ಅಂಗನವಾಡಿಗಳಿಗೆ ಈಗ ಅಸ್ತಿತ್ವದ ಪ್ರಶ್ನೆ
ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಸಿದ್ಧತೆ | ಕಾರ್ಯಕರ್ತೆಯರಿಗೆ ಆತಂಕ ● ಹಿತೇಶ್ ವೈ
Team Udayavani, May 29, 2019, 9:50 AM IST
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು (ಎಲ್ಕೆಜಿ, ಯುಕೆಜಿ) ಆರಂಭಿಸುತ್ತಿರುವುದರಿಂದ ರಾಜ್ಯದಲ್ಲಿನ 1,500ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ.
2019-20ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಆರಂಭಿಸುತ್ತಿದೆ. ಹಾಗೆಯೇ 276 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿಗಳಿಗೆ ಅಳಿವು ಉಳಿವಿನ ಪ್ರಶ್ನೆಯನ್ನೇ ಹುಟ್ಟು ಹಾಕಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಮತ್ತು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ಬೆಳೆಸಲು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ತಾಲೂಕಿಗೆ ಒಂದರಂತೆ ಗ್ರಾಪಂ ಕೇಂದ್ರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ತೆರೆಯಲಾಗುತ್ತದೆ.
ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿಗಳನ್ನು 4,100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ, ‘ಬಾಲಸ್ನೇಹಿ ಕೇಂದ್ರ’ಗಳನ್ನಾಗಿ ಬಲವರ್ಧಿಸಲು ಸರ್ಕಾರ ಯೋಜನೆ ರೂಪಿಸಿದೆ. ಹಂತ ಹಂತವಾಗಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದಕ್ಕೂ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ, ಬಾಲವಾಡಿಗಳು ಮುಚ್ಚಿದ ರೀತಿಯಲ್ಲೇ ಅಂಗನವಾಡಿಗಳು ಮುಚ್ಚಬಹುದಾದ ಆತಂಕ ಅಂಗನವಾಡಿಯ ಕಾರ್ಯಕರ್ತೆಯರಲ್ಲಿ ಮೂಡಿದೆ.
4,200 ಕೋಟಿ ರೂ.ಬಳಕೆ: 3 ವರ್ಷದ ಒಳಗಿನ 26 ಲಕ್ಷ ಮಕ್ಕಳು ಮತ್ತು 3ರಿಂದ 6 ವರ್ಷದ ಒಳಗಿನ 16.5 ಲಕ್ಷ ಮಕ್ಕಳು ರಾಜ್ಯದ ಸುಮಾರು 62,580 ಅಂಗನವಾಡಿ ಕೇಂದ್ರಗಳಲ್ಲಿ ಇದ್ದಾರೆ. ಸರ್ಕಾರ ಪ್ರತಿವರ್ಷ ಐಸಿಡಿಎಸ್ ಯೋಜನೆಯ ಮೂಲಕ ಅಂಗನವಾಡಿಗಳಿಗೆ 4,200 ಕೋಟಿ ರೂ.ವ್ಯಯಿಸುತ್ತಿದೆ. ಈಗ ಪಬ್ಲಿಕ್ ಶಾಲೆಗಳಿಗೆ ಅಂಗನವಾಡಿ ಮಕ್ಕಳನ್ನು ಸ್ಥಳಾಂತರ ಮಾಡುವುದರಿಂದ ಅಲ್ಲಿನ ಶಿಕ್ಷಕರಿಗೆ ಪ್ರತ್ಯೇಕ ಸಂಬಳ, ಅಡುಗೆ ಕೋಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹೊಸದಾಗಿ ನಿರ್ಮಿಸಿ ಕೊಡಬೇಕಾಗುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ಕೋಟ್ಯಂತರ ರೂ.