Road mishap: ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರು, ಮರಕ್ಕೆ ಡಿಕ್ಕಿ ಹೊಡೆದು ಟೆಕಿ ಸಾವು


Team Udayavani, Jan 16, 2024, 12:08 PM IST

Road mishap: ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರು, ಮರಕ್ಕೆ ಡಿಕ್ಕಿ ಹೊಡೆದು ಟೆಕಿ ಸಾವು

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆಬದಿ ನಿಲುಗಡೆ ಮಾಡಿದ್ದ ಮತ್ತೂಂದು ಕಾರಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿದ್ದೂ ಅಲ್ಲದೆ, ಮನೆಯೊಂದರ ಗೇಟ್‌ಗೆ ಡಿಕ್ಕಿಯಾಗಿ ಟೆಕಿ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊರಮಾವು ನಿವಾಸಿ ಮೆಲ್ವಿನ್‌ ಜೋಸ್ವಾ (25) ಮೃತ ಚಾಲಕ. ಈತನ ಸ್ನೇಹಿತೆ ಆಡಿಲಿನ್‌ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ಹೆಣ್ಣೂರು ರಸ್ತೆ ಕಡೆಯಿಂದ ಹೊರಮಾವು ಕಡೆಗೆ ಬರುವಾಗ ಸಿಎಂಆರ್‌ ರಸ್ತೆಯಲ್ಲಿ ಅಪಘಾತ ನಡೆದಿದೆ.

ಸಾಫ್ಟ್ವೇರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೆಲ್ವಿನ್‌ ಜೋಸ್ವಾ, ಭಾನುವಾರ ರಾತ್ರಿ ಹೆಣ್ಣೂರು ರಸ್ತೆಯಲ್ಲಿ ಸಂಬಂಧಿಕರೊಬ್ಬರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಕಾರ್ಯಕ್ರಮ ಮುಗಿಸಿಕೊಂಡು ಸ್ನೇಹಿತೆ ಆಡಿಲಿನ್‌ ಜತೆ ಕಾರಿನಲ್ಲಿ ಹೊರಮಾವಿನಲ್ಲಿರುವ ಮನೆಗೆ ಬರುತ್ತಿದ್ದ. ಸಿಎಂಆರ್‌ ರಸ್ತೆಯಲ್ಲಿ ಬರುವಾಗ ಅತಿವೇಗವಾಗಿ ಕಾರು ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲುಗಡೆ ಮಾಡಿದ ಕಾರೊಂದಕ್ಕೆ ಡಿಕ್ಕಿಯಾಗಿ ಬಳಿಕ ಮರಕ್ಕೆ ಗುದ್ದಿ ಸಮೀಪದ ಮನೆಯೊಂದರ ಗೇಟ್‌ಗೆ ಡಿಕ್ಕಿಯಾಗಿ ನಿಂತಿದೆ.

ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಮೆಲ್ವಿನ್‌ ಜೋಸ್ವಾರನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದ ಪರಿಣಾಮ ಚಿಕಿತ್ಸೆ ಫ‌ಲಿಸದೆ ಆತ ಮೃತಪಟ್ಟಿದ್ದಾನೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಆತನ ಸ್ನೇಹಿತೆ ಆಡಿಲಿನ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಬೈಕ್‌ ಅಪಘಾತದಲ್ಲಿ ಒಂದು ಕೈ ಕಳೆದುಕೊಂಡಿದ್ದ ಟೆಕಿ! :

ಕೆಲ ವರ್ಷಗಳ ಹಿಂದೆ ಬೈಕ್‌ನಲ್ಲಿ ಹೋಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೆಲ್ವಿನ್‌ ಕೈಗೆ ಗಂಭೀರ ಪೆಟ್ಟು ಬಿದ್ದು ಸ್ವಾಧೀನ ಕಳೆದುಕೊಂಡಿದ್ದ. ರಾತ್ರಿ ಕಾರನ್ನು ಒಂದೇ ಕೈಯಲ್ಲಿ ವೇಗವಾಗಿ ಓಡಾಡಿಸಿಕೊಂಡು ಬರುವಾಗ ನಿಯಂತ್ರಿಸಲು ಸಾಧ್ಯವಾಗದೆ ಅಪಘಾತ ಎಸಗಿರುವ ಸಾಧ್ಯತೆಯಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.