ವರದಿ ಬಂದ ನಂತರ ಸೂಕ್ತ ಕ್ರಮ: ಡಾ.ಜಿ. ಪರಮೇಶ್ವರ್
Team Udayavani, Jul 21, 2018, 6:10 AM IST
ಬೆಂಗಳೂರು: ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಈಗಾಗಲೇ ಹಿರಿಯ ಪೋಲಿಸ್
ಅಧಿಕಾರಿಗಳು ತನಿಖೆ ಆರಂಭಿಸಿದ್ದು, ವರದಿ ಬಂದ ನಂತರ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ,ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಸಾವಿನ ಬಗ್ಗೆ ಅವರ ಸಹೋದರ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಇದರ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶೀರೂರು ಶ್ರೀಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ನಾನು ಮಾತನಾಡುವುದು ಸರಿಯಲ್ಲ.
– ಕುಮಾರಸ್ವಾಮಿ, ಸಿಎಂ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.