ಮತ್ತೊಬ್ಬ ಶಂಕಿತ ಉಗ್ರನ ಸೆರೆ
ಎನ್‌ಐಎ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ
Team Udayavani, Nov 18, 2021, 9:49 AM IST
Representative Image used
ಬೆಂಗಳೂರು: ಕರ್ನಾಟಕ ಸೇರಿ ದಕ್ಷಿಣ ಭಾರತದ ಯುವಕರನ್ನು ಐಸಿಸ್‌ಗೆ ನೇಮಿಸಿ ಸಿರಿಯಾಗೆ ಕಳು ಹಿಸಿ ಉಗ್ರ ಸಂಘಟನೆಯನ್ನು ವಿಸ್ತರಿಸುತ್ತಿದ್ದ ಬೆಂಗಳೂರಿನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ನಗರದ ಜುಹಾಬ್ ಹಮೀದ್ ಶಕೀಲ್ ಮನ್ನಾ ಅಲಿಯಾಸ್ ಜುಹೀಬ್ ಮನ್ನಾ (32) ಬಂಧಿತ. ಆರೋಪಿ ನಗರದಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದು, ಈ ಹಿಂದೆ ಬಂಧನಕ್ಕೊಳಗಾದ ಇರ್ಫಾನ್ ನಾಸಿರ್, ಮೊಹಮ್ಮದ್ ಶಹೀಬ್, ಮೊಹಮ್ಮದ್ ತೌಕೀರ್ ಜತೆ ಸೇರಿ ಐಸಿಸ್ ಸದಸ್ಯರ ಜತೆ ಸಂಪರ್ಕ ಹೊಂದಿದ್ದ.
ಅಲ್ಲದೆ, ಮೊಹಮ್ಮದ್ ತೌಕೀರ್ ಸೂಚನೆ ಮೇರೆಗೆ ಉಗ್ರ ಸಂಘಟನೆಗೆ ಯುವಕರ ನೇಮಕ, ಹಣ ಸಂಗ್ರಹ ಹಾಗೂ ಇತರೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗು ತ್ತಿದ್ದ. ಜತೆಗೆ ಮುನ್ನಾ, ತನಗೆ ಪರಿಚಯವಿರುವ ಯುವಕರ ಗುಂಪೊಂದನ್ನು ರಚಿಸಿಕೊಂಡು ದಕ್ಷಿಣ ಭಾರತದ ಮುಸ್ಲಿಂ ಯುವಕರಿಗೆ ಪ್ರಚೋದನೆ ನೀಡಿ ಐಸಿಸ್ ಸಂಘಟನೆಗೆ ನೇಮಕ ಮಾಡುತ್ತಿದ್ದ. ನಂತರ ಅವರನ್ನು ಸಂಘಟನೆಗೆ ಸೇರಿಕೊಳ್ಳುವಂತೆ ಸಿರಿಯಾಗೆ ಕಳುಹಿಸುತ್ತಿದ್ದ.
ಇದನ್ನೂ ಓದಿ:- ಗುಸ್ಸಾದಿ ನೃತ್ಯ ಮಾಡಿ ಸಂಭ್ರಮಿಸಿದ ಮಂಜಮ್ಮ ಜೋಗತಿ / ಕನಕರಾಜು ಪದ್ಮಶ್ರೀ ಪುರಸ್ಕೃತರು
ಅಲ್ಲದೆ, ಸಿರಿಯಾದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯದ ವಿಡಿಯೋಗಳನ್ನು ಯುವಕರಿಗೆ ತೋರಿಸಿ ಪ್ರಚೋದನೆ ನೀಡಿ ಸಂಘಟನೆಗೆ ಸೇರುವಂತೆ ಪ್ರೇರೆಪಿಸುತ್ತಿದ್ದ. ಈತ ಸುಮಾರು 10ಕ್ಕೂ ಅಧಿಕ ಮಂದಿ ಯುವಕನ್ನು ಸಿರಿಯಾಗೆ ಕಳುಹಿಸಿದ್ದಾನೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. 2020ರ ಆ.17ರಂದು ಬೆಂಗಳೂರು ಮೂಲದ ವೈದ್ಯ ಡಾ.ಅಬ್ದರ್ ರೆಹಮಾನ್ ಐಸಿಸ್ ಜತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಎನ್‌ಐಗೆ ಸಿಕ್ಕಿ ಬಿದ್ದಿದ್ದ.
ಈತನ ತಂಡದಲ್ಲಿ ಅಹಮ್ಮದ್ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್‌ನನ್ನು ಹತ್ತು ತಿಂಗಳ ಹಿಂದೆ ಬಂಧಿಸಲಾಗಿತ್ತು. 2021ರ ಏಪ್ರಿಲ್ 1ರಂದು ಈ ಇಬ್ಬರು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಕಳೆದ ತಿಂಗಳಷ್ಟೇ ಮೊಹಮ್ಮದ್ ತೌಕೀರ್‌ನನ್ನು ಬಂಧಿಸಲಾಗಿತ್ತು. ಈತನ ಮಾಹಿತಿ ಮೇರೆಗೆ ಮುನ್ನಾನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.