ಕಿರುತೆರೆ ನಟ ಕಿರಣ್ ರಾಜ್ ವಿರುದ್ದ ಮತ್ತೊಂದು ದೂರು
Team Udayavani, May 5, 2018, 11:40 AM IST
ಬೆಂಗಳೂರು: ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಕಿರುಕುಳ ಮತ್ತು ಹಲ್ಲೆ ಪ್ರಕರಣ ದಾಖಲಿಸಿದ್ದ ಮುಂಬೈ ಮೂಲದ ಮಾಡೆಲ್ ಯಾಸ್ಮಿನ್ ಇದೀಗ ಆತನ ವಿರುದ್ಧ ಪಾಸ್‌ಪೋರ್ಟ್ ವಿಚಾರಕ್ಕೆ ಮತ್ತೊಂದು ದೂರು ನೀಡಿದ್ದಾರೆ.
ಯಾಸ್ಮಿನ್ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕಿರಣ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಸಿನಿಮಾ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಕೊಡಿಸುತ್ತೇನೆ ಎಂದು ಪಾಸ್‌ಪೋರ್ಟ್ ಪಡೆದು ಈಗ ಕೊಡದೆ ಸತಾಯಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.
ತನ್ನಿಂದ ಪಾಸ್‌ಪೋರ್ಟ್ ಪಡೆದಿದ್ದ ಕಿರಣ್ ರಾಜ್ ಈಗ ಅದನ್ನು ವಾಪಸ್ ಮಾಡುತ್ತಿಲ್ಲ. ಅಲ್ಲದೆ, ಆತ ಮತ್ತು ಅತನ ಕುಟುಂಬ ಸದಸ್ಯರು ಕಿರುಕುಳ ನೀಡುತ್ತಿದ್ದಾರೆ. ವಿದೇಶಕ್ಕೆ ಚಿತ್ರೀಕರಣಕ್ಕೆಂದು ಹೋಗಬೇಕಾದ ಕಾರಣ ಪಾಸ್‌ಪೋರ್ಟ್ ನೀಡುವಂತೆ ಕೇಳಿದಾಗ ಕಿರಣ್‌ರಾಜ್ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ. ಇದರಿಂದಾಗಿ ನನಗೆ ಕೆಲಸ ಕೈ ತಪ್ಪಿದೆ ಎಂದು ಯಾಸ್ಮಿನ್ ಆರೋಪಿದ್ದಾರೆ.
ದ್ವೇಷದ ಕಾರಣದಿಂದ ಸರಿಯಾದ ಸಮಯಕ್ಕೆ ಪಾಸ್‌ಪೋರ್ಟ್ ಕೊಡದೆ ಕೆಲಸಕ್ಕೆ ತೊಂದರೆ ಕೊಟ್ಟಿದ್ದಾನೆ ಎಂದು ಕಿರಣ್‌ರಾಜ್ ವಿರುದ್ಧ ಯಾಸ್ಮಿನ್ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಐಪಿಸಿ 420, 506 ಹಾಗೂ 384 ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.