ವ್ಯಯಿಸಬೇಕಿದೆ. ಅಲ್ಲದೆ, ಮಕ್ಕಳನ್ನು ಕರ್ನಾಟಕ ಪಬ್ಲಿಕ್ ಶಾಲೆಗೆ ಸ್ಥಳಾಂತರಿಸುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿರುವ ಬಗ್ಗೆಯೂ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಆರೋಪಿಸಿದ್ದಾರೆ. ಸರ್ಕಾರಿ ಶಾಲೆಗಳಿಗೆ ಅಂಗನವಾಡಿ ಮಕ್ಕಳನ್ನು ಸ್ಥಳಾಂತರ ಮಾಡುವುದು ಅವೈಜ್ಞಾನಿಕ. ಪ್ರಾಥಮಿಕ ಶಾಲೆಯ ಮಕ್ಕಳ ವರ್ತನೆ ಭಿನ್ನವಾಗಿರುತ್ತದೆ. ಆ ಮಕ್ಕಳೊಂದಿಗೆ ಇಳಿ ವಯಸ್ಸಿನ ಮಕ್ಕಳನ್ನೂ ಸೇರಿಸುವುದು ಸುರಕ್ಷತಾ ದೃಷ್ಟಿಯಿಂದ ಒಳ್ಳೆಯದಲ್ಲ. ಈ ಮಕ್ಕಳ ಆಹಾರ ಶೈಲಿಯೂ ಭಿನ್ನವಾಗಿರುತ್ತದೆ. ಅಂಗನವಾಡಿ ಮಕ್ಕಳಿಗೆ ಆಹಾರ ಮತ್ತು ನಿದ್ರೆ ಮೊದಲ ಆದ್ಯತೆ ಎಂದು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಯಿ ಮಕ್ಕಳನ್ನು ಬೇರೆ ಮಾಡಿದಂತೆ!: ಅಂಗನವಾಡಿಯಲ್ಲೇ ಎಲ್ಕೆಜಿ ಮತ್ತು ಯುಕೆಜಿಯನ್ನು ಪ್ರಾರಂಭಿಸಿ, ಅಂಗನವಾಡಿ ನೌಕರರಿಗೆ ಈ ಕೆಲಸವನ್ನು ಅಧಿಕೃತವಾಗಿ ವಹಿಸಬೇಕು. ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಮತ್ತು ಅವರಿಗೆ ಯಾವ ಪೌಷ್ಠಿಕ ಆಹಾರ ನೀಡಬೇಕು ಎನ್ನುವುದು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿದಿದೆ. ಈ ಮಕ್ಕಳನ್ನು ನೋಡಿಕೊಳ್ಳಲು ತಾಳ್ಮೆ ಇರಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ ವಿವರಿಸಿದರು.
ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಬಿಸಿಯೂಟದ ಸಿಬ್ಬಂದಿಗೆ ಗೌರವ ಸಂಭಾವನೆ ಹೆಚ್ಚಿಸಿಲ್ಲ. ಈಗ ಹೊಸ ಯೋಜನೆಗೆ ಹಣ ಹೇಗೆ ಹೊಂದಿಸುತ್ತಾರೆ?
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 3.5 ವರ್ಷದ ಮಕ್ಕಳನ್ನು ಸೇರಿಸಿಕೊಳ್ಳುವುದರಿಂದ ಕೇವಲ 5 ತಿಂಗಳಷ್ಟೇ ಮಕ್ಕಳು ಅಂಗನವಾಡಿಗಳಲ್ಲಿ ಇರುತ್ತಾರೆ. ಇದು ತಾಯಿ, ಮಕ್ಕಳನ್ನು ಬೇರೆ ಮಾಡಿದಂತೆ. ಅಂಗನವಾಡಿ ಇರುವುದೇ ಮಕ್ಕಳಿಗಾಗಿ, ಅವರನ್ನು ಎಲ್ಕೆಜಿಗೆ ಕರೆದುಕೊಂಡು ಹೋದರೆ ನಾವು ಏನು ಮಾಡಬೇಕು ಎಂದು ಸರ್ಕಾರವನ್ನು ಪ್ರಶ್ನಿಸಿದರು. ಈ ಶಾಲೆಗಳಲ್ಲಿ ಎಸ್‌ಡಿಎಂಸಿ ಅಡಿಯಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತದೆ. ಈ ರೀತಿ ನೇಮಕವಾದ ಶಿಕ್ಷಕರಿಗೆ 3.5 ವರ್ಷದ ಮಕ್ಕಳಿಗೆ ಅಂಗನವಾಡಿಯಲ್ಲಿನ ಆಹಾರ ಪದ್ಧತಿ ಮತ್ತು ಪೌಷ್ಠಿಕಾಂಶಗಳ ಬಗ್ಗೆಯಾಗಲಿ ಪರಿಚಯವಿಲ್ಲ. ಒಂದೇ ಯೋಜನೆಗೆ ಎರಡು ಕಡೆ ಹಣ ವ್ಯಯಿಸಲಾಗುತ್ತಿದೆ.
