸ್ತೆಯಲ್ಲಿರುವ ಚರ್ಚ್ಗೆ ತೆರಳಿದ್ದರು. ರಾತ್ರಿ ಮನೆಗೆ ಹಿಂದಿರುಗುವಾಗ ಬೈಕ್ ಕೆಟ್ಟಿದೆ. ಅರುಣ್ ಕುಮಾರ್ ಪತ್ನಿ ಮತ್ತು ಮಗುವಿನೊಂದಿಗೆ ರಾತ್ರಿ 10.30ರ ಸುಮಾರಿಗೆ ರಸ್ತೆ ಬದಿ ಬೈಕ್ ತಳ್ಳಿಕೊಂಡು ಬರುತ್ತಿದ್ದರು.
ಅರುಣ್ ಬೈಕ್ ತಳ್ಳಿಕೊಂಡು ಹೋಗುತ್ತಿದ್ದಾಗ ಆರೋಪಿಗಳು ಅಡ್ಡಬಂದಿದ್ದು, ಈ ವಿಚಾರವಾಗಿ ಅರುಣ್ ಮತ್ತು ಆರೋಪಿಗಳ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಆರೋಪಿಗಳು ಅರುಣ್ ಮುಖ, ಹೊಟ್ಟೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳು ಸುಳಿವು ಪತ್ತೆಯಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.