ಮತ್ತು ಬರುವ ಜ್ಯೂಸ್ ನೀಡಿ ಅತ್ಯಾಚಾರವೆಸಗಿದ ನಟ!
Team Udayavani, Dec 29, 2017, 12:09 PM IST
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿರುವ “ಹೊಂಬಣ್ಣ’ ಸಿನಿಮಾದ ನಟ ಸುಬ್ರಮಣ್ಯ ಎಂಬಾತ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 23 ವರ್ಷದ ಯುವತಿಯೊಬ್ಬರು ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
“ಹೊಸಕೆರೆಹಳ್ಳಿಯ ದ್ವಾರಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ನಟ ಸುಬ್ರಮಣ್ಯ, ನವೆಂಬರ್ 1ರಂದು ತನ್ನ ಅಕ್ಕನ ಮನೆಯಲ್ಲಿ ಪಾರ್ಟಿ ಇದೆ ಎಂದು ಸುಳ್ಳು ಹೇಳಿ ನನ್ನನ್ನು ಕರೆಸಿಕೊಂಡಿದ್ದ. ಬಳಿಕ ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಯಲು ಜ್ಯೂಸ್ ನೀಡಿದ.
ಕೆಲವೇ ನಿಮಿಷಗಳಲ್ಲಿ ನನಗೆ ಪ್ರಜ್ಞೆ ತಪ್ಪಿತು ನಂತರ ಎಚ್ಚರಗೊಂಡಾಗ ನನ್ನ ಮೇಲೆ ಆತ ಅತ್ಯಾಚಾರ ಎಸಗಿರುವುದು ಗೊತ್ತಾಯಿತು,’ ಎಂದಿರುವ ಸಂತ್ರಸ್ತ ಯುವತಿ, ಸುಬ್ರಹ್ಮಣ್ಯನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ.
ಸಂತ್ರಸ್ತೆ ಯವತಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ವಿರುದ್ಧ ಡಿ.26ರಂದು ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಇತ್ತ ತನ್ನ ವಿರುದ್ಧ ದೂರು ದಾಖಲಾಗಿದೆ ಎಂದು ಗೊತ್ತಾಗುತ್ತಿದ್ದಂತೆ ಆರೋಪಿ ಸುಬ್ರಹ್ಮಣ್ಯ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ನವೆಂಬರ್ 1ರಂದು ತನ್ನ ಅಕ್ಕನ ಮನೆಯಲ್ಲಿ ಪಾರ್ಟಿ ಎಂದು ಹೇಳಿ ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪಿ, ಬಳಿಕ ಇದ್ದಕ್ಕಿದ್ದಂತೆ ದೂರ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಪ್ರಶ್ನಿಸಿದರೆ ನೀನು ಬಡವರ ಹುಡುಗಿ ನನಗೆ 20 ಲಕ್ಷ ಬಂಡವಾಳ ಹಾಕಿ ಸಿನಿಮಾ ನಿರ್ಮಿಸುವ ಹುಡುಗಿ ಬೇಕು ಎನ್ನತೊಡಗಿದ.
ಅಲ್ಲದೆ ಸಿನಿಮಾದವರು ಕೇಳಿದರೆ ಅವರೊಂದಿಗೆ ಸಹಕರಿಸು ಎಂದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಅವರ ಪೋಷಕರನ್ನು ಕೇಳಿದರೇ ಅವರೂ ನನ್ನ ಚಾರಿತ್ರ್ಯ ಹರಣ ಮಾಡುವಂತಹ ಮಾತುಗಳನ್ನಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಫೇಸ್‌ಬುಕ್ ಪ್ರೇಮ್ ಕಹಾನಿ!: ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸುಬ್ರಹ್ಮಣ್ಯ, ಕನ್ನಡ ಚಲನ ಚಿತ್ರರಂಗದಲ್ಲಿ ಸಹನಟ ಎಂದು ಹೇಳಿಕೊಂಡು ಎರಡು ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. “ಫೇಸ್‌ಬುಕ್‌ನಲ್ಲಿ ಪರಿಚಯ ಬೆಳೆದಂತೆ ನನ್ನ ಕುಟುಂಬದವರೊಂದಿಗೂ ಆತ್ಮೀಯತೆ ಬೆಳೆಸಿಕೊಂಡಿದ್ದ. ಅಲ್ಲದೆ ತಾನು ನಿನ್ನನ್ನು ಪ್ರೀತಿಸುತ್ತಿದ್ದು, ಮದುವೆಯಾಗುತ್ತೇನೆ ಎಂದು ತಿಳಿಸಿದ್ದ.
ಈ ವಿಚಾರ ನನ್ನ ಮನೆಯವರ ಬಳಿಯೂ ಹೇಳಿ ನಂಬಿಸಿದ್ದ ಅವರ ಮನೆಯವರಿಗೂ ಪರಿಚಯ ಮಾಡಿಕೊಟ್ಟಿದ್ದ. ನೀನು ನನ್ನನ್ನು ಮದುವೆಯಾಗದೇ ಬೇರೆಯವರನ್ನು ಮದುವೆಯಾದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ. ಆದರೆ ಮದುವೆ ವಿಚಾರ ಪ್ರಸ್ತಾಪ ಮಾಡುತ್ತಿದ್ದಂತೆ ಹೊಂಬಣ್ಣ ಸಿನಿಮಾ ಬಿಡುಗಡೆಯಾಗಲಿ ಎಂದು ಸಬೂಬು ಹೇಳುತ್ತಿದ್ದ. ಚಿತ್ರ ಬಿಡುಗಡೆಯಾದ ಬಳಿಕ ಮನೆಯ ಗೃಹಪ್ರವೇಶ ಕಾರ್ಯಕ್ರಮ ಆದ ಬಳಿಕ ವಿವಾಹ ಎಂದು ಮುಂದೆ ತಳ್ಳಿದ್ದ ಎಂದು ಯುವತಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.