ಮೊಬೈಲ್‌ಗಾಗಿ ಯುವಕನ ಕೊಂದವರ ಸೆರೆ

Team Udayavani, Jul 21, 2019, 3:03 AM IST

mobile-gagi]

ಬೆಂಗಳೂರು: ಗಾಂಜಾ ಅಮಲಿನಲ್ಲಿ ಮೊಬೈಲ್‌ಗಾಗಿ ಆಂಧ್ರಪ್ರದೇಶ ಮೂಲದ ಯುವಕನನ್ನು ಕೊಂದಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಹುಸೇನ್‌ ಅಲಿಯಾಸ್‌ ಸದ್ದಾಂ (20) ಮತ್ತು ಮೊಹಮದ್‌ ಸಿದ್ದಿಕ್‌ (19) ಬಂಧಿತರು. ಆರೋಪಿಗಳು ಜು.8ರಂದು ರಾತ್ರಿ 9 ಗಂಟೆ ಸುಮಾರಿಗೆ ಆಂಧ್ರಪ್ರದೇಶ ಮೂಲದ ಜ್ಞಾನೇಂದ್ರ ರೆಡ್ಡಿ (28) ಎಂಬಾತನಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು.

ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿರುವ ಜ್ಞಾನೇಂದ್ರ ರೆಡ್ಡಿ, ನಗರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಜು.8ರಂದು ರಾತ್ರಿ 9 ಗಂಟೆಗೆ ನಾಗವಾರ ಸೇತುವೆ ಕೆಳ ಭಾಗದಲ್ಲಿ ನಿಂತು ತಮ್ಮ ಸ್ನೇಹಿತೆ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಸೇತುವೆ ಮುಂಭಾಗದ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದ ಗೆಳತಿಗೆ ಹೊರಗಡೆ ಬರುವಂತೆ ಹೇಳಿದ್ದರು.

ಗೆಳತಿ ಕಣ್ಣೆದುರೇ ಕೊಲೆ: ಗೆಳತಿ, ಪಿಜಿಯ ಕಿಟಕಿಯಿಂದಲೇ ಜ್ಞಾನೇಂದ್ರನನ್ನು ನೋಡುತ್ತಾ ಮಾತನಾಡುತ್ತಿದ್ದರು. ಈ ವೇಳೆ ಗಾಂಜಾ ಅಮಲಿನಲ್ಲಿ ಅಲ್ಲಿಗೆ ಬಂದ ಆರೋಪಿಗಳು, ಜ್ಞಾನೇಂದ್ರನ ಮೊಬೈಲ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಆತ ಪ್ರತಿರೋಧ ತೋರಿದಾಗ ಆರೋಪಿಗಳು ಆತನ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು.

ಕೃತ್ಯವನ್ನು ನೋಡಿದ ಸ್ನೇಹಿತೆ ಕೂಡಲೇ ತನ್ನ ಮತ್ತೂಬ್ಬ ಸ್ನೇಹಿತೆ ಜತೆ ಕೆಳಗೆ ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಜ್ಞಾನೇಂದ್ರನನ್ನು ಸ್ಥಳೀಯರ ನೆರವಿನೊಂದಿಗೆ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ನೀಡಿದ ವೈದ್ಯರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದರು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಂಪಿಗೆಹಳ್ಳಿ ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಸದ್ದಾಂ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮೊಬೈಲ್‌ ಕಳವು, ದರೋಡೆ ಪ್ರಕರಣಗಳು ದಾಖಲಾಗಿವೆ. ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ, ತನ್ನ ಸಹಚರರನ ಜತೆ ಸೇರಿ ಗಾಂಜಾ ಸೇವಿಸಿ, ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.