ಬೆಂಗಳೂರಲ್ಲಿ “ಆ್ಯಪಲ್‌’ ಘಟಕ: ಸಚಿವ ದೇಶಪಾಂಡೆ ಸಂತಸ


Team Udayavani, May 19, 2017, 11:46 AM IST

rv-deshpnde.jpg

ಬೆಂಗಳೂರು: ಜಗತ್ತಿನ ಪ್ರತಿಷ್ಠಿತ “ಆ್ಯಪಲ್‌’ ಸಂಸ್ಥೆ ತನ್ನ  ಉತ್ಪಾದನಾ ಘಟಕವನ್ನು ಬೆಂಗಳೂರಿನಲ್ಲಿ ಆರಂಭಿಸಲು ಮುಂದಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ ತಯಾರಾಗುವ ಆ್ಯಪಲ್‌ ಸಂಸ್ಥೆಯ ಮೊಬೈಲ್‌ಗ‌ಳು “ಮೇಡ್‌ ಇನ್‌ ಇಂಡಿಯಾ’ ಮುದ್ರೆಯೊಂದಿಗೆ ಗ್ರಾಹಕರ ಕೈ ಸೇರಲಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ “ಆ್ಯಪಲ್‌ ಸಂಸ್ಥೆಯ “ಐ- ಫೋನ್‌- ಎಸ್‌ಇ’ ಫೋನ್‌ಗಳು ಬೆಂಗಳೂರಿನಲ್ಲಿ ಉತ್ಪಾದನೆಯಾಗಿ “ಮೇಡ್‌ ಇನ್‌ ಇಂಡಿಯಾ’ ಮುದ್ರೆಯೊಂದಿಗೆ ಜಗತ್ತಿನ ಮಾರುಕಟ್ಟೆ ತಲುಪುವುದು ಅತ್ಯಂತ ಹೆಮ್ಮೆಯ ಸಂಗತಿ. ಅತ್ಯಂತ ಕಡಿಮೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಘಟಕ ಆರಂಭಿಸಲು ಸಂಸ್ಥೆ ಮುಂದಾಗಿರುವುದಕ್ಕೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ,’ ಎಂದು ಹೇಳಿದ್ದಾರೆ. 

“ಸಂಸ್ಥೆಯು ಬೆಂಗಳೂರಿನಲ್ಲಿ ಉತ್ಪಾದನೆ ಕೈಗೊಳ್ಳಲು ಅಗತ್ಯವಿರುವ ಸೌಲಭ್ಯ ಹಾಗೂ ಸಹಕಾರ ನೀಡುವ ಭರವಸೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದೆ. ಜತೆಗೆ ಸಂಬಂಧಪಟ್ಟವರೊಂದಿಗೆ ಹಲವು ಸುತ್ತಿನ ಸಭೆಗಳನ್ನೂ ನಡೆಸಲಾಗಿದೆ,’ ಎಂದು ಹೇಳಿದ್ದಾರೆ.

“ಆ್ಯಪಲ್‌ ಸಂಸ್ಥೆಯ ಘಟಕ ಸ್ಥಾಪನೆ ಅವಕಾಶಕ್ಕಾಗಿ ಹಲವು ರಾಜ್ಯಗಳು ಪೈಪೋಟಿ ನಡೆಸಿದ್ದವು. ಆದರೂ ಆ್ಯಪ್‌ ಸಂಸ್ಥೆ ಕರ್ನಾಟಕವನ್ನೇ ಆಯ್ಕೆ ಮಾಡಿಕೊಂಡಿದೆ. ಇದರೊಂದಿಗೆ ಬಂಡವಾಳ ಹೂಡಿಕೆಗೆ ರಾಜ್ಯ ಪ್ರಶಸ್ತ ತಾಣ ಎಂಬುದು ಸಾಬೀತಾಗಿದೆ. ರಾಜ್ಯಕ್ಕೆ ಬಹುರಾಷ್ಟ್ರೀಯ ಕಂಪನಿಗಳಿಂದ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಹೆಚ್ಚಿದೆ,’ ಎಂದೂ ಹೇಳಿದ್ದಾರೆ. 

“ಆ್ಯಪಲ್‌ನಂತಹ ಪ್ರತಿಷ್ಠಿತ ಸಂಸ್ಥೆಗಳು ತಮ್ಮ ತಯಾರಿಕಾ ಘಟಕಗಳನ್ನು ಬೆಂಗಳೂರಿನಲ್ಲಿ ಆರಂಭಿಸುತ್ತಿರುವುದರಿಂದ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗುವ ಜತೆಗೆ ಸರ್ಕಾರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಹರಿದುಬರಲಿದೆ,’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.