Arrested: ಕೆಲಸ ಕೊಡಿಸುತ್ತೇವೆಂದು ವಂಚಿಸಿದ ದಂಪತಿ ಬಂಧನ
Team Udayavani, Feb 21, 2024, 12:10 PM IST
ಬೆಂಗಳೂರು: ಸರ್ಕಾರಿ ಸೌಮ್ಯದ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವು ದಾಗಿ ಯುವಕರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬೊಮ್ಮಸಂದ್ರದ ಪ್ರಕಾಶ್ ಹಾಗೂ ಮಧು ಬಂಧಿತ ದಂಪತಿ. ಬಂಧಿತರಿಂದ 2 ಲಕ್ಷ ರೂ. ನಗದು, ವಿವಿಧ ಕಂಪನಿಯ 4 ಮೊಬೈಲ್, ಬೈಕ್, 6 ಬ್ಯಾಂಕ್ ಖಾತೆಗಳಿಗೆ ಸೇರಿದ 15 ಕ್ರೆಡಿಟ್, ಡೆಬಿಟ್ ಹಾಗೂ ಚೆಕ್ ಬುಕ್‌ಗಳು, 11 ವಿವಿಧ ಕಂಪನಿಯ ಕೈಗಡಿಯಾರ, ಸಿಮ್ ಕಾರ್ಡ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ 6 ಲಕ್ಷ ರೂ. ಪಡೆದುಕೊಂಡಿದ್ದರು. ಕೆಲಸವನ್ನೂ ಕೊಡಿಸಿದೆ, ಹಣ ವಾಪಸ್ ನೀಡದೆ ವಂಚಿಸಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು. ಅದನ್ನು ಆಧರಿಸಿ ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಮೂರು ಪ್ರಕರಣಗಳು ಪತ್ತೆಯಾಗಿವೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.