ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಬೆರಳಚ್ಚು ನೀಡಿತುಕಳ್ಳರ ಸುಳಿವು | ಹಲವು ಬಾರಿ ಜೈಲು ಸೇರಿದ್ದ ಆರೋಪಿ

Team Udayavani, Sep 27, 2020, 12:27 PM IST

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಬೆಂಗಳೂರು: ಎಂಇಎಸ್‌ ರಸ್ತೆಯ ವಿನೋದ್‌ ಬ್ಯಾಂಕರ್ಸ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಸೆ. 20ರಂದು ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಅಂತರಾಜ್ಯ ಕಳ್ಳರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಘಟನಾ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿ ಹಾಗೂ ಇತರ ಠಾಣೆಗಳಲ್ಲಿನ ಹಳೆ ಆರೋಪಿಗಳ ಬೆರಳಚ್ಚು ಮುದ್ರೆಯ ಜಾಡು ಹಿಡಿದು ಇನ್ಸ್‌ ಪೆಕ್ಟರ್‌ ಎ .ಗುರುಪ್ರಸಾದ್‌ ನೇತೃತ್ವದ ತಂಡ ಮೂವರನ್ನೂ ಸೆರೆ ಹಿಡಿದಿದೆ.

ರಾಜಸ್ಥಾನ ಮೂಲದ ಗೋಪಾರಾಮ್‌ (28) ಜಿತೇಂದರ್‌ ಮಾಳಿ (31) ವೀರ್‌ ಮಾ ರಾವ್‌ (32) ಬಂದಿತರು. ಆರೋಪಿಗಳಿಂದ 90 ಲಕ್ಷ ರೂ. ಮೌಲ್ಯದ ಒಂದು ಕೆ.ಜಿ 750 ಗ್ರಾಂ ಆಭರಣ,3.5 ಲಕ್ಷ ರೂ. ನಗದು ಎರಡು ಬೈಕ್‌, ಒಂದು ಏರ್‌ಗನ್‌ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ಗೋಪಾರಾಮ್‌ ಈ ಹಿಂದೆಯೂ ಹಲವು ಜ್ಯುವೆಲರಿ ಶಾಪ್‌ಗಳಲ್ಲಿ ಕಳ್ಳತನ ಮಾಡಿದ್ದ ಎಂಬುದು ಬಯಲಾಗಿದೆ.

2004ರಲ್ಲಿ ಯಲಹಂಕ ಠಾಣಾ ವ್ಯಾಪ್ತಿ,2016ರಲ್ಲಿ ಬಾಗಲೂರು ಠಾಣಾ ವ್ಯಾಪ್ತಿ, ತಾನು ಕೆಲಸ ಮಾಡುತ್ತಿದ್ದ ಜ್ಯುವೆಲರಿ ಶಾಪ್‌ನಲ್ಲಿ ಲಕ್ಷಾಂತರ ರೂ. ಮೌಲ್ಯದ ಆಭರಣ ದೋಚಿ ಜೈಲಿಗೆ ಸೇರಿದ್ದ.  ಜಾಮೀನಿನ ಮೇರೆಗೆ ಜೈಲಿಂದ ಬಿಡುಗಡೆಯಾದ ಬಳಿಕ ಡೆಲೆವರಿ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದ ಗೋಪಾರಾಮ್‌ ಕೆಲ ತಿಂಗಳ ಹಿಂದೆ ಫ‌ುಡ್‌ ಡೆಲೆವರಿ ನೀಡಲು ಹೋದಾಗ ವಿನೋದ್‌ ಬ್ಯಾಂಕರ್ಸ್‌ನಲ್ಲಿ ಬೆಳಗ್ಗೆ ಹೊತ್ತು ಹೆಚ್ಚಿನ ಜನರು ಇಲ್ಲದಿರುವುದನ್ನು ಗಮನಿಸಿದ್ದ. ಜತೆಗೆ, ಭದ್ರತೆಯೂ ಅಷ್ಟಾಗಿ ಇಲ್ಲದಿರುವುದನ್ನು ತಿಳಿದು ತನ್ನ ಸ್ನೇಹಿತರಾದ ಜಿತೇಂದರ್‌ ಹಾಗೂ ಮೀರ್‌ ಮಾ ಜತೆ ಸೇರಿ ಆಭರಣ ಕಳವು ಮಾಡುವ ಬಗ್ಗೆ ಸಂಚು ರೂಪಿಸಿದ್ದ.

ಸೆ. 20ರಂದು ಮಳಿಗೆಗೆ ಬಂದು ಚಿನ್ನದ ಸರಬೇಕೆಂದು ಕೇಳಿ ಅದನ್ನು ಮಾಡಿಕೊಡಲು ಸಾವಿರ ರೂ. ಅಡ್ವಾನ್ಸ್‌ ನೀಡಿದರು. ಬಳಿಕ ಅದೇದಿನ ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಬಂದು ಚಿನ್ನದ ಸರ ಕೇಳಿದರು. ಅದನ್ನು ತೋರಿಸುತ್ತಲೇ ಉಂಗುರ ಬೇಕು ಎಂದರು. ಅದನ್ನು ತರಲು ಅಂಗಡಿ ಕೆಲಸದಾತ ರಾಹುಲ್‌ ಒಳ ಹೋದಾಗ ಹಿಂದೆ ನುಗ್ಗಿ ಪಿಸ್ತೂಲ್‌ ತೋರಿಸಿ ಚಿನ್ನಾಭರಣ ದೋಚಿದ್ದರು ಎಂದು ಪೊಲೀಸರು ಹೇಳಿದರು

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.