ಮತ್ತೊಂದು ಮನೆಕುಸಿತ; ಅಪಾಯದಿಂದ ಪಾರು

Team Udayavani, Oct 19, 2017, 1:02 PM IST

bk-nagar.jpg

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಸೋಮವಾರ ತಡರಾತ್ರಿ ಯಶವಂತಪುರ ವಾರ್ಡ್‌ನ ಎರಡು ಅಂತಸ್ತಿನ ಕಟ್ಟಡ ಕುಸಿದಿದ್ದು, ಘಟನೆಯಲ್ಲಿ ಅದೃಷ್ಟವಶಾತ್‌ ಮೂವರು ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. 

ಯಶವಂತಪುರ ವಾರ್ಡ್‌ನ ಬಿ.ಕೆ. ನಗರದ ಸಾಯಿರಾಮ ಮಂದಿರ ಮುಂಭಾಗದಲ್ಲಿದ್ದ ಎರಡು ಅಂತಸ್ತಿನ ಕಟ್ಟಡದಲ್ಲಿ ರಾತ್ರಿ 9.30ರ ಸುಮಾರಿಗೆ ಕುಸಿತ ಕಂಡುಬಂದಿದೆ. ಇದನ್ನು ಗಮನಿಸಿದ ಅಕ್ಕ-ಪಕ್ಕದ ನಿವಾಸಿಗಳು ತಕ್ಷಣ ಆ ಮನೆಯಲ್ಲಿದ್ದ ಚಿನ್ನರಾಜು ಸೇರಿದಂತೆ ಮೂವರನ್ನು ಹೊರಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟೊತ್ತಿಗೆ ಕಟ್ಟಡದ ನೆಲಮಹಡಿ ಸಂಪೂರ್ಣವಾಗಿ ಕುಸಿದು, ಎರಡನೇ ಮಹಡಿ ಪಕ್ಕದ ಕಟ್ಟಡಕ್ಕೆ ಒರಗಿಕೊಂಡಿತು.

ಮನೆ ಮಾಲೀಕನ ವಿರುದ್ಧ ದೂರು: ಈ ವೇಳೆಗೆ ಕುಸಿದ ಕಟ್ಟಡ ಸಮೀಪದಲ್ಲೇ ಯಶವಂತಪುರ ಸದಸ್ಯ ಜಿ.ಕೆ. ವೆಂಕಟೇಶ್‌ ಮನೆ ಇದ್ದು, ಕೂಡಲೇ ಸ್ಥಳಕ್ಕೆ ಧಾವಿಸಿ ಮನೆಯಲ್ಲಿದ್ದ ಎರಡು ಸಿಲಿಂಡರ್‌ಗಳನ್ನು ಹೊರತೆಗೆದು ಎಚ್ಚರ ವಹಿಸಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು. 

ಶಿಥಿಲಗೊಂಡ ಕಟ್ಟಡ ಬಾಡಿಗೆ ನೀಡಿದ ಮನೆ ಮಾಲೀಕರ ವಿರುದ್ಧ ಯಶವಂತಪುರ ಠಾಣೆಯಲ್ಲಿ ದೂರು ದಾಖಲಾಗಿದೆ. 40 ವರ್ಷಗಳ ಕಟ್ಟಡವಾಗಿದ್ದರಿಂದ ಕುಸಿತವಾಗಿದೆ. ಅಲ್ಲದೇ ರಾಜಕಾಲುವೆಯ ತಡೆಗೋಡೆಗೆ ಆನಿಸಿ ಕಟ್ಟಡ ನಿರ್ಮಿಸಲಾಗಿದೆ ಹಾಗೂ ಕಳೆದ ಎರಡು ತಿಂಗಳಿಂದ ನಿರಂತ ರವಾಗಿ ಮಳೆ ಸುರಿಯು ತ್ತಿರುವುದರಿಂದ ಕಟ್ಟಡದ ಗೋಡೆಗಳು ಶಿಥಿಲಗೊಂಡು ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 

ಶಿಥಿಲಗೊಂಡ ಕಟ್ಟಡಗಳ ತೆರವುಗೊಳಿಸಲು ನೋಟಿಸ್‌ ನೀಡುವ ಕಾರ್ಯವನ್ನು ಕೂಡಲೇ ಆರಂಭಿಸಲಾಗಿದೆ ಎಂದು ಜಂಟಿ ಆಯುಕ್ತ ತಿಪ್ಪೇಸ್ವಾಮಿ ತಿಳಿಸಿದ್ದಾರೆ.  

ಚಿನ್ನ ಮಣ್ಣುಪಾಲು: ಕಟ್ಟಡದಲ್ಲಿ ಬಾಡಿಗೆ ಇದ್ದ ಚಿನ್ನರಾಜು ಕುಟುಂಬ ಗಾರ್ಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು ಚಿನ್ನರಾಜು ಅವರಿಗೆ ಮಗ ಮತ್ತು ಮಗಳು ಇದ್ದಾರೆ. ಕುಟುಂಬದ ಸದಸ್ಯರೆಲ್ಲ ದುಡಿದು ಖರೀದಿಸಿದ್ದ 23 ಗ್ರಾಂ ಚಿನ್ನ ಮಣ್ಣುಪಾಲಾಯಿತು ಎಂದು ಚಿನ್ನರಾಜು ಕಣ್ಣೀರಿಟ್ಟರು. 

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.