ಸೋಮಣ್ಣ ವಿರುದ್ಧ ಮತ್ತೂಂದು ಕೇಸ್‌


Team Udayavani, Apr 5, 2018, 12:38 PM IST

blore-4.jpg

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಸುಳ್ಳು ಹೇಳಿಕೊಂಡು ಚಿನ್ನಾಭರಣ ಹಾಗೂ ಬಟ್ಟೆ ಅಂಗಡಿ ಮಾಲೀಕರಿಗೆ ಕೋಟ್ಯಂತರ ರೂ. ವಂಚಿಸಿದ ಮೈಸೂರು ಮೂಲದ ಸೋಮಣ್ಣ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ದಾಖಲಾಗಿದೆ.

ಆರೋಪಿ ಸೋಮಣ್ಣ, ಕರ್ಣಾಟಕ ಬ್ಯಾಂಕ್‌ ಮ್ಯಾನೆಜರ್‌ ದೊರೆಸ್ವಾಮಿ ಎಂಬುವರಿಗೆ 2.40 ಕೋಟಿ ರೂ. ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 2017ರ ಸೆಪ್ಟೆಂಬರ್‌ನಲ್ಲಿ ತಾನು ರಾಜಕೀಯ ಮುಖಂಡ, ಫೈನಾನ್ಸಿಯರ್‌ ಎಂದು ಪರಿಚಯಸಿಕೊಂಡ ಆರೋಪಿ ಬ್ಯಾಂಕಿನಲ್ಲಿ ವ್ಯವಹಾರ ಶುರು ಮಾಡಿದ್ದ. ಅಲ್ಲದೇ ತಾನು ಚುನಾವಣೆಯಲ್ಲಿ ನೂ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, 100 ಮತ್ತು 200 ರೂ. ಮುಖಬೆಲೆಯ ನೋಟುಗಳು ಬೇಕಿವೆ ಎಂದು 15ರಿಂದ 20 ಲಕ್ಷ ರೂ. ನಗದು ಕೊಟ್ಟು ವ್ಯವಹಾರ ನಡೆಸಿ ಬ್ಯಾಂಕ್‌ ವ್ಯವಸ್ಥಾಪಕ ದೊರೆಸ್ವಾಮಿ ಅವರ ನಂಬಿಕೆಗಳಿಸಿದ್ದ.

ನಂತರ ಸರ್ಕಾರದ ಕೆಲ ಯೋಜನೆಗಳಿಗೆಂದು ಹಣ ಬಿಡುಗಡೆಯಾಗುತ್ತಿದ್ದು, ನಿಮ್ಮ ಬ್ಯಾಂಕಿನಲ್ಲಿಯೇ ಠೇವಣಿ ಇಡುವುದಾಗಿ ನಂಬಿಸಿದ್ದು, ತುರ್ತಾಗಿ ಗುತ್ತಿಗೆದಾರನಿಗೆ 2.40 ಕೋಟಿ ರೂ. ಕೊಡಬೇಕು ಎಂದು ಹೇಳಿದ್ದ. ಇದನ್ನು ನಂಬಿದ ಮ್ಯಾನೇಜರ್‌ ದೊರೆಸ್ವಾಮಿ 2.40 ಕೋಟಿ ರೂ. ಹಣ ಕೊಟ್ಟಿದ್ದರು. ಆದರೆ, ತಿಂಗಳು ಕಳೆದರೂ ಹಣ ವಾಪಸ್‌ ಮಾಡಿಲ್ಲ. ಇದರಿಂದ ಅನುಮಾನಗೊಂಡು ಆರೋಪಿ ಮೊಬೈಲ್‌ಗೆ ಕರೆ ಮಾಡಿದರೆ ಸ್ವಿಚ್‌ ಆಫ್ ಆಗಿತ್ತು. ಕೂಡಲೇ ವೈಯಾಲಿಕಾವಲ್‌ ಠಾಣೆಗೆ ದೂರು ನೀಡಿದ್ದಾರೆ.

ಈ ಮಧ್ಯೆ ಆರೋಪಿ ಸೋಮಣ್ಣನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೀಗಾಗಿ ಆರೋಪಿಯನ್ನು ಬಾಡಿ ವಾರೆಂಟ್‌ ಪಡೆದು ವೈಯಾಲಿಕಾವಲ್‌ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.

ಪ್ರಕರಣ ಸಿಐಡಿಗೆ ವಹಿಸಲು ಮನವಿ ಇನ್ನು ಆರೋಪಿಯು, ತಾನು ಎಂಎಲ್‌ಸಿ ಸೋಮಣ್ಣ ಎಂದು ಹೇಳಿಕೊಂಡು ಬಸವೇಶ್ವರ ನಗರದಲ್ಲಿ ಚಿನ್ನದ ವ್ಯಾಪಾರಿ ಹಾಗೂ ಬಟ್ಟೆ ಅಂಗಡಿ ವ್ಯಾಪಾರಿಗೆ 1.88 ಕೋಟಿ ರೂ. ವಂಚಿಸಿದ್ದ ಬಗ್ಗೆ ಬಸವೇಶ್ವರನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ. ಚನ್ನಣ್ಣನವರ್‌ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.