ಪ್ರಭಾವಿಗಳಿಗೆ ಮಣಿದು ಬಡವರ ಮನೆ ತೆರವುಗೊಳಿಸುವಿರಾ?
Team Udayavani, Aug 31, 2018, 12:10 PM IST
ಬೆಂಗಳೂರು: ಪ್ರಭಾವಿಗಳ ಒತ್ತಡಕ್ಕೆ ಮಣಿದು ಬಡವರ ಮನೆಗಳನ್ನು ತೆರವುಗೊಳಿಸುತ್ತೀರಾ? ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಬೆಳ್ಳಂದೂರಿನ ಮಂತ್ರಿ ವಸತಿ ಸಮುತ್ಛಯದ ಸಮೀಪವಿರುವ ಮನೆಗಳನ್ನು ತೆರವುಗೊಳಿಸುವಂತೆ, ಅಲ್ಲಿನ ನಿವಾಸಿಗಳಿಗೆ ಪಾಲಿಕೆ ನೋಟಿಸ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರಿದ್ದ ಏಕಸದಸ್ಯ ಪೀಠ, ಮಹಾನಗರ ಪಾಲಿಕೆ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ಜತೆಗೆ, ಅರ್ಜಿದಾರರ ಮನೆಗಳನ್ನು ತೆರವುಗೊಳಿಸುವವಂತೆ ಅಲ್ಲಿನ ನಿವಾಸಿಗಳಿಗೆ ಪಾಲಿಕೆ ನೀಡಿರುವ ನೋಟಿಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಪೀಠ, ಪ್ರತಿವಾದಿಗಳಾದ ಮಾರತ್ತಹಳ್ಳಿ ಉಪವಿಭಾಗದ ಪಾಲಿಕೆಯ ಸಹಾಯಕ ಇಂಜಿನಿಯರ್, ಮಂತ್ರಿ ಎಸ್ಪಾನಾ ರೆಸಿಡೆನ್ಷಿಯಲ್ ಅಪಾರ್ಟ್‌ಮೆಂಟ್ ಮಾಲೀಕರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಅರ್ಜಿದಾರರು ಹಲವು ವರ್ಷಗಳಿಂದ ಶೆಡ್, ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ಇದೀಗ ಮನೆ ತೆರವು ಮಾಡುವಂತೆ ಪಾಲಿಕೆ ನೋಟಿಸ್ ನೀಡಿದೆ. ಪ್ರತಿವಾದಿಯಾಗಿರುವ ಅಪಾರ್ಟ್‌ಮೆಂಟ್ ನಿವಾಸಿಗಳ ಒತ್ತಡಕ್ಕೆ ಮಣಿದು ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
ಬೆಳ್ಳಂದೂರಿನ ಮಂತ್ರಿ ಅಪಾರ್ಟ್‌ಮೆಂಟ್ ಸಮೀಪವಿರುವ ಮನೆಗಳನ್ನು ತೆರವುಗೊಳಿಸಲು ಬಿಬಿಎಂಪಿ ಆಗಸ್ಟ್ 24ರಂದು ನೀಡಿದ್ದ ನೋಟಿಸ್ ರದ್ದು ಮಾಡುವಂತೆ ಕೋರಿ ಜೈನಬಿ ಸೇರಿ 10 ಮಂದಿ ಹೈಕೋರ್ಟ್ ಮೊರೆಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
Unique Achiever: ಗಡಿನಾಡಿನ ಅನನ್ಯ ಸಾಧಕ ಪ್ರೊ| ಪಿ. ಶ್ರೀಕೃಷ ಭಟ್
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.