ಅಂಗನವಾಡಿ ಮಕ್ಕಳನ್ನು ಪ್ರಾಥಮಿಕ ಶಾಲೆಗಳ ಅಂಗಳಕ್ಕೆ ಬದಲಾಯಿಸುವ ಮುನ್ನ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಮತ್ತು ಮಕ್ಕಳ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಸರ್ಕಾರ ಅಧ್ಯಯನ ನಡೆಸಿಲ್ಲ. ಈ ಯೋಜನೆಯನ್ನು ಏಕಮುಖವಾಗಿ ಜಾರಿ ಮಾಡಲಾಗುತ್ತಿದೆ. ಇದರ ಬಗ್ಗೆ ಎಲ್ಲೂ ಚರ್ಚೆ ಮಾಡಿಲ್ಲ ಎಂದು ವರಲಕ್ಷ್ಮೀ ಆರೋಪಿಸಿದರು.
ಯೋಜನೆ ಹಿಂಪಡೆಯಲು ಜೂ.10ಕ್ಕೆ ಪ್ರತಿಭಟನೆ:
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವ ಯೋಜನೆಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ನೇತೃತ್ವದಲ್ಲಿ ಜೂನ್.10ಕ್ಕೆ ಟೌನ್‌ಹಾಲ್ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯ ಅಧ್ಯಕ್ಷ ಜಿ.ಆರ್.ಶಿವಶಂಕರ್ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಶಾಲೆಯಲ್ಲೇ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದರಿಂದ ಅಂಗನವಾಡಿಗಳ ಮೇಲೆ ನೇರಪರಿಣಾಮ ಬೀರಲಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವ ಮುನ್ನ ‘ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ-2017’ರ ವರದಿಯನ್ನು ಗಣನೆಗೆ ತೆಗೆದುಕೊಂಡಿಲ್ಲ. ಅಂಗನವಾಡಿಯಲ್ಲಿರುವ ಮಕ್ಕಳು ಪ್ರಾಥಮಿಕ ಶಾಲೆಯ ಮಕ್ಕಳೊಂದಿಗೆ ಬೇರೆಯುವ ಸಾಧ್ಯತೆ ಕಡಿಮೆ. ಸರ್ಕಾರದ ನಿರ್ಧಾರದಿಂದ ಅಂಗನವಾಡಿಗಳ ಅಸ್ತಿತ್ವದ ಪ್ರಶ್ನೆಯೂ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸರ್ಕಾರದ ಆದೇಶದಿಂದ ಮೂರುವರೆ ವರ್ಷದಿಂದ ಆರು ವರ್ಷದೊಳಗಿನ ಎಲ್ಲ ಮಕ್ಕಳು ಪ್ರಾಥಮಿಕ ಶಾಲೆಗೆ ಹೋಗುತ್ತಾರೆ. ಇದರಿಂದ ಮುಂದೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳೇ ಇರುವುದಿಲ್ಲ. ಅಂಗನವಾಡಿ ಕಾರ್ಯಕರ್ತೆಯರು ಬೀದಿ ಪಾಲಾಗುತ್ತಾರೆ. ಸರ್ಕಾರ ಹಲವು ಅಂಗನವಾಡಿಗಳ ಬಾಡಿಗೆಯನ್ನೇ ನೀಡಿಲ್ಲ. ಈಗ ಹೊಸ ಯೋಜನೆಯನ್ನೇ ಪ್ರಾರಂಭಿಸಿದೆ. ಎಲ್ಲ ಮೂಲಭೂತ ಸೌಕರ್ಯವನ್ನು ಅಂಗನವಾಡಿ ಕೇಂದ್ರಗಳಿಗೆ ಒದಗಿಸಿ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕಿಯರಿಗೆ ಅಧಿಕೃತ ಕೆಲಸ ವಹಿಸಬೇಕು. ಇವರ ಕೌಶಲ್ಯವನ್ನು ಮತ್ತಷ್ಟು ಹೆಚ್ಚಿಸಲು ಸೂಕ್ತ ತರಬೇತಿ ನೀಡಿ ಅಂಗನವಾಡಿ ಕೇಂದ್ರಗಳನ್ನೇ ಶಿಶುಪಾಲನಾ ಕೇಂದ್ರಗಳಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿದರು.
● ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರಲ್ಲಿ ವಂಚನೆ
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.