ಯಕ್ಷಗಾನ ಫೆಲೋಶಿಪ್ಗೆ ಅರ್ಜಿ
Team Udayavani, Oct 12, 2017, 7:05 AM IST
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2017-18ನೇ ಸಾಲಿನಲ್ಲಿ 5 ತಿಂಗಳ ಸಂಶೋಧನಾ ಅಧ್ಯಯನ ಮಾಡಿ ಪ್ರಬಂಧ ಮಂಡಿಸಲು ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಸಂಶೋಧನಾ ಕಾರ್ಯಕ್ಕಾಗಿ ಒಬ್ಬ ಸಂಶೋಧನಾ ಅಭ್ಯರ್ಥಿಗೆ 90 ಸಾವಿರ ರೂ. ಹಾಗೂ ಮಾರ್ಗದರ್ಶಕರ ಗೌರವ ಸಂಭಾವನೆ 10 ಸಾವಿರ ರೂ. ನಿಗದಿಪಡಿಸಿದೆ.
ಅರ್ಜಿ ಸಲ್ಲಿಸುವವರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಪದವೀಧರರಾಗಿರಬೇಕು.ಆಸಕ್ತರು ಆಯ್ಕೆ ಮಾಡಿಕೊಳ್ಳುವ ಅಧ್ಯಯನ ವಿಷಯದ ಬಗ್ಗೆ ನಾಲ್ಕು ಪುಟಗಳ ಸಾರಲೇಖ (ಸಾರಾಂಶ) ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಅ.31 ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.
ಮಾಹಿತಿಗೆ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, 2ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 2 ಅವರಿಗೆ ಅರ್ಜಿಯನ್ನು ಕಳುಹಿಸಬಹುದಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.