ಇನ್ನೆರೆಡು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ?
Team Udayavani, Mar 8, 2020, 11:37 AM IST
ಬೆಂಗಳೂರು: “ರಾಜ್ಯ ಕಾಂಗ್ರೆಸ್‌ಗೆ ಅಧ್ಯಕ್ಷರನ್ನು ನೇಮಿಸುವಂತೆ ಒತ್ತಾಯ ಮಾಡಿದ್ದು ಇನ್ನೆರಡು ದಿನದಲ್ಲಿ ಈ ಕುರಿತು ಸ್ಪಷ್ಟತೆ ಸಿಗಲಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದಿಂದ ನಗರದ ಗುರುನಾನಕ್ ಭವನದಲ್ಲಿ ಏರ್ಪಡಿಸಿದ್ದ ಜಾಗೃತಿ ಸಾಮಾಜಿಕ ಜಾಲತಾಣ ಕಾರ್ಯಾಗಾರ ಮತ್ತು ಕರ್ನಾಟಕದ ಧ್ವನಿ ಅಭಿಯಾನದಲ್ಲಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗೆಗಿನ ಗೊಂದಲ ಬಗೆಹರಿಸುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದ್ದೇವೆ. ಈ ಬಗ್ಗೆ ಚರ್ಚೆ ಮಾಡಲು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುವಂತೆ ನಾವೂ ಒತ್ತಾಯಿಸಿದ್ದೇವೆ. ದಿನೇಶ್ ಗುಂಡೂರಾವ್ ಅವರೇ ಮುಂದುವರಿಯಲಿ ಅಥವಾ ಹೊಸ ಅಧ್ಯಕ್ಷರನ್ನಾದರೂ ನೇಮಕ ಮಾಡಲಿ. ಬೇಗ ಗೊಂದಲ ಬಗೆಹರಿಸಿ ಎಂದು ಮನವಿ ಮಾಡಿದ್ದೇವೆಂದರು.
ಈ ಮುನ್ನ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಶ್ರಮ ಹಾಗೂ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಈ ಬಗ್ಗೆ ನಮ್ಮ ಯುವಕರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಾ, ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗುತ್ತಿದ್ದಾರೆ. ಇದರ ವಿರುದ್ಧ ಹೋರಾಡಬೇಕೆಂದರು.
ಕಾರ್ಯಕ್ರಮದಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ರೋಹನ್ ಗುಪ್ತಾ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್, ನಟರಾಜ್‌ಗೌಡ, ಮಂಜುನಾಥ ಅದ್ದೆ, ಸೂರ್ಯ ಮುಕುಂದ ರಾಜ್, ಅಹಮದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.