ಸಿಎಂ ವಿರುದ್ಧ ಮತ್ತೂಂದು ಡಿನೋಟಿಫಿಕೇಷನ್‌ ಆರೋಪ


Team Udayavani, Jan 4, 2018, 6:15 AM IST

R-ashok-Cm-800.jpg

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶಕ್ಕೆ ವ್ಯತಿರಿಕ್ತವಾಗಿ ಉದ್ಯಾನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಿಟ್ಟಿದ್ದ ನಗರ ಹೃದಯ ಭಾಗದ 200 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 2 ಎಕರೆ 39.5 ಗುಂಟೆ ಜಮೀನನ್ನು ಬಿಲ್ಡರ್‌ ಒಬ್ಬರ ಪರವಾಗಿ ಡಿನೋಟಿಫೈ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮ ಎಸಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ನಗರದ ಲಾಲ್‌ಬಾಗ್‌ಗೆ ಹೊಂದಿಕೊಂಡಿರುವ ಸಿದ್ದಾಪುರ ಗ್ರಾಮದ (ಈಗಿನ ಜಯನಗರ 1ನೇ ಬ್ಲಾಕ್‌) ಸರ್ವೇ ನಂ. 27/1, 28/4, 28/5 ಮತ್ತು 28/6ರಲ್ಲಿ ಉದ್ಯಾನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಿಟ್ಟಿದ್ದ 2 ಎಕರೆ 39.5 ಗುಂಟೆ ಜಮೀನನ್ನು ಅಶೋಕ್‌ ಧಾರೀವಾಲ್‌ ಎಂಬ ಖಾಸಗಿ ಬಿಲ್ಡರ್‌ ಪರವಾಗಿ 2014ರ ನ. 18ರಂದು ಡಿನೋಟಿಫೈ ಮಾಡಲಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಬದಲು “ರೀ ಡು’ ಎಂಬ ಪದ ಬಳಸಿ ಕಾನೂನು ಬಾಹಿರ ಕೃತ್ಯ ಎಸಗಿದ್ದಾರೆ ಎಂದು ಅವರು ದೂರಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಈ ಡಿನೋಟಿಫಿಕೇಷನ್‌ ರದ್ದುಗೊಳಿಸಿ ಸದರಿ ಭೂಮಿಯನ್ನು ಮತ್ತೆ ಉದ್ಯಾನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಿಡಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು. ಶೀಘ್ರದಲ್ಲೇ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಭೂಮಿ ರೀ ಡೂ ಹೆಸರಿನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ. ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಾಕಷ್ಟು ಲೋಪಗಳಾಗಿರುವ ಬಗ್ಗೆ ನ್ಯಾ.ಕೆಂಪಣ್ಣ ಆಯೋಗ ಪ್ರಸ್ತಾಪಿಸಿದ್ದು, ಈ ಕಾರಣಕ್ಕಾಗಿಯೇ ಸರ್ಕಾರ ವರದಿಯನ್ನು ಸದನದಲ್ಲಿ ಮಂಡಿಸಲು ಹಿಂದೇಟು ಹಾಕುತ್ತಿದೆ. ಸರ್ಕಾರಕ್ಕೆ ಧೈರ್ಯವಿದ್ದರೆ ವರದಿಯನ್ನು ಸದನದಲ್ಲಿ ಮಂಡಿಸಲಿ.
– ಆರ್‌.ಅಶೋಕ್‌, ವಿಧಾನಸಭೆ ಪ್ರತಿಪಕ್ಷ ಉಪನಾಯಕ

ಟಾಪ್ ನ್ಯೂಸ್

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kundapura: ಜೀವರಕ್ಷಣೆಗೆ ಊರ ಜನರ ಜಾಗೃತಿ

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.