ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಿಸಿ
Team Udayavani, Jul 13, 2018, 11:53 AM IST
ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಸ್ತಕ ಸಾಲಿನಿಂದ ರಂಗ ಶಿಕ್ಷಕರನ್ನು ನೇಮಿಸಿ, ರಂಗ ಪದವೀಧರರಿಗೆ ಉದ್ಯೋಗ ಒದಗಿಸುವಂತೆ ಕರ್ನಾಟಕ ನಾಟಕ ಅಕಾಡೆಮಿ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್, ನೀನಾಸಂ, ಸಾಣೇಹಳ್ಳಿ ಒಳಗೊಂಡಂತೆ ರಾಜ್ಯದ ವಿವಿಧ ರಂಗಶಾಲೆ ಹಾಗೂ ವಿಶ್ವವಿದ್ಯಾಲಯಗಳಿಂದ ಪ್ರತಿ ವರ್ಷ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡಿಪ್ಲೊಮಾ ಹಾಗೂ ಪದವಿ ಪಡೆದು ಹೊರ ಬರುತ್ತಿದ್ದಾರೆ.
ಆದರೆ ಉದ್ಯೋಗ ಅವಕಾಶಗಳೇ ಇಲ್ಲದ ಕಾರಣ ರಂಗ ಪದವೀಧರರ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸರ್ಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ, ಅನುದಾನಿತ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಶಾಲಾ ಶಿಕ್ಷಣದಲ್ಲಿ ರಂಗಕಲೆ ಅಳವಡಿಸಬೇಕು, ರಂಗಕಲೆ ಮೂಲಕ ಶಿಕ್ಷಣ ನೀಡಬೇಕು, ರಂಗಭೂಮಿ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂಬುದು ರಂಗಕರ್ಮಿಗಳ ಬಹುದಿನಗಳ ಬೇಡಿಕೆಯಾಗಿದೆ. ಇದರಿಂದ ಶಿಕ್ಷಣದ ಚಿತ್ರಣವೇ ಬದಲಾಗುತ್ತದೆ. ಈ ನಿಟ್ಟಿನಲ್ಲಿ ರಂಗ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ರಂಗಾಸಕ್ತರು ಅನೇಕ ವರ್ಷದಿಂದ ಸರ್ಕಾರಕ್ಕೆ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದಾರೆ.
ದಶಕದ ಹಿಂದೆ 54 ರಂಗ ಶಿಕ್ಷಕರನ್ನು ಆಯ್ಕೆ ಮಾಡಿದ್ದು ಬಿಟ್ಟರೆ ಇದುವರೆಗೂ ನೇಮಕ ಪ್ರಕ್ರಿಯೆ ನಡೆದಿಲ್ಲ ಎಂದು ಮಾಹಿತಿ ನೀಡಿದರು. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ 800ಕ್ಕೂ ಅಧಿಕ ವಸತಿ ಶಾಲೆಗಳಲ್ಲಿ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಸಮಾಜ ಕಲ್ಯಾಣ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಅಕಾಡೆಮಿಯಿಂದ ಪತ್ರ ಬರೆಯಲಾಗಿತ್ತು.
ಸಚಿವರೂ ಸ್ಪಂದಿಸಿದ್ದರು. ಇದೀಗ ಸಮ್ಮಿಶ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಲೋಕೇಶ್ ಮನವಿ ಮಾಡಿದರು. ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಬಸವಲಿಂಗಯ್ಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಹಾಗೂ ನಾಟಕ ಅಕಾಡೆಮಿ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.