ಅನ್ನದಾತನ ಬದುಕು ಸಂಕಷ್ಟದಲ್ಲಿದೆ
Team Udayavani, Jan 16, 2018, 11:40 AM IST
ಕೆಂಗೇರಿ: ಜನರ ಬದುಕು ಹಸನು ಮಾಡುವ ದೇಶದ ಬೆನ್ನಲಬು ಎಂದು ಕರೆಸಿಕೊಳ್ಳುವ ಅನ್ನದಾತ ರೈತನ ಬದುಕು ಇಂದು ಸಂಕಷ್ಟದಲ್ಲಿದೆ ಎಂದು ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ರವಿಶಂಕರ್ ಗುರೂಜಿ ಕಳವಳ ವ್ಯಕ್ತಪಡಿಸಿದ್ದಾರೆ.
ಬಸವೇಶ್ವರ ಭಕ್ತ ಮಂಡಳಿ ವತಿಯಿಂದ ಭಾನುವಾರ ಕೆಂಗೇರಿ ಹೋಬಳಿಯ ಸೋಂಪುರದ ಚನ್ನವೀರಯ್ಯನಪಾಳ್ಯದಲ್ಲಿ ಹಮ್ಮಿಕೊಂಡಿದ್ದ “ಸಂಕ್ರಾಂತಿ ಹಬ್ಬದ ಜಾತ್ರಾ ಮಹೋತ್ಸವ, ಕಡಲೇಕಾಯಿ ಪರಿಷೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಷ್ಟದಲ್ಲಿ ಇರುವ ರೈತನ ನೆರವಿಗೆ ಸರ್ಕಾರಗಳು ಮುಂದಾಗಬೇಕು ಎಂದು ಹೇಳಿದರು.
ರೈತರ ಸಂಕಷ್ಟಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರಗಳು ಸಮರ್ಪಕ ಯೋಜನೆಗಳನ್ನು ರೂಪಿಸಬೇಕು ಜತೆಗೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಿದರು.
ಕೇಂದ್ರ ಸಚಿವ ಅನಂತ್ ಕುಮಾರ್ ಮಾತನಾಡಿ, ಮುಗ್ಧ ಮನಸ್ಸಿನ ಹಳ್ಳಿಯ ವಾತಾವರಣದ ಬದುಕು ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ. ಹಳ್ಳಿಯ ಬದುಕು ಒಳ್ಳೆಯ ಬದುಕು ಎಂಬುದಕ್ಕೆ ಸಾಮರಸ್ಯದ ಜೀವನವೇ ಸಾಕ್ಷಿಯಾಗಿದೆ. ಹಳ್ಳಿಯಲ್ಲಿ ಪರಸ್ಪರ ಗುರುಹಿರಿಯರನ್ನ ಗೌರವಿಸುವ ವಾತಾವರಣವಿದ್ದು ಎಲ್ಲರಿಗೂ ಅದು ಪ್ರೇರಣೆಯಾಗಬೇಕಾಗಿದೆ ಎಂದರು.
ಕನಕಪುರ ದೇಗುಲ ಮಠದ ನಿರ್ವಾಣ ಮಹಾಸ್ವಾಮಿಗಳು ಮಾತನಾಡಿ, ಗ್ರಾಮಿಣ ಪ್ರದೇಶದ ಇಂತಹ ಆಚರಣೆಗಳು ತಲತಲಾಂತರಗಳಿಂದ ನಡೇದುಕೊಂಡು ಬಂದಿರುವ ಪರಿಣಾಮ ನಮ್ಮ ಕಲೆ ಸಂಸ್ಕೃತಿ ಆಚಾರ ವಿಚಾರಗಳು ಉಳಿದಿವೆ ಎಂದು ಹೇಳಿದರು.
ಬಸವೇಶ್ವರ ಭಕ್ತ ಮಂಡಳಿಯ ಅಧ್ಯಕ್ಷ ಎಂ.ರುದ್ರೇಶ್ ಮಾತನಾಡಿ ರೈತರು ಬೆಳೆದಿರುವ ಬೆಳೆಗೆ ಉತ್ತೇಜನ ನೀಡಬೇಕು ಎಂಬ ಉದ್ದೇಶದಿಂದ ಕಡಲೆಕಾಯಿ ಪರಿಷೆಯ ಜೊತೆಗೆ 60 ವಸಂತಗಳನ್ನ ಪೂರೈಸಿರುವ ರೈತ ದಂಪತಿಗಳಿಗೆ ಸನ್ಮಾನಿಸುವ ಮೂಲಕ ಗೌರವ ಸಮರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾರಂಭದಲ್ಲಿ ಕನಕಪುರ ಮರಳೆಗವಿ ಮಠದ ಶಿವರುದ್ರ ಮಹಾಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎ. ಶಿವಕುಮಾರ್, ಹಾಲಿ ಸದಸ್ಯ ಮರಿಸ್ವಾಮಿ, ಮಾಜಿ ಸಚಿವ ರಾಮಚಂದ್ರೇ ಗೌಡ, ಬಿಜೆಪಿ ಮುಖಂಡರಾದ ಗಾಣಿಗರಪಾಳ್ಯ ರಾಮಸ್ವಾಮಿ, ಪರಮಶಿವಯ್ಯ, ರಘು ಮತ್ತಿತರರು ಪಾಲ್ಗೊಂಡಿದ್ದರು.
ಜಾತ್ರೆ ಅಂಗವಾಗಿ ಬೆಳಿಗ್ಗೆಯಿಂದಲೇ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ವಿವಿಧ ಬಾಗಗಳಿಂದ ಆಗಮಿಸಿದ ಡೊಳ್ಳು, ಪೂಜಾ ಕುಣಿತ, ವೀರಗಾಸೆ, ಗಾರುಡಿಗೊಂಬೆ ಪ್ರದರ್ಶನ ನೀಡಿದರು.ಸುತ್ತಮುತ್ತಲ ಗ್ರಾಮದ ಕಬ್ಟಾಳಮ್ಮ ದೇವಿ, ಮಾರಮ್ಮ ದೇವಿಯ ಪಲ್ಲಕಿ ಉತ್ಸವ